NEWSನಮ್ಮರಾಜ್ಯಸಂಸ್ಕೃತಿ

ಕನ್ನಡದಲ್ಲಿ ವ್ಯವಹರಿಸುವ ಅಧಿಕಾರಿಗಳು, ಸಿಬ್ಬಂದಿಗೆ 5 ಸಾವಿರ ರೂ. ಬಹುಮಾನ : ಬಿಎಂಟಿಸಿ ಎಂಡಿ ಅನ್ಬುಕುಮಾರ್ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಕನ್ನಡ ಬಳಸುವ ಮತ್ತು ಕನ್ನಡದಲ್ಲೇ ವ್ಯವಹಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ 5 ಸಾವಿರ ರೂ. ಬಹುಮಾನ ನೀಡಲಾಗುವುದು ಎಂದು ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ತಿಳಿಸಿದ್ದಾರೆ.

ಇಂದು (ಅ.28) ಸಂಸ್ಥೆಯ ಮುಖ್ಯ ಕೇಂದ್ರ ಕಚೇರಿ, ಕೇಂದ್ರ ಕಾರ್ಯಾಗಾರ, ಎಲ್ಲ ಘಟಕಗಳಲ್ಲಿ ಏಕಕಾಲಕ್ಕೆ ಆಯೋಜಿಸಿದ್ದ ಮಾತಾಡ್ ಮಾತಾಡ್ ಕನ್ನಡ ಅಭಿಯಾನಡಿಯಲ್ಲಿ ಕನ್ನಡಕ್ಕಾಗಿ ನಾವು ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡವನ್ನು ಬಳಸಲು ಮತ್ತು ಕನ್ನಡದಲ್ಲಿ ವ್ಯವಹರಿಸಲು ಪ್ರೋತ್ಸಾಹಿಸುವ ಸಲುವಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ 5 ಸಾವಿರ ರೂ. ಬಹುಮಾನ ನೀಡಲು 50 ಸಾವಿರ ರೂ.ಗಳನ್ನು ಮೀಸಲಿಡಲಾಗುವುದು ಎಂದು ತಿಳಿಸಿದರು.

ಇನ್ನು ಸುಲಿದ ಬಾಳೆ ಹಣ್ಣಿನಂತೆಯಿರುವ ನಮ್ಮ ಕನ್ನಡ ಭಾಷೆಯನ್ನು ತೆಲುಗು, ತಮಿಳು, ಮರಾಠಿ ಸೇರಿದಂತೆ ವಿವಿಧ ಭಾಷಿಕರಿಗೆ ಕಲಿಸುವ ಕಾರ್ಯವಾಗಬೇಕು. ಉದ್ಯೋಗಕ್ಕಾಗಿ ನಮ್ಮ ಕನ್ನಡ ಭಾಷಿಕರು ಅನ್ಯ ರಾಜ್ಯ ಹಾಗೂ ದೇಶಗಳಿಗೆ ಹೋದಾಗ ಅಲ್ಲಿಯ ಭಾಷೆಯನ್ನು ಬಹುಬೇಗ ಕಲಿಯುತ್ತಾರೆ. ಆದರೆ ನಮ್ಮ ಕನ್ನಡ ಭಾಷೆ ಪಸರಿಸಿ ಬೆಳೆಸಬೇಕೆಂಬ ಕಾರ್ಯ ಮಾಡುತ್ತಿಲ್ಲ ಎಂಬ ಬೇಸರವು ಇದೆ ಎಂದು ಹೇಳಿದರು.

ನೇರೆ ರಾಜ್ಯಗಳಾದ ತಮಿಳು, ಆಂಧ್ರ ಹಾಗೂ ಮಹಾರಾಷ್ಟ್ರ ತಮ್ಮ ಮಾತೃ ಭಾಷೆಯನ್ನು ಹಿಡಿತದಲ್ಲಿ ಇಟ್ಟುಕೊಂಡು ಅಲ್ಪ ಸ್ವಲ್ಪ ಕನ್ನಡ ಬರುತ್ತಿದ್ದರು ನಮ್ಮ ರಾಜ್ಯಕ್ಕೆ ಬಂದಾಗ ತಮ್ಮ ಭಾಷೆಯನ್ನೆ ಬಳಸುತ್ತಾರೆ. ಇದನ್ನು ಕನ್ನಡಿಗರಾದ ನಾವು ಗಮನಿಸಿ ಇಂತಹ ಅಭಿಯಾನುಗಳನ್ನು ಹಮ್ಮಿಕೊಳ್ಳುವ ಮೂಲಕ ಕನ್ನಡಿಗರೇತರಲ್ಲಿ ಕನ್ನಡ ಬೆಳೆಸುವ ಕಾರ್ಯ ಮಾಡಬೇಕು ಎಂದರು.

ಅಧಿಕಾರಿಗಳು ಮತ್ತು ಸಿಬ್ಬಂದಿ ಎಲ್ಲರ ಸಂಕಲ್ಪ: ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ. ಕನ್ನಡದಲ್ಲೇ ಬರೆಯುತ್ತೇನೆ. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ ಎಂಬ ಪಣ ತೊಡುತ್ತೇನೆ.

ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡ ಕಲಿಸುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಲು ಬದ್ಧನಾಗಿರುತ್ತೇನೆ ಎಂದು ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಎಲ್ಲರೂ ಸಂಕಲ್ಪ ಮಾಡಿದರು.

ಇನ್ನು ಕಾರ್ಯಕ್ರಮದ ಆರಂಭದಲ್ಲಿ ಲಕ್ಷಕಂಠಗಳಲ್ಲಿ “ಜಯ ಭಾರತ ಜನನಿಯ ತನುಜಾತೆ” ಕನ್ನಡ ಗೀತಗಾಯನ, ನಾಡಗೀತೆ ಆ ನಂತರ ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ನಿಸಾರ್ ಅಹಮ್ಮದ್​ರವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಡಾ. ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡುಗಳು ಏಕಕಾಲದಲ್ಲಿ ಎಲ್ಲ ಸ್ಥಳಗಳಲ್ಲಿಯೂ ಮೊಳಗುವ ಮೂಲಕ ಕರ್ಣಾನಂದವಾಯಿತು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...