NEWSನಮ್ಮರಾಜ್ಯರಾಜಕೀಯ

ಸಚಿವ ಕಾರಜೋಳ, ಜಿಗಜಿಣಗಿಗೆ ನಾಚಿಕೆಯಾಗಬೇಕು: ಮಾಜಿ ಸಚಿವ ಎಚ್‌ಸಿಎಂ ಆಕ್ರೋಶ

ಅಧಿಕಾರ ಸಿಕ್ಕಾಗ ದಲಿತರ ಪರವಾಗಿ ಅತಿ ಹೆಚ್ಚಿನ ಕೆಲಸ ಮಾಡಿದ ಸಿದ್ದರಾಮಯ್ಯ ಒಬ್ಬ ನಿಜವಾದ ಅಂಬೇಡ್ಕರ್ ವಾದಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದಲಿತ ಸಮುದಾಯಕ್ಕೆ ಸೇರಿದ್ದರೂ ದಲಿತರ ನ್ಯಾಯಬದ್ಧ ಅವಕಾಶಗಳನ್ನು ಕಸಿದುಕೊಳ್ಳುತ್ತಿರುವ ಬಗ್ಗೆ ತುಟಿಕ್- ಪಿಟಿಕ್ ಎನ್ನದ ಸಚಿವರಾದ ಗೋವಿಂದ ಕಾರಜೋಳ, ರಮೇಶ್‌ ಜಿಗಜಿಣಗಿ ಅವರು ಸಿದ್ದರಾಮಯ್ಯ ಅವರ ಮಾತನ್ನು ತಿರುಚಿ ಅಪಪ್ರಚಾರಕ್ಕೆ ಮುಂದಾಗಿರುವುದು ಹಾಸ್ಯಾಸ್ಪದ ಸಂಗತಿ ಎಂದು ಲೋಕೋಪಯೋಗಿ ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರ ಸಿಕ್ಕಾಗ ದಲಿತರ ಪರವಾಗಿ ಅತಿ ಹೆಚ್ಚಿನ ಕೆಲಸ ಮಾಡಿದ ಸಿದ್ದರಾಮಯ್ಯ ಅವರು ಒಬ್ಬ ನಿಜವಾದ ಅಂಬೇಡ್ಕರ್ ವಾದಿ. ದಲಿತರಿಗೆ ಎಸ್‌ಸಿಪಿ/ ಟಿಎಸ್‌ಪಿ ಕಾಯ್ದೆ, ಜಾರಿಗೊಳಿಸಿ, ಗುತ್ತಿಗೆ ಮೀಸಲಾತಿ, ಬಡ್ತಿ ಮೀಸಲಾತಿ, ಕಲ್ಲು ಗಣಿಗಾರಿಕೆಯಲ್ಲಿ ಮೀಸಲಾತಿ ಹಾಗೂ ಕೈಗಾರಿಕೆಯಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿದರು.

ಅಲ್ಲದೆ ಅದಕ್ಕಾಗಿ 30 ಸಾವಿರ ಕೋಟಿ ರೂ.ಗಳ ಅನುದಾನವನ್ನೂ ಮೀಸಲಿಟ್ಟಿದ್ದರು. ಬಹುಶಃ ಈಗ ದೊಡ್ಡದಾಗಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ಯಾವ ನಾಯಕರೂ ಕೂಡಾ ಸಿದ್ದರಾಮಯ್ಯನವರ ರೀತಿ ತಮ್ಮ ರಾಜಕೀಯ ಇತಿಹಾಸದಲ್ಲಿ ದಲಿತರ ಪರವಾದ ಕಾರ್ಯಕ್ರಮ ರೂಪಿಸುವುದಿರಲಿ ಹಾಗೆ ಯೋಚಿಸಲೂ ಸಾಧ್ಯವಿಲ್ಲ ಎಂದು ಹರಿಹಾಯ್ದರು.

ದಲಿತರಾಗಿದ್ದರೂ ಪ.ಜಾತಿ ಮತ್ತು ಪಂಗಡ ಕಾಯ್ದೆಯ ಹಣವನ್ನು ಕಡಿತಗೊಳಿಸಿ, ಕೋಮುವಾದಿ ಪಾಳಯಕ್ಕೆ ಸೇರಿ, ಸಿದ್ದರಾಮಯ್ಯ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಕಾರಜೋಳ, ಜಿಗಜಿಣಗಿ ಹಾಗೂ ನಾರಾಯಣಸ್ವಾಮಿ ಅವರಿಗೆ ನಾಚಿಕೆಯಾಗಬೇಕು ಎಂದು ಚಾಟಿ ಬೀಸಿದರು.

ಇನ್ನು ಬಾಬಾ ಸಾಹೇಬರ ಹೆಸರಿನಲ್ಲಿ ಅಪಪ್ರಚಾರ ಮಾಡುವುದು ಸುಲಭ ಆದರೆ ಅವರ ಆಶಯಕ್ಕೆ ಅನುಗುಣವಾಗಿ ಕೆಲಸ ಮಾಡುವುದು ಇವರ ಕೈಯಲ್ಲಿ ಆಗದ ಕೆಲಸ ಎಂದು ಆಕ್ರೋಶ ಹೊರಹಾಕಿದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ