NEWSನಮ್ಮರಾಜ್ಯಸಂಸ್ಕೃತಿಸಿನಿಪಥ

ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್‌ ರಾಜಕುಮಾರ್‌ಗೆ ಅರ್ಪಿಸೋಣ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

1,500 ವರ್ಷಗಳಿಗೂ ಹೆಚ್ಚು ಘನ ಇತಿಹಾಸವುಳ್ಳ ಕನ್ನಡ, ಶಾಸ್ತ್ರೀಯ ಸ್ಥಾನ ಅಲಂಕರಿಸಿದ ಅಭಿಜಾತ ಕನ್ನಡ, ಅಷ್ಟ ಜ್ಞಾನಪೀಠಗಳ ಮೇರುಗನ್ನಡ, ನಮ್ಮ ಬದುಕು-ಬಾಳ್ವೆಯ ತಾಯ್ಗನ್ನಡ. ಕನ್ನಡವೆಂದರೆ ಬರೀ ಭಾಷೆಯಲ್ಲ, ನಮ್ಮ ಪಾಲಿನ ದೇವಭಾಷೆ. ನಮ್ಮ ಮನಸು-ಕನಸುಗಳನ್ನು ಅರಳಿಸಿ ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆ ಎಂದು ಟ್ವೀಟ್‌ ಮಾಡಿದ್ದಾರೆ.

ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್‌ ರಾಜಕುಮಾರ್‌ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ ಎಂದಿದ್ದಾರೆ.

ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್‌ ರಾಜಕುಮಾರ್‌ ಅವರಿಗೆ ಅರ್ಪಿಸುತ್ತಾ, ಮತ್ತೊಮ್ಮೆ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...