NEWSಸಿನಿಪಥ

ಪುನೀತ್‌ ರಾಜ್‌ಕುಮಾರ್‌ ನಿಧನಕ್ಕೆ ಆಮ್‌ ಆದ್ಮಿ ಪಾರ್ಟಿ ಶ್ರದ್ಧಾಂಜಲಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವರನಟ ಡಾ. ರಾಜ್‌ಕುಮಾರ್‌ ಅವರ ಪುತ್ರ ಹಾಗೂ ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನಕ್ಕೆ ಆಮ್‌ ಆದ್ಮಿ ಪಾರ್ಟಿ ಶ್ರದ್ಧಾಂಜಲಿ ಕೋರಿದ್ದು, ಇದು ಚಿತ್ರರಂಗಕ್ಕೆ ಮಾತ್ರವಲ್ಲದೇ ಇಡೀ ನಾಡಿಗೆ ತುಂಬಲಾರದ ನಷ್ಟವೆಂದು ಸಂತಾಪ ಸೂಚಿಸಿದೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ಕನ್ನಡದ ಖ್ಯಾತ ನಟನಾಗಿ ಅಸಂಖ್ಯಾಂತ ಅಭಿಮಾನಿಗಳನ್ನು ಹೊಂದಿದ್ದ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನವು ಆಘಾತ ಉಂಟುಮಾಡಿದೆ.

ಡಾ. ರಾಜ್‌ಕುಮಾರ್‌ ಅವರ ಮಗನಾದ ಅವರು ತಂದೆಯಂತೆಯೇ ಸರಳ, ಸಹೃದಯಿ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡಿದ್ದರು. ಬಾಲ್ಯದಿಂದಲೂ ಅನೇಕ ಅತ್ಯುತ್ತಮ ಸಿನಿಮಾಗಳಲ್ಲಿ ನಟಿಸಿದ ಅವರು ಅಭಿಮಾನಿಗಳ ಹೃದಯಾಂತರಾಳದಲ್ಲಿ ಸ್ಥಾನ ಪಡೆದಿದ್ದಾರೆ. ದೇವರು ಅವರನ್ನು ಇಷ್ಟು ಬೇಗ ಕರೆಸಿಕೊಳ್ಳಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

“ನಟನೆಯ ಜೊತೆಗೆ ಹಾಡುಗಾರಿಕೆ ಕಲೆಯೂ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಒಲಿದಿತ್ತು. ಅವರ ಸುಮಧುರ ಕಂಠದ ಅನೇಕ ಹಾಡುಗಳು ಸಂಗೀತಪ್ರಿಯರ ಮನಗೆದ್ದಿವೆ. ಕಿರುತೆರೆಯ ರಿಯಾಲಿಟಿ ಶೋಗಳನ್ನೂ ಯಶಸ್ವಿಯಾಗಿ ನಡೆಸಿಕೊಟ್ಟ ಅವರು ಬಹುಮುಖ ಪ್ರತಿಭೆ.

ಎಲ್ಲಕ್ಕಿಂತ ಮುಖ್ಯವಾಗಿ, ಅಷ್ಟು ದೊಡ್ಡ ಕುಟುಂಬದಲ್ಲಿ ಜನಿಸಿದ್ದರೂ, ಮುಗಿಲೆತ್ತರದ ಕೀರ್ತಿ ಗಳಿಸಿದ್ದರೂ, ಕಿಂಚಿತ್ತೂ ಅಹಂಕಾರವಿಲ್ಲದೇ, ಎಂದೂ ಹೆಸರು ಕೆಡಿಸಿಕೊಳ್ಳದೇ ಸದಾ ನಗುಮೊಗದಿಂದ ಬದುಕಿದ್ದರು. ಅವರ ಈ ಸ್ವಭಾವವು ಸರ್ವರಿಗೂ ಮಾದರಿಯಾಗಬೇಕಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳ ದುಃಖದಲ್ಲಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಘಟಕ ಭಾಗಿಯಾಗುತ್ತಿದೆ. ಅಪ್ಪು ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಪೃಥ್ವಿ ರೆಡ್ಡಿಯವರು ಹೇಳಿದ್ದಾರೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ