CrimeNEWSದೇಶ-ವಿದೇಶ

‘ಗೋಲ್‌ಗಪ್ಪ’ ತಿಂದ ವಿದ್ಯಾ ರ್ಥಿಯನ್ನು ಕಟ್ಟಡದ ಮೇಲಿಂದ ತಲೆಕೆಳಗಾಗಿ ನೇತಾಡಿಸಿದ ಪ್ರಾಂಶುಪಾಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಿರ್ಜಾಪುರ (ಉತ್ತ ರ ಪ್ರದೇಶ): ಗೋಲ್ಗಪ್ಪ ತಿಂದನೆಂಬ ಕಾರಣಕ್ಕೆ ಶಾಲೆಯ ಪ್ರಾಂ ಶುಪಾಲರು ಎರಡನೇ ತರಗತಿಯ ವಿದ್ಯಾ ರ್ಥಿಯೊಬ್ಬ ನನ್ನು ಶಾಲೆಯ ಕಟ್ಟ ಡದಮೊದಲ ಮಹಡಿಯಿಂದ ತಲೆಕೆಳಗಾಗಿ ನೇತಾಡಿಸಿದ ಪ್ರಸಂಗ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ.

ಈ ಘಟನೆ ಗುರುವಾರ ನಡೆಸಿದ್ದು, ವಿದ್ಯಾ ರ್ಥಿಯನ್ನು ನೇತಾಡಿಸುತ್ತಿರುವುದನ್ನು ಸಹಪಾಠಿಗಳು ಆತಂಕದಿಂದ ನೋಡುತ್ತಿರುವ ಚಿತ್ರ ಮತ್ತು ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಘಟನೆಯ ಹಿನ್ನೆಲೆಯಲ್ಲಿ ‘ಸದ್ಭಾವನಾ ಶಿಕ್ಷಣ ಸಂಸ್ಥಾನ ಜೂನಿಯರ್ ಹೈಸ್ಕೂಲ್’ನ ಪ್ರಾಂಶುಪಾಲ ಮನೋಜ್ ವಿಶ್ವಕರ್ಮ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ವಿಶ್ವಕರ್ಮ ಅವರನ್ನು ವಶಕ್ಕೆ ಪಡೆದಿರುವುದಾಗಿ ಅಹ್ರೌರಾ ಠಾಣೆ ಪೊಲೀಸರು ತಿಳಿಸಿದ್ದಾರೆ.

ಶಿಕ್ಷಕರಿಗೆ ತಿಳಿಸದೆ ಶಾಲೆ ಹೊರಗಿನ ಅಂಗಡಿಯಲ್ಲಿ ‘ಗೋಲ್‌ಗಪ್ಪ’ ತಿಂದಿದ್ದಕ್ಕಾಗಿ ಶಾಲೆಯ ಪ್ರಾಂಶುಪಾಲ ಮನೋಜ್ ವಿಶ್ವಕರ್ಮ ಅವರು 7 ವರ್ಷದ ಬಾಲಕನಿಗೆ ಈ ರೀತಿಯ ಶಿಕ್ಷೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಿಂದ ಆಘಾತಕ್ಕೊಳಗಾದ ಬಾಲಕ ಮನೆಗೆ ಬಂದು ಪೋಷಕರಿಗೆ ವಿಷಯ ತಿಳಿಸಿದ್ದ. ಮಗುವಿನ ತಂದೆ ರಂಜಿತ್ಯಾದವ್ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು , ಗುರುವಾರ ರಾತ್ರಿ ಎಫ್ಐಆರ್ ದಾಖಲಿಸಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಮೂಲ ಶಿಕ್ಷಣಾಧಿಕಾರಿ, ವರದಿ ತರಿಸಿಕೊಂಡು ಶಾಲೆಯ ಪ್ರಾಂಶುಪಾಲರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಾಂ ಶುಪಾಲ ವಿಶ್ವ ಕರ್ಮ ಅವರು ಮಗುವಿನ ತಂದೆಯ ಬಳಿ ಕ್ಷಮೆ ಕೋರಿದ್ದಾರಾದರೂ, ಬಾಲನ್ಯಾಯ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

Leave a Reply

error: Content is protected !!
LATEST
2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ