NEWSಸಿನಿಪಥ

ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್​ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ಪುನೀತ್​ ರಾಜ್​ ಕುಮಾರ್​ ಅವರ ಅಂತಿಮ ವಿಧಿವಿಧಾನಗಳನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪುನೀತ್​ ರಾಜ್​ ಕುಮಾರ್​ ಅವರ ಅಂತ್ಯಕ್ರಿಯೆ ಸ್ಥಳವನ್ನು ಅವರ ಕುಟುಂಬದವರು ನಿರ್ಧಾರ ಮಾಡುತ್ತಾರೆ. ಅದರಂತೆಯೇ ನಾವು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುತ್ತೇವೆ ಎಂದು ತಿಳಿಸಿದರು.

ಅಪ್ಪು ನನಗೆ ಚಿಕ್ಕಂದಿನಿಂದಲೂ ಪರಿಚಯ. ಅವರ ಕುಟುಂಬದೊಂದಿಗೆ ನನಗೆ ಒಳ್ಳೆಯ ಸಂಬಂಧ ಇತ್ತು, ಅವರ ಆ ಚಿಕ್ಕ ವಯಸ್ಸಿನಿಂದ ಹಿಡಿದು ಅವರು ನಟನೆಯಲ್ಲಿ ಇಷ್ಟು ಎತ್ತರಕ್ಕೆ ಬೆಳೆದಿದ್ದನ್ನು ನಾನು ನೋಡಿದ್ದೆ. ಆದರೆ ಇಷ್ಟು ಚಿಕ್ಕ ವಯಸ್ಸಿಗೆ ವಿಧಿ ಅವರ ಬಾಳಲ್ಲಿ ಹೀಗೆ ಆಟವಾಡಬಾರದಿತ್ತು ಎಂದು ಕಂಬನಿ ಮಿಡಿದರು.

ನವೆಂಬರ್​ 1ನೇ ತಾರೀಕು ತಮ್ಮ ಮಹತ್ವಾಕಾಂಕ್ಷೆಯ ಲರ್ನಿಂಗ್​ ಆಪ್​ ಅನ್ನು ಬಿಡುಗಡೆ ಮಾಡುವುದಕ್ಕೆ ಯೋಜನೆ ರೂಪಿಸಿದ್ದರು. ಹೀಗಾಗಿ ಅಪ್ಪು ಇಂದು ನನ್ನನ್ನು ಭೇಟಿಯಾಗುವುದಕ್ಕೆ ಸಮಯ ಕೂಡ ನಿಗದಿಯಾಗಿತ್ತು, ಆದರೆ ಇಂದು ನನ್ನನ್ನು ಭೇಟಿ ಈ ರೀತಿಯಾಗಿ ಮಾಡಿಸಿದ್ದಾನೆ ಎಂದು ತಮ್ಮ ಹೇಳಿದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ