NEWSನಮ್ಮಜಿಲ್ಲೆರಾಜಕೀಯ

ಹಾನಗಲ್ ಉಪಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ: ಬಿಜೆಪಿಗೆ ಭಾರಿ ಮುಖಭಂಗ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾನಗಲ್: ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು 7598 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ

ಸಿಎಂ ತವರು ಜಿಲ್ಲೆ ‘ ಹಾನಗಲ್ ಕ್ಷೇ ತ್ರ ದಲ್ಲಿ ಗೆದ್ದೇ ತೀರುತ್ತೇ ವೆ ಎಂದು ಬೀಗುತ್ತಿದ್ದ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.

ಶ್ರೀನಿವಾಸ ಮಾನೆ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಅವರಿಗಿಂತ 7598 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಶ್ರೀನಿವಾಸ ಮಾನೆ 87, 113 ಮತಗಳನ್ನು ಪಡೆದರೆ, ಶಿವರಾಜ್ ಸಜ್ಜನರಗೆ 79,515 ಮತಗಳು ಸಿಕ್ಕಿವೆ. ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ 921 ಮತಗಳನ್ನು ಪಡೆದಿದ್ದಾರೆ.

ಹಾನಗಲ್ ಕ್ಷೇತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯ ಕ್ಷೇತ್ರವಾಗಿದ್ದು, ಭಾರೀ ಪ್ರತಿಷ್ಠೆಗೆ ಕಾರಣವಾಗಿತ್ತು. ಮುಖ್ಯಮಂತ್ರಿ, ಸಚಿವರು ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಭಾರೀ ಪ್ರಚಾರ ನಡೆಸಿದ್ದರು. ಆದರೂ  ಮತದಾರ ಬಿಜೆಪಿಯನ್ನು ತಿರಸ್ಕರಿಸಿದ್ದಾನೆ.

ಇನ್ನು ಆಪತ್ಬಾಂಧವ’ ಎಂಬ ಬಿರುದಿಗೆ ಪಾತ್ರರಾಗಿದ್ದ ಶ್ರೀನಿವಾಸ ಮಾನೆ ಅವರ ಗೆಲುವಿಗೆ ಕೋವಿಡ್ ಕಾಲದಲ್ಲಿ ಜನರಿಗೆ ಸ್ಪಂದಿಸಿದ್ದು ಹಾಗೂ ಕಾಂಗ್ರೆಸ್ ಸರ್ಕಾರದ ಭಾಗ್ಯಗಳ ಯೋಜನೆ ಮಾನೆ ಗೆಲುವಿನ ನಗೆ ಬೀರಲು ಸಹಕಾರಿ ಆಗಿವೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ