NEWSನಮ್ಮಜಿಲ್ಲೆಶಿಕ್ಷಣ-

ಬಾಗಲಕೋಟೆ : 2402 ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡುವ ಗುರಿ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ : ಪ್ರಸಕ್ತ ಸಾಲಿನ ಜಿಲ್ಲಾ ಪಂಚಾಯಿತಿ ಲಿಂಕ್ ಡಾಕ್ಯೂಮೆಂಟ್‌ ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಒಂದು ದಿನದ ಜಿಲ್ಲಾ ಮಟ್ಟದ ಸಾಕ್ಷರತಾ ಕಾರ್ಯಾಗಾರ ಜರುಗಿತು.

ಕಾರ್ಯಾಗಾರವನ್ನು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್ ಉದ್ಘಾಟಿಸಿ ಮಾತನಾಡಿದರು. 2021-22 ನೇ ಸಾಲಿಗೆ ಜಿಲ್ಲೆಯಲ್ಲಿನ ಗ್ರಾಮ ಪಂಚಾಯಿತಿಯ ಅನಕ್ಷರಸ್ಥ ಸದಸ್ಯರು, ಅಂಗನವಾಡಿ ಸಹಾಯಕರು, ಅಡುಗೆ ಸಿಬ್ಬಂದಿ, ಎಸ್.ಡಿ.ಎಂ.ಸಿ. ಸದಸ್ಯರು, ಕಾರಾಗೃಹದಲ್ಲಿರುವ ಅನಕ್ಷರಸ್ಥ ಕೈದಿಗಳು ಮತ್ತು ಎ.ಪಿ.ಎಂ.ಸಿ.ಯಲ್ಲಿ ಅನಕ್ಷರಸ್ಥ ಹಮಾಲರಿಗೆ ಈ ವರ್ಷ ಸಾಕ್ಷರತಾ ಕಲಿಕಾ ಕೇಂದ್ರಗಳಲ್ಲಿ ದಾಖಲಿಸಿ ಅವರನ್ನು ಸಾಕ್ಷಕರರನ್ನಾಗಿ ಮಾಡಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಅನಕ್ಷರಸ್ಥರ ಪಟ್ಟಿಯನ್ನು ತಯಾರಿಸಲು ಸೂಚಿಸಿದರು.

ಈ ಕಲಿಕಾ ಕೇಂದ್ರಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಾರಂಬಿಸಿ ಬೋಧಕರ ಮೂಲಕ ಕಲಿಕೆ ಮಾಡಿಸಲು ತಿಳಿಸಿದರು.

ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎನ್.ಬಿ.ಗೊರವರ ಅವರು, 2021-22 ನೇ ಸಾಲಿನ ವಿವಿಧ ಸಾಕ್ಷರತಾ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡುತ್ತಾ, ಜಿಲ್ಲಾ ಪಂಚಾಯಿತಿ ಲಿಂಕ್ ಡಾಕ್ಯೂಮೆಂಟ್‌ ಅನುದಾನದಡಿ 2402 ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.

ಜಿ.ಪಂ ಮುಖ್ಯ ಯೋಜನಾಧಿಕಾರಿ ಪ್ರಭು ಮಾನೆ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ, ಇಲಕಲ್ಲ ಡಯಟ್‍ನ ಉಪನಿರ್ದೇಶಕ ಬಿ.ಕೆ.ನಂದನೂರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎ.ಎನ್.ದೇಸಾಯಿ.

ಜಿಲ್ಲಾ ಸಾಂಖ್ಯಕ ಅಧಿಕಾರಿ ಗಂಗಾಧರ ದಿವಟರ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಅಧಿಕಾರಿ ಅನೀಲ ಕಟ್ಟಿ, ಆಯಾ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರು, ತಾಲೂಕಾ ಸಂಯೋಜಕರು ಉಪಸ್ಥಿರಿದ್ದರು. ಜಿಲ್ಲಾ ಕಾರ್ಯಕ್ರಮ ಸಹಾಯಕರು ಎಸ್.ಎನ್.ಕಲಬುರ್ಗಿ ಸ್ವಾಗತಿಸಿದರು. ರಾಜು ನಾಯಕ ವಂದಿಸಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?