NEWSನಮ್ಮರಾಜ್ಯರಾಜಕೀಯ

ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು (ಅ.27) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು ಸಂಯೋಜಿತ) ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ರಾಜ್ಯ ರಾಜಧಾನಿಯ ಮೌರ್ಯ ವೃತ್ತದ ಬಳಿಯ ಗಾಂಧಿ ಪ್ರತಿಮೆ ಎದುರು ಆರಂಭವಾಗಿದೆ.

ಈ ವೇಳೆ ಮಾತನಾಡಿದ ಸಿಐಟಿಯು ಅಧ್ಯಕ್ಷ ಎಚ್.ಡಿ.ರೇವಪ್ಪ, ಸಾರಿಗೆಯ ನಾಲ್ಕು ನಿಗಮಗಳ ನೌಕರರನ್ನು ಆಡಳಿಯ ವರ್ಗ ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ. ಜತೆಗೆ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಏಪ್ರಿಲ್‌ನಲ್ಲಿ ನಡೆದ ಮುಷ್ಕರದ ವೇಳೆ ಕಾರಣವಿಲ್ಲದೆ ಸಾವಿರಾರು ನೌಕರರನ್ನು ಏಕಾಏಕಿ ವಜಾ, ವರ್ಗಾವಣೆ ಮತ್ತು ಅಮಾನತಿನ ಶಿಕ್ಷೆ ನೀಡಿದೆ.

ಜತೆಗೆ ಹಲವಾರು ನೌಕರರ ವಿರುದ್ಧ ಪೊಲೀಸ್‌ ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ. ಇನ್ನು ಸಚಿವರು ನಾವು ಭೇಟಿ ಮಾಡಿ ನೌಕರರ ಸಮಸ್ಯೆ ನಿವಾರಿಸಿ, ನ್ಯಾಯಯುತ ಬೇಡಿಕೆಗಳ ಈಡೇರಿಕೆ ಮುಂದಾಗಬೇಕು ಎಂದು ಕೇಳಿಕೊಂಡಾಗ ಒಪ್ಪಿಕೊಂಡಿದ್ದಾರೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.

ಇನ್ನು ಸಚಿವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತನ್ನು ಕೊಡದ ಅಧಿಕಾರಿಗಳು ನೌಕರರನ್ನು ವಾಪಸ್‌ ತೆಗೆದುಕೊಳ್ಳಲು ತಯಾರಿಲ್ಲ. ಇಂಥ ಅಧಿಕಾರಿಗಳನ್ನು ನಿಯಂತ್ರಿಸುವಲ್ಲಿ ಸಚಿವರು ಕೂಡ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಏಪ್ರಿಲ್‌ನಲ್ಲಿ ನಡೆದ ಮುಷ್ಕರದ ವೇಳೆ ಸೇವೆಯಿಂದ ವಜಾ ಮಾಡಿರುವ ಎಲ್ಲಾ ಕಾರ್ಮಿಕರನ್ನು ಕೆಲಸಕ್ಕೆ ಪುನರ್ ನೇಮಕ ಮಾಡಬೇಕು. ವರ್ಗಾವಣೆ ಮಾಡಿರುವ ಎಲ್ಲಾ ಕಾರ್ಮಿಕರನ್ನು ವಾಪಸ್‌ ತರಬೇಕು. ಅಮಾನತು ತೆರವು ಮಾಡಿ ಎಲ್ಲಾ ಶಿಸ್ತು ಪ್ರಕ್ರಿಯೆಗಳನ್ನು ರದ್ದು ಮಾಡಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈ  ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಇಂದಿನಿಂದ ಆರಂಭಿಸಲಾಗಿದೆ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಮಂಜುನಾಥ್ ತಿಳಿಸಿದರು.

ಸಾರಿಗೆ ನಿಗಮಗಳು ಈ ರಾಜ್ಯದ ಜನರಿಗೆ ಉತ್ತಮ ಸಾರಿಗೆ ಸೌಕರ್ಯ ಕಲ್ಪಿಸುವ ಸಂಸ್ಥೆಗಳಾಗಿದ್ದು, ಈ ಉದ್ದೇಶ ಸಫಲವಾಗಬೇಕಾದರೆ ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು ನೆಮ್ಮದಿಯಿಂದ ಕರ್ತವ್ಯ ನಿರ್ವಹಿಸುವ ವಾತಾವರಣ ಇರಬೇಕು. ಸಂಸ್ಥೆಗಳಲ್ಲಿ ಕಾರ್ಮಿಕ ಸ್ನೇಹಿ ಆಡಳಿತ ಇದ್ದು, ಉತ್ತಮ ಕೈಗಾರಿಕಾ ಬಾಂಧವ್ಯ ಇದ್ದರೆ ಮಾತ್ರ ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸುವ ಉದ್ದೇಶ ಈಡೇರಲು ಸಾಧ್ಯ ಎಂದರು.

ಮುಷ್ಕರದ ಅವಧಿಯನ್ನು ಗೈರು-ಹಾಜರಿ ಎಂದು ಪರಿಗಣಿಸಿ 2000 ರಿಂದ ರೂ.10,000 ರೂ.ಗಳವರೆಗೆ ಹತ್ತಾರು ಸಾವಿರ ಕಾರ್ಮಿಕರಿಗೆ ದಂಡ ವಿಧಿಸುವುದು, ಮೇ-ಜೂನ್ ತಿಂಗಳು 2021 ನಿವೃತಿಯಾದ ಕಾರ್ಮಿಕರಿಗೆ 5 ಇಂಕ್ರಿಮೆಂಟ್ ಕಡಿತ ಮಾಡಲಾಗಿದೆ. ದೌರ್ಜನ್ಯ ಹಾಗೂ ಕಿರುಕುಳಗಳು ದಿನೇ ದಿನೇ ಹೆಚ್ಚಳವಾಗುತ್ತಲೇ ಇವೆ. ಇಂತಹ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸುತ್ತೇವೆ ಎಂದು ಹೇಳಿದರು.

ಸಚಿವರು ವಿಧಾನಸಭೆ ಅಧಿವೇಶನದಲ್ಲಿಯೂ ಸಹ ಸಾರಿಗೆ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಘೋಷಿಸಿದರು. ಸಾರಿಗೆ ನಿಗಮಗಳ ಕಾರ್ಮಿಕರು ಸಚಿವರ ಹೇಳಿಕೆಯಿಂದ ಸಂಭ್ರಮಗೊಂಡರು. ಆದರೆ ಬಿಎಂಟಿಸಿ ಆಡಳಿತವರ್ಗ ಈ ನಡುವೆಯೇ ಪುನಃ 57 ಕಾರ್ಮಿಕರನ್ನು ಸೆ. 27 ರಂದು ವಜಾಗೊಳಿಸಿತು ಎಂದು ಕಿಡಿಕಾರಿದರು.

ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರು ಹಲವು ಬಾರಿ ಬಹಿರಂಗವಾಗಿ ಮತ್ತು ಕಾರ್ಮಿಕ ಸಂಘಗಳ ಮುಖಂಡರ ಸಮ್ಮುಖದಲ್ಲೇ ತಿಳಿಸಿದ್ದಾರೆ. ಆದರೂ ಸೇವೆಯಿಂದ ವಜಾ ಆದವರಿಗೆ ಪುನರ್ ನೇಮಕ ಆದೇಶ ನೀಡಿಲ್ಲ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಿಲ್ಲ. ಹೀಗಾಗಿ ನಮ್ಮ ಬೇಡಿಕೆ ಈಡೇರುವವರೆಗೂ ಈ ಧರಣಿ ಸತ್ಯಾಗ್ರಹ ವಾಪಸ್‌ ತೆಗೆದುಒಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...