NEWSನಮ್ಮರಾಜ್ಯಸಂಸ್ಕೃತಿ

ಪುನೀತ್‌ ರಾಜ್‌ಕುಮಾರ್‌ ಸ್ಮರಣಾರ್ಥ ಎಎಪಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್‌ ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌  ಅವರ ಸ್ಮರಣಾರ್ಥ ಹಾಗೂ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಮ್‌ ಆದ್ಮಿ ಪಾರ್ಟಿಯು ಸಂಪಂಗಿರಾಮ ನಗರದಲ್ಲಿ ಇಂದು ಆಯೋಜಿಸಿದ್ದ ಉಚಿತ ನೇತ್ರ ತಪಾಸಣೆ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜನರು ಕಣ್ಣಿನ ತಪಾಸಣೆ ಮಾಡಿಸಿಕೊಂಡರು.

ಸಂಪಂಗಿರಾಮ ನಗರ ವಾರ್ಡ್‌ನ ಎಎಪಿ ಅಧ್ಯಕ್ಷರಾದ ಪ್ರಕಾಶ್‌ ನೆಡುಂಗಡಿ ಮಾತನಾಡಿ, “ನಮ್ಮ ವಾರ್ಡ್‌ನ ಅನೇಕ ಬಡವರು ದೀರ್ಘಕಾಲದಿಂದಲೂ ಕಣ್ಣಿನ ತಪಾಸಣೆ ಮಾಡಿಸಿಕೊಂಡಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿತು. ಡಾ. ರಾಜ್‌ಕುಮಾರ್‌ ಹಾಗೂ ಅವರ ಮಗ ಪುನೀತ್‌ ರಾಜ್‌ಕುಮಾರ್‌ ಅವರು ನೇತ್ರದಾನ ಮಾಡಿರುವುದು ನಾಡಿನೆಲ್ಲೆಡೆ ನೇತ್ರದಾನವನ್ನು ಪ್ರೋತ್ಸಾಹಿಸಿದೆ.

ಆದ್ದರಿಂದ ಅವರ ಸ್ಮರಣಾರ್ಥ ಉಚಿತ ನೇತ್ರ ತಪಾಸಣೆ ಶಿಬಿರ ಆಯೋಜಿಸಲು ನಿರ್ಧರಿಸಿದೆವು. ದೆಹಲಿ ಮಾದರಿಯಲ್ಲಿ ಬೆಂಗಳೂರಿನಲ್ಲೂ ಸಾರ್ವಜನಿಕರ ಆರೋಗ್ಯ ವೃದ್ಧಿಸಲು ಎಎಪಿ ನಿರ್ಧರಿಸಿದ್ದು, ಇದು ಆ ಪ್ರಯತ್ನದ ಭಾಗವಾಗಿದೆ” ಎಂದರು.

“ಆಮ್‌ ಆದ್ಮಿ ಪಾರ್ಟಿಯು ಶಿಬಿರವನ್ನು ಆಯೋಜಿಸಿರುವುದು ಇಲ್ಲಿನ ಜನರಿಗೆ ತುಂಬಾ ಉಪಯುಕ್ತವಾಗಿದೆ. ಕಣ್ಣಿಗೆ ಬಹಳ ಆಯಾಸ ಉಂಟುಮಾಡುವ ಬದಲು ಅದರ ಸುರಕ್ಷತೆಗೆ ಕಾಳಜಿ ತೆಗೆದುಕೊಳ್ಳಬೇಕು” ಎಂದು ತಪಾಸಣೆ ಮಾಡಿಸಿಕೊಂಡ ರವಿಕುಮಾರ್‌ ಎಂಬುವವರು ಹೇಳಿದರು.

ಖ್ಯಾತ ನೇತ್ರತಜ್ಞ ಡಾ. ರಾಜೇಶ್‌ ಪರೇಖ್‌ ಮತ್ತು ಅವರ ತಂಡದವರು ಉತ್ತಮ ಗುಣಮಟ್ಟದ ತಪಾಸಣೆ ನಡೆಸಿ, ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವವರಿಗೆ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ ಬೆಂಗಳೂರಿನ ಸರ್ವಜ್ಞ ನಗರದಲ್ಲಿ ರಾಜ್ಯೋತ್ಸವ ಆಚರಿಸಿ, ನಾಡು-ನುಡಿಯ ಉಳಿವಿಗಾಗಿ ನಾವೆಲ್ಲರೂ ಸದಾ ಬದ್ಧರಾಗಿರಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

Leave a Reply

error: Content is protected !!
LATEST
NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ