CrimeNEWSನಮ್ಮರಾಜ್ಯ

ದುಡಿದರೂ ಸಿಗದ ವೇತನ: ಸಾರಿಗೆ ಸಂಸ್ಥೆ ನೌಕರ ಆತ್ಮಹತ್ಯೆಗೆ ಯತ್ನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಸಮಯಕ್ಕೆ ಸರಿಯಾಗಿ ವೇತನ  ಕೊಡುತ್ತಿ. ಇನ್ನು ಕೊಡುವ ಅರ್ಧ ವೇತನದಲ್ಲಿ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಮನನೊಂದು ವಾಯವ್ಯ ಸಾರಿಗೆ ಸಂಸ್ಥೆ ನೌಕರರೊಬ್ಬರು ಮಂಗಳವಾರ ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ನಡೆದಿದೆ.

ಬಾದಾಮಿ ಡಿಪೋನಲ್ಲಿ 13 ವರ್ಷಗಳಿಂದ ಚಾಲಕ ಕಂ ನಿರ್ವಾಹಕರಾಗಿರುವ ಭರಮಪ್ಪ ಗೊಂದಿ (44) ಆತ್ಮಹತ್ಯೆಗೆ ಯತ್ನಿಸಿದವರು. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಕಳೆದ ರಾತ್ರಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಮೀಪದ ಕೆರೂರಿನಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಭರಮಪ್ಪ ವಾಸವಿದ್ದಾರೆ. ಈ ನಡುವೆ ‘ಕೋವಿಡ್ ಸಂಕಷ್ಟದ ನಂತರ ಆರ್ಥಿಕ ಪರಿಸ್ಥಿತಿ ದುರ್ಲಬವಾಗಿದೆ. ಸಮಯಕ್ಕೆ ಸರಿಯಾಗಿ ವೇತನ ಆಗದೇ ಜೀವನ ನಿರ್ವಹಣೆಗೆ ತುಂಬಾ ತೊಂದರೆ ಆಗಿದೆ ಎಂದು ಅಣ್ಣ ಬೇಸರ ಪಟ್ಟುಕೊಂಡಿದ್ದನು.

ಅತ್ತಿಗೆ ರೂಪಾ ಅವರ ಬಳಿಯೂ ಮಂಗಳವಾರ ಬೆಳಗ್ಗೆ ಅಳಲು ತೋಡಿಕೊಂಡಿದ್ದನು. ಈ ಬಾರಿ ದೀಪಾವಳಿ ಹಬ್ಬಕ್ಕೆ ಹಣದ ತೊಂದರೆ ಆಗಿತ್ತು. ಹೀಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಸಹೋದರ ಪರಸಪ್ಪಗೊಂದಿ ತಿಳಿಸಿದ್ದಾರೆ.

ಇನ್ನು ಸೆಪ್ಟೆಂಬರ್‌ ತಿಂಗಳ ಅರ್ಧವೇತನವನ್ನು ಉಳಿಸಿಕೊಂಡಿರುವ ಸಾರಿಗೆ ಸಂಸ್ಥೆಗಳು ನ.2ರಂದು (ನಿನ್ನೆ) ಅಕ್ಟೋಬರ್‌ ಅರ್ಧ ವೇತನವನ್ನು ಬಿಡುಗಡೆ ಮಾಡಿವೆ. ಇನ್ನು ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳುಗಳ ಅರ್ಧ ಅರ್ಧ ವೇತನ ಯಾವಾಗ ಕೊಡೋದು ಎಂದು ನೌಕರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈಗ ಬಸ್‌ಗಳಲ್ಲಿ ಪ್ರಯಾಣಿಕರು ಕೊರೊನಾ ಬರುವುದಕ್ಕೂ ಹಿಂದೆ ಇದ್ದಂತೆ ಓಡಾಡುತ್ತಿದ್ದಾರೆ. ಇನ್ನು ಹೆಚ್ಚಾಗಿ ಹೇಳಬೇಕು ಎಂದರೆ ಇಂಧನ ದರ ಹೆಚ್ಚಾಗಿರುವುದರಿಂದ ಹಲವು ಮಂದಿ ಸಾರಿಗೆ ಬಸ್‌ಗಳನ್ನೇರಿ ತಾವು ತಲುಪಬೇಕಾದ ಸ್ಥಳಕ್ಕೆ ಹೋಗುತ್ತಿದ್ದಾರೆ. ಆದರೆ ಇತ್ತ ಸಾರಿಗೆ ಅಧಿಕಾರಿಗಳು ಮಾತ್ರ ಇನ್ನು ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿಲ್ಲ ಎಂಬ ಸಬೂಬು ಹೇಳುತ್ತಿದ್ದಾರೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ