NEWSನಮ್ಮಜಿಲ್ಲೆರಾಜಕೀಯ

ಪಿರಿಯಾಪಟ್ಟಣ ತಾಲೂಕು ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಬಿ.ಸಿ.ನಟರಾಜ್ ನೇಮಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ತಾಲೂಕು ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ನೇಮಕವಾದ ಕೊಪ್ಪ ಗ್ರಾಮದ ಬಿ.ಸಿ.ನಟರಾಜ್ ಅವರಿಗೆ ತಾಲೂಕು ಘಟಕದ ಅಧ್ಯಕ್ಷ ಎಂ.ಎಂ.ರಾಜೇಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಬೆಮ್ಮತಿ ಚಂದ್ರು ನೇಮಕಾತಿ ಪತ್ರ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನೂತನ ಉಪಾಧ್ಯಕ್ಷ ಬಿ.ಸಿ.ನಟರಾಜ್ ನಟರಾಜು ಮಾತನಾಡಿ, ಭಾರತೀಯ ಜನತಾ ಪಕ್ಷವು ದೇಶಪ್ರೇಮ ಹಾಗೂ ಶಿಸ್ತು ಮತ್ತು ಸಿದ್ಧಾಂತಕ್ಕೆ ಹೆಸರಾದ ಪಕ್ಷವಾಗಿದ್ದು ದೇಶದ ರಕ್ಷಣೆಯನ್ನೇ ತನ್ನ ಉಸಿರನ್ನಾಗಿಸಿಕೊಂಡು ಸಮಸ್ತ ಭಾರತೀಯರ ಅಭಿವೃದ್ದಿಯ ಪಣತೊಟ್ಟು ದುಡಿಯುತ್ತಿದೆ ಎಂದರು.

ಇನ್ನು ಇಂತ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ಗುರುತಿಸಿ ಉತ್ತಮ ಜವಾಬ್ದಾರಿಯನ್ನು ನೀಡಿದೆ. ಆದ್ದರಿಂದ ಪಕ್ಷದ ಸಿದ್ಧಾತಕ್ಕೆ ಧಕ್ಕೆಯಾಗದ ರೀತಿಯಲ್ಲಿ ತಾಲೂಕಿನ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಾಲೂಕಿನ ಕೊಪ್ಪ ಭಾಗದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಮೂಂದಿನ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ನನಗೆ ಈ ಒಂದು ಗುರುತರವಾದ ಜವಾಬ್ದಾರಿ ನೀಡಲು ಕಾರಣರಾದ ಪಕ್ಷದ ತಾಲೂಕು ಘಟಕಕ್ಕೆ, ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಎಂದರು.

ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಡಾ.ನವೀನ್ ಕುಮಾರ್, ತಾಲೂಕು ಘಟಕದ ಅಧ್ಯಕ್ಷ ಎಂ.ಎಂ.ರಾಜೇಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಬೆಮ್ಮತಿ ಚಂದ್ರು, ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷ ಲೋಕಪಾಲಯ್ಯ, ಕೊಪ್ಪ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದನ್, ಉಪಾಧ್ಯಕ್ಷ ನಾರಾಯಣ, ಹುಣಸವಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹೆಮ್ಮಿಗೆ ರವಿ, ಉಪಾಧ್ಯಕ್ಷ ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ