ಬೆಂಗಳೂರು: ದೊಡ್ಮನೆಯವರು ಯಾವಾಗಿದ್ರು ದೊಡ್ಡದಾಗಿಯೇ ಯೋಚಿಸುತ್ತಾರೆ. ಹೌದು ತಮ್ಮ ತಂದೆಯಂತೆಯೇ ಪುನೀತ್ ರಾಜ್ ಕುಮಾರ್ ಅವರೂ ಕೂಡ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದು ಆ ಮೂಲಕ ಬೇರೆಯವರ ಬಾಳನ್ನೂ ಬೆಳಗುವುದರ ಜೊತೆಗೆ ನಮ್ಮ ಜೊತೆಯಲ್ಲಿ ಇರಲಿದ್ದಾರೆ.
ಸರಳ ಸಜ್ಜನಿಕೆಯ ವ್ಯಕ್ತಿತ್ವದ ಅಪ್ಪು, ಕುಟುಂಬ ಸಮೇತವಾಗಿ ಬಂದು ನೋಡುವಂತಹ ಸಿನಿಮಾಗಳನ್ನೇ ಮಾಡಿಕೊಂಡು ಬಂದಂತವರು. ಅಪ್ಪು ಅವರಿಗೆ ಎಲ್ಲಾ ವರ್ಗದ ನೋಡುಗರೂ ಕೂಡ ಅಭಿಮಾನಿಗಳಾಗಿದ್ದಾರೆ. ಅದರೆ ಇವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.
ಪುನೀತ್ ರಾಜ್ ಕುಮಾರ್ ಅವರ ಈ ಚಿಕ್ಕ ವಯಸ್ಸಿನಲ್ಲಿ ವಿಧಿಯು ಆಟವನ್ನೇ ಆಡಿದ್ದಾನೆ. ಪುನೀತ್ ರಾಜ್ ಕುಮಾರ್ ಅವರ ಅಗಲಿಕೆಯಿಂದ ಅಭಿಮಾನಿಗಳು ಕಂಗಾಲಾಗಿದ್ದಾರ. ಈ ಸುದ್ದಿಯನ್ನ ತಿಳಿದ ರಾಜ್ಯಾದ್ಯಂತ ಇರುವ ಅಭಿಮಾನಿಗಳು ಬೆಂಗಳೂರಿಗೆ ಹೊರಟಿದ್ದಾರೆ.
ಈಗಾಗಲೇ ಆಸ್ಪತ್ರೆಯಲ್ಲಿ ಈ ಪ್ರಕ್ರಿಯೆ ಮುಗಿದಿದ್ದು, ಅಭಿಮಾನಿಗಳ ಅಂತಿಮ ದರ್ಶನಕ್ಕಾಗಿ ಕಂಠೀರವ ಸ್ಟೇಡಿಯಂ ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ 6 ಗಂಟೆ ಬಳಿಕ ಕಂಠೀರವ ಸ್ಟೇಡಿಯಂಗೆ ಸದಾಶಿವನಗರ ಅಪ್ಪು ಮನೆಯಿಂದ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.