NEWSನಮ್ಮರಾಜ್ಯ

ಸಾರಿಗೆ ನೌಕರರಿಗೆ ಅಕ್ಟೋಬರ್‌ನಿಂದಲೇ ಶೇ.3ರಷ್ಟು ತುಟ್ಟಿಭತ್ಯೆ ಪಾವತಿಗೆ ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜುಲೈ 1 ರಿಂದ ಪೂರ್ವಾನ್ವಯ ಆಗುವಂತೆ ತುಟ್ಟಿಭತ್ಯೆಯನ್ನು ಶೇ. 3ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಸಾರಿಗೆ ನೌಕರರ ಮೂಲ ವೇತನದ ಶೇ.21.50 ರಷ್ಟಿದ್ದ ತುಟ್ಟಿ ಭತ್ಯೆಯನ್ನು ಶೇ. 24.50ಗೆ ಏರಿಸಿ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ರಾಜ್ಯ ಸಾರಿಗೆ ನಿಗಮಗಳಲ್ಲಿ ಪರಿಷ್ಕೃತ ತುಟ್ಟಿಭತ್ಯೆ ದರವನ್ನು ಅನುಷ್ಠಾನಗೊಳಿಸಿ ಪಾವತಿಸಲು ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಾಲ್ಕೂ ನಿಗಮಗಳಲ್ಲೂ ಅಕ್ಟೋಬರ್‌ ತಿಂಗಳ ವೇತನದಲ್ಲಿ ಮತ್ತು ಮುಂದಕ್ಕೆ ತುಟ್ಟಿಭತ್ಯೆ ದರವನ್ನು ಶೇ.21.50 ರಿಂದ ಶೇ.24.50ಕ್ಕೆ ಹೆಚ್ಚಿಸಿ ಅನುಷ್ಠಾನಗೊಳಿಸಿ ಪಾವತಿಸಲು ಆದೇಶಿಸಿದ್ದಾರೆ.

ಜುಲೈ 1ರಿಂದ ಸೆಪ್ಟೆಂಬರ್‌ -2021ರವರೆಗಿನ ಮೂರು ತಿಂಗಳ ತುಟ್ಟಿಭತ್ಯೆ ಹಿಂಬಾಕಿಯ ಒಂದೊಂದು ಕಂತನ್ನು ನವೆಂಬರ್‌-2021 ರಿಂದ ಜನವರಿ-2022ರ ತಿಂಗಳ ವೇತನದಲ್ಲಿ ಸೇರಿಸಿ ಪಾವತಿಸಲು ತಿಳಿಸಿದ್ದಾರೆ.

ಜುಲೈ-2021 ರಿಂದ ಸೆಪ್ಟೆಂಬರ್‌ 2021ರ ಅವಧಿಯಲ್ಲಿ ಸೇವಾವಿಮುಕ್ತಿ (ನಿವೃತ್ತಿ) ಹೊಂದಿದವರಿಗೆ ಲಭ್ಯವಿರುವ ತುಟ್ಟಿಭತ್ಯೆ ಹಿಂಬಾಕಿ ಮೊತ್ತವನ್ನು ( ಸಂಸ್ಥೆಗೆ ಬರಬೇಕಾದ ಬಾಕಿ ಮೊತ್ತ ಇದ್ದಲ್ಲಿ ಕಡಿತ ಮಾಡಿಕೊಂಡು) ಧನಾದೇಶಗಳ ಮುಖಾಂತರ ನವೆಂಬರ್‌ 25ರಂದು ಪಾವತಿಸಬೇಕು ಎಂದು ತಿಳಿಸಿದ್ದಾರೆ.

ಅಕ್ಟೋಬರ್‌ ನಿಂಧ ಡಿಸೆಂಬರ್‌ ವರೆಗಿನ ತಿಂಗಳುಗಳಲ್ಲಿ ಸೇವಾವಿಮುಕ್ತಿ ಹೊಂದುವವರಿಗೆ ಬಾಕಿ ಇರುವ ಪೂರ್ಣ ತುಟ್ಟಿಭತ್ಯೆ ಹಿಂಬಾಕಿ ಮೊತ್ತವನ್ನು ನಿವೃತ್ತಿ ತಿಂಗಳ ವೇತನದಲ್ಲೇ ಸೇರಿಸಿ ಪಾವತಿಸುವಂತೆ ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...