NEWSನಮ್ಮರಾಜ್ಯಸಿನಿಪಥ

ನೆಚ್ಚಿನ ನಟ ಪುನೀತ್ ರಾಜ್ ಕುಮಾರ್‌ರ ಅಂತಿಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ನೆರೆದ ಅಭಿಮಾನಿಗಳು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರು ನಮ್ಮ ಬಿಟ್ಟು ಬಾರದ ಲೋಕಕ್ಕೆ ಪಯಾಣ ಬೆಳೆಸಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ ನಾಡಿನ ಮೂಲೆ ಮೂಲೆಯಿಂದ ಬೆಂಗಳೂರಿನತ್ತ ಧಾವಿಸಿ ಬರುತ್ತಿರುವ ಲಕ್ಷಾಂತರ ಅಭಿಮಾನಿಗಳ ದಂಡು ನಗರದ ಕಂಠೀರವ ಸ್ಟೇಡಿಯಂನಲ್ಲಿ ಸಾಗರೋಪಾದಿಯಲ್ಲಿ ನರೆದಿದ್ದು, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಿತ್ತಿದೆ.

ಈ ನಡುವೆ ಕಂಠೀರವ ಸ್ಟೇಡಿಯಂನಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದು, ಜತೆಗೆ ಸ್ಯಾಂಡಲ್ ವುಡ್ ಸೇರಿ ಭಾರತೀಯ ಚಿತ್ರರಂಗದ ವಿವಿಧ ಗಣ್ಯರು, ರಾಜಕೀಯ ನಾಯಕರು ಸೇರಿದಂತೆ ವಿವಿಧ ಕ್ಷೇತ್ರಗಳ ಪುನೀತ್ ಅವರ ಸ್ನೇಹಿತರು, ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿದ ಅಗಲಿದ ನಟನ ದರ್ಶನ ಪಡೆದು ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ನಿನ್ನೆ(ಅ.29) ರಾತ್ರಿ 7 ಗಂಟೆಗೆ ಕಂಠೀರವ ಕ್ರೀಡಾಂಗಣಕ್ಕೆ ಪುನೀತ್ ಅವರ ಪಾರ್ಥಿವ ಶರೀರವನ್ನು ತರುತ್ತಲೇ ಅಭಿಮಾನಿಗಳ ದುಃಖದ ಕಟ್ಟೆ ಸ್ಫೋಟಗೊಂಡತ್ತು. ಅಪ್ಪೂ, ಪುನೀತಣ್ಣ, ಸಾರ್ ಮತ್ತೆ ಹುಟ್ಟಿ ಬನ್ನಿ ಹೀಗೆ ಘೋಷಣೆಗಳು ಮುಗಿಲು ಮುಟ್ಟಿದ್ದವು. ನೂಕುನುಗ್ಗಲಲ್ಲೇ ಸಾಗಿ ಅಪ್ಪುಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಇನ್ನು ತನ್ನ ನೆಚ್ಚಿನ ನಟ ಅಸುನೀಗಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯಲ್ಲಿ ಅಭಿಮಾನಿಯೊಬ್ಬರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಕಂಠೀರವ ಕ್ರೀಡಾಂಗಣಕ್ಕೆ ಬಂದ ಇಬ್ಬರು ಅಭಿಮಾನಿಗಳು ಅಸ್ವಸ್ಥಗೊಂಡಿದ್ದರು.

ಡಾ.ರಾಜ್ ಸಮಾಧಿ ಪಕ್ಕವೇ ಅಂತ್ಯಕ್ರಿಯೆ: ಡಾ.ರಾಜ್ ಕುಮಾರ್ ಅವರ ಸಮಾಧಿ ಇರುವ ರಾಜಧಾನಿಯ ಕಂಠೀರವ ಸ್ಟುಡಿಯೋ ಆವರಣದಲ್ಲೇ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿ ನಡೆಸಲು ಪುನೀತ್ ಅವರ ಕುಟುಂಬ ವರ್ಗದೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಭಾನುವಾರ ಅಂತ್ಯಕ್ರಿಯೆ ನಡೆಸುವುದು ಬವಹುತೇಕ ಖಚಿತವಾಗಿದೆ. ಇನ್ನು ಅಮೆರಿಕದಲ್ಲಿರುವ ಪುನೀತ್ ರಾಜ್ ಕುಮಾರ್ ಅವರ ಹಿರಿಯ ಪುತ್ರಿ ಧೃತಿ ಅವರು ಶನಿವಾರ ಸಂಜೆ 4.30ರ ಸುಮಾರಿಗೆ ನಗರಕ್ಕೆ ವಾಪಸ್ಸಾಗುವ ಸಾಧ್ಯತೆ ಇದೆ.

ಇಂದು (ಅ.30) ಇಡೀ ದಿನ ಅಭಿಮಾನಿಗಳಿಗೆ ಪುನೀತ್ ಅವರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ ಅಭಿಮಾನಿಗಳು ನೂಕು ನುಗ್ಗಲಿನಲ್ಲಿ ಬರದೆ ಸಮಾಧಾನ ಚಿತ್ತರಾಗಿ ಸಾಲಿನಲ್ಲಿ ಬಂದು ಅಂತಿಮ ದರ್ಶನ ಪಡೆಯುವಂತೆ ಕುಟುಂಬದವರು ಮನವಿ ಮಾಡಿದ್ದಾರೆ.

ಹೆಚ್ಚುತ್ತಿರುವ ಅಭಿಮಾನಿಗಳ ಸಾಲು: ರಾತ್ರಿಯಿಡೀ ನೆಚ್ಚಿನ ನಾಯಕನ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಸಮಯ ಕಳೆದಂತೆ ಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಇಂದು ಬೆಳಗಾಗುತ್ತಿದ್ದಂತೆ ಮತ್ತಷ್ಟು ಜನ ಕಂಠೀರವ ಸ್ಟೇಡಿಯಂ ಕಡೆಗೆ ಮುಖಮಾಡಿದ್ದು, ರಾಜ್ಯ, ಅಂತಾರಾಜ್ಯಗಳಿಂದ ಜನರು ಸ್ಟೇಡಿಯಂನತ್ತ ದಾವಿಸುತ್ತಿದ್ದಾರೆ.

ಪೊಲೀಸ್ ಭದ್ರತೆ: ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿರುವ ಹಿನ್ನೆಲೆಯಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಪೊಲೀಸ್ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಹಾವೇರಿ, ಹುಬ್ಬಳ್ಳಿಯಿಂದ ರಿಸರ್ವ್​ ಪೊಲೀಸರನ್ನು ಕರೆತಂದು ನಿಯೋಜನೆ ಮಾಡಲಾಗಿದೆ. ನಿನ್ನೆ ರಾತ್ರಿಯೇ 200 ಪೊಲೀಸರು ಬಂದಿಳಿದಿದ್ದಾರೆ.

ಪಾರ್ಕಿಂಗ್ ವ್ಯವಸ್ಥೆ: ಕಂಠೀರವ ಸ್ಟೇಡಿಯಂ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸರು ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

ಈ ಕುರಿತು ಬೆಂಗಳೂರು ಸಿಟಿ ಪೊಲೀಸ್ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ವಿಠಲ್ ಮಲ್ಯ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ಕಾಲೇಜು ಆಟದ ಮೈದಾನ ಮತ್ತು ನೃಪತುಂಗ ರಸ್ತೆಯ ವೈಎಂಸಿಎ ಗ್ರೌಂಡ್ ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕರು ತಮ್ಮ ವಾಹನಗಳನ್ನು ಸೇಂಟ್ ಜೋಸೆಫ್ ಕಾಲೇಜು ಆಟದ ಮೈದಾನ ಮತ್ತು ನೃಪತುಂಗ ರಸ್ತೆಯ ವೈಎಂಸಿಎ ಮೈದಾನದಲ್ಲಿ ಮಾತ್ರ ನಿಲ್ಲಿಸುವಂತೆ ಮನವಿ ಮಾಡಿಕೊಂಡಿದೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ