CrimeNEWSಸಂಸ್ಕೃತಿ

ಕನ್ನಡ ರಾಜ್ಯೋತ್ಸವದಂದೆ ಇಹಲೋಕ ತ್ಯಜಿಸಿದ ಜಾನಪದ ತಜ್ಞ ಪ್ರೊ.ಜ್ಯೋತಿ ಹೊಸೂರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಕನ್ನಡ ಹಿರಿಯ ವಿದ್ವಾಂಸರು ಖ್ಯಾತ ಸಾಹಿತಿ ಹಾಗೂ ಜಾನಪದ ತಜ್ಞರಾದ 85 ವರ್ಷದ ಪ್ರೊ.ಜ್ಯೋತಿ ಹೊಸೂರ ಅವರು ಕನ್ನಡ ರಾಜ್ಯೋತ್ಸವದ ದಿನದಂದು ಈ ಇಹಲೋಕ ತ್ಯಜಿಸಿದ್ದಾರೆ.

ಜ್ಯೋತಿ ಅವರ ಇಚ್ಛೆಯಂತೆ ಅವರ ದೇಹವನ್ನು ಕೆಎಲ್‌ಇ ಸೊಸೈಟಿಗೆ ದಾನ ಮಾಡಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಮತ್ತು ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ರಾಯಭಾಗದಲ್ಲಿ ವಾಸವಾಗಿದ್ದ ಜ್ಯೋತಿ ಹೊಸೂರವರ ಸಂಶೋಧನೆಗಳು ಮಾತ್ರ ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಚರ್ಚೆಯಾಗುತ್ತಿವೆ.

ಅವರ ಸಂಶೋಧನೆಗಳಿಗೆ ಅಪರಿಮಿತ ಶಕ್ತಿ ಇದೆ. ಅವರು ಕನ್ನಡ ಸಾಹಿತ್ಯ, ಸಮಾಜ, ಸಂಸ್ಕೃತಿ, ಹಾಲುಮತ ಸಮುದಾಯ ಮತ್ತು ಜಾನಪದ ಕ್ಷೇತ್ರಗಳಲ್ಲಿ ಮಹತ್ವದ ಗ್ರಂಥಗಳನ್ನು ರಚಿಸಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ, ಕನಕದಾಸ, ವಚನ ಸಾಹಿತ್ಯ ಕುರಿತು ಮಹತ್ವದ ಕೃತಿಗಳನ್ನು ಪ್ರಕಟಿಸಿದ್ದಾರೆ. ಕನಕದಾಸರ ಜೀವನ ಮತ್ತು ಸಾಹಿತ್ಯದ ಬಗ್ಗೆ ಸಂಶೋಧನಾತ್ಮಕವಾಗಿ ಅಧ್ಯಯನ ಮಾಡಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕನಕಶ್ರೀ ಪ್ರಶಸ್ತಿ, ಬೆಟಗೇರಿ ಕೃಷ್ಣಶರ್ಮ ಸಂಶೋಧಕ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ