CrimeNEWSನಮ್ಮಜಿಲ್ಲೆ

ಮನೆಯಲ್ಲಿ ಅಡಗಿ ಕುಳಿತ ಚಿರತೆ: ಸೆರೆ ಹಿಡಿದ ಅರಣ್ಯ ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಆಹಾರ ಹರಸಿ ಜಾಲಮಂಗಲ ಗ್ರಾಮಕ್ಕೆ ಲಗ್ಗೆಯಿಟ್ಟ ಗ್ರಾಮದ ಮನೆಯೊಂದರಲ್ಲಿ ಅಡಗಿ ಕುಳಿತು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ತಾಲೂಕಿನ ಜಾಲಮಂಗಲ ಗ್ರಾಮಕ್ಕೆ ತಡರಾತ್ರಿ ಆಹಾರ ಅರಸಿ ಬಂದ ಚಿರತೆ ಗ್ರಾಮದ ರೇವಣ್ಣ ಎಂಬುವರ ಮನೆಗೆ ನುಗ್ಗಿತ್ತು. ಮನೆ ಒಳಗೆ ಹೋದ ಚಿರತೆ ಗಮನಿಸಿದ ಮನೆಯವರು ಮನೆ ಬಾಗಿಲು ಮುಚ್ಚಿ ಚಿರತೆಯನ್ನು ಮನೆಯೊಳಗೆ ಸೆರೆಯಾಗಿಸಿದರು.

ಗ್ರಾಮದಲ್ಲಿ ರೇವಣ್ಣ ಅವರು ನೂತನವಾಗಿ ಮನೆಯನ್ನು ನಿರ್ಮಾಣ ಮಾಡುತ್ತಿದ್ದು, ಕೆಳ ಅಂತಸ್ತಿನಲ್ಲಿ ವಾಸವಾಗಿದ್ದರು ಮಹಡಿ ಮೊದಲ ಮನೆ ಶೇ.95 ರಷ್ಟು ಕೆಲಸ ಕೂಡ ಮುಗಿದಿದೆ. ಆದರೆ ಮನೆಯ ಬಾಗಿಲನ್ನು ರೇವಣ್ಣ ಅವರು ಹಾಕಿರಲಿಲ್ಲ ಹಾಗಾಗಿ ಚಿರತೆ ಮನೆಯೊಳಗೆ ಹೊಕ್ಕಿತ್ತು.

ಮನೆಯೊಳಗೆ ಚಿರತೆ ಹೋಗಿದ್ದನ್ನು ಗಮನಿಸಿದ ಮನೆಯವರು ಮನೆಯ ಬಾಗಿಲನ್ನು ಮುಚ್ಚಿ ಚಿರತೆ ಹೊರ ಬಾರದಂತೆ ಭದ್ರಪಡಿಸಿದ್ದಾರೆ. ನಂತರ ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ‌. ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆ ಮನೆಯಿಂದ ಹೊರ ಬಾರದಂತೆ ಎಚ್ಚರಿಕೆ ವಹಿಸಿದರು.

ಇತ್ತ ಬನ್ನೇರುಘಟ್ಟದ ಅರವಳಿಕೆ ವೈದ್ಯರಿಗೂ ವಿಷಯ ಮುಟ್ಟಿಸಿ ಅವರನ್ನು ಸ್ಥಳಕ್ಕೆ ಕರೆಸಿಕೊಂಡರು. ಬನ್ನೇರುಘಟ್ಟದಿಂದ ಬಂದ ಅರವಳಿಕೆ ತಜ್ಞ ಡಾ. ಉಮಾಶಂಕರ್‌ ಮನೆಯ ಕಿಟಕಿಯಿಂದ ಚಿರತೆಗೆ ಅರವಳಿಕೆ ನೀಡಿದ್ದರು. ತದನಂತರ ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬಳಸಿ ಚಿರತೆಯನ್ನು ಹಿಡಿದು ಬೋನಿನಲ್ಲಿ ಬಂಧಿಸಿದರು. ಇನ್ನು ಚಿರತೆ ಆರೋಗ್ಯವಾಗಿದೆ, 5 ವರ್ಷದ ಹೆಣ್ಣು ಚಿರತೆಯಾಗಿದೆ ಎಂದು ಡಾ. ಉಮಾಶಂಕರ್‌ ತಿಳಿಸಿದರು.

ಇನ್ನು ಸೆರೆಯಿಡಿದ ಚಿರತೆಗೆ ಸೂಕ್ತ ಚಿಕಿತ್ಸೆ ನೀಡಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ನಿರ್ದೇಶನ ಪಡೆದು ರಾಷ್ಟ್ರೀಯ ಸಂರಕ್ಷಿತ ಅರಣ್ಯದಲ್ಲಿ ಬಿಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಬೋನ್ ಅಳವಡಿಸಿ ಚಿರತೆ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಡಿಎಫ್ಒ ದೇವಾರಾಜ್ ತಿಳಿಸಿದರು‌.

ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಅದರಲ್ಲೂ ಚಿರತೆಗಳ ಉಪಟಳ ಜಾಸ್ತಿಯಾಗಿದೆ. ಜಾಲಮಂಗಲ ಗ್ರಾಮದಲ್ಲಿ ಈಗಾಗಲೇ ಮೂರು ಚಿರತೆಗಳನ್ನು ಸೆರೆ ಹಿಡಿಯಲಾಗಿದೆ. ಗ್ರಾಮದ ಸಮೀಪದ ಅರಣ್ಯದಲ್ಲಿ ಚಿರತೆಗಳು ಸಾಕಷ್ಟಿವೆ. ಹಾಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಎಚ್ಚೆತ್ತುಕೊಳ್ಳಬೇಕಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜು ಹೇಳಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು