NEWSಆರೋಗ್ಯದೇಶ-ವಿದೇಶ

ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಓಕೆ ಎಂದ ವಿಶ್ವ ಆರೋಗ್ಯ ಸಂಸ್ಥೆ

ಭಾರತದ 'ಕೋವ್ಯಾಕ್ಸಿನ್' ಕೋವಿಡ್ ಲಸಿಕೆಗೆ ಕೊನೆಗೂ ವಿಶ್ವ ಆರೋಗ್ಯ ಸಂಸ್ಥೆ ಮನ್ನಣೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಭಾರತ್ ಬಯೋಟೆಕ್(Bharat Biotech) ನ ಕೊವ್ಯಾಕ್ಸಿನ್ (Covaxin) ಲಸಿಕೆಯನ್ನು ತುರ್ತು ಬಳಕೆಗಾಗಿ ವಿಶ್ವ ಆರೋಗ್ಯ ಸಂಸ್ಥೆಯ (World Health Organization) ಕೊನೆಗೂ ಅನುಮೋದಿಸಿದೆ.

ಈ ಮೂಲಕ ಬಹಳ ದಿನಗಳಿಂದ ಕಾಯುತ್ತಿದ್ದ ಭಾರತದ ‘ಕೋವ್ಯಾಕ್ಸಿನ್’ ಕೋವಿಡ್ ಲಸಿಕೆಗೆ ಕೊನೆಗೂ ವಿಶ್ವ ಆರೋಗ್ಯ ಸಂಸ್ಥೆ ಮನ್ನಣೆ ನೀಡಿ ತುರ್ತು ಬಳಕೆಗೆ ಗ್ರೀನ್‌ ಸಿಗ್ನಲ್‌ ತೋರಿಸಿದೆ.

ಕೋವ್ಯಾಕ್ಸಿನ್ ಲಸಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ ತನ್ನ ಲಸಿಕೆಗಳ ತುರ್ತು ಬಳಕೆಯ ಪಟ್ಟಿ (emergency use listing – EUL)ಗೆ ಅಧಿಕೃತವಾಗಿ ಸೇರ್ಪಡೆ ಮಾಡಿಕೊಂಡಿದೆ. ಈ ಮೂಲಕ ಭಾರತದ ಕೋವ್ಯಾಕ್ಸಿನ್ ಲಸಿಕೆಗೆ ಜಾಗತಿಕ ಮನ್ನಣೆ ದೊರೆತಂತ್ತಾಗಿದೆ.

ಇತ್ತೀಚೆಗಷ್ಟೇ ಭಾರತ್ ಬಯೋಟೆಕ್‌ನ ಕೋವಿಡ್ ವಿರೋಧಿ ಲಸಿಕೆ ಕೋವಾಕ್ಸಿನ್‌ಗೆ ತುರ್ತು ಬಳಕೆಯ ಅಧಿಕಾರವನ್ನು ನೀಡುವ ಕುರಿತು ನಿರ್ಧರಿಸಲು ತಾಂತ್ರಿಕ ಸಲಹಾ ಗುಂಪು (TAG), ವಿಶ್ವ ಆರೋಗ್ಯ ಸಂಸ್ಥೆಯ (WHO) ಸ್ವತಂತ್ರ ಸಲಹಾ ಸಮಿತಿಯು ಸಭೆ ನಡೆಸಿತ್ತು. ಈ ಸಭೆಯಲ್ಲಿ ಕೋವ್ಯಾಕ್ಸಿನ್ ಲಸಿಕೆಯನ್ನು ತುರ್ತು ಬಳಕೆಗಾಗಿ ಅನುಮತಿಸುವ ಕುರಿತಂತೆ ಚರ್ಚೆ ನಡೆಸಲಾಗಿತ್ತು.

ಲಸಿಕೆಯ ಜಾಗತಿಕ ಬಳಕೆಗಾಗಿ ಅಂತಿಮ ತುರ್ತು ಬಳಕೆಯ ಪಟ್ಟಿ (EUL) ಅಪಾಯ-ಪ್ರಯೋಜನ ಮೌಲ್ಯಮಾಪನವನ್ನು ನಡೆಸುವ ಸಲುವಾಗಿ ತಾಂತ್ರಿಕ ಸಮಿತಿಯು ಈ ಹಿಂದೆ ಕೋವಾಕ್ಸಿನ್‌ನ ತಯಾರಕರಾದ ಭಾರತ್ ಬಯೋಟೆಕ್‌ನಿಂದ ಹೆಚ್ಚುವರಿ ಸ್ಪಷ್ಟೀಕರಣಗಳನ್ನು ಕೇಳಿತ್ತು.

ಅದಕ್ಕೆ ಉತ್ತರಿಸಿದ್ದ ಭಾರತ್ ಬಯೋಟೆಕ್ ಸಂಸ್ಥೆ, ಕೋವ್ಯಾಕ್ಸಿನ್ ರೋಗಲಕ್ಷಣದ COVID-19 ವಿರುದ್ಧ ಶೇ.77.8 ಪರಿಣಾಮಕಾರಿತ್ವವನ್ನು ಹೊಂದಿದ್ದು, ಅಲ್ಲದೆ ಹೊಸ ಡೆಲ್ಟಾ ರೂಪಾಂತರದ ವಿರುದ್ಧ ಶೇ.65.2ರಷ್ಟು ರಕ್ಷಣೆಯನ್ನು ಪ್ರದರ್ಶಿಸಿದೆ. ಹಂತ 3 ಪ್ರಯೋಗಗಳಿಂದ ಕೋವಾಕ್ಸಿನ್ ಪರಿಣಾಮಕಾರತ್ವದ ಅಂತಿಮ ವಿಶ್ಲೇಷಣೆಯನ್ನು ಮುಕ್ತಾಯಗೊಳಿಸಿದೆ ಎಂದು ಹೇಳಿತ್ತು.

ಈ ಎಲ್ಲಾ ಬೆಳವಣಿಗೆಯ ನಂತರ, ಇಂದು ವಿಶ್ವ ಆರೋಗ್ಯ ಸಂಸ್ಥೆಯು ಕೊರೊನಾ ಸೋಂಕಿತರ ತುರ್ತು ಚಿಕಿತ್ಸೆ ಲಸಿಕೆಗಳ ಪಟ್ಟಿಗೆ ಈ ಕೋವ್ಯಾಕ್ಸಿನ್ ಲಸಿಕೆಯ ಸೇರ್ಪಡೆಗೆ ಅನುಮೋದನೆ ನೀಡಿದೆ. ಆ ಮೂಲಕ ಈ ಪಟ್ಟಿಗೆ ಸೇರಿದ ಭಾರತದ ಎರಡನೇ ಲಸಿಕೆ ಎಂಬ ಕೀರ್ತಿಗೂ ಕೋವ್ಯಾಕ್ಸಿನ್ ಪಾತ್ರವಾಗಿದೆ. ಇದಕ್ಕೂ ಮೊದಲು ಈ ಪಟ್ಟಿಗೆ ಅಸ್ಟ್ರಾಜೆನೆಕಾ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್‌ನ ಕೋವಿಶೀಲ್ಡ್ ಅನ್ನು ಸೇರ್ಪಡೆ ಮಾಡಲಾಗಿತ್ತು.

ಇದಲ್ಲದೆ ಫಿಜರ್-ಬಯೋಎನ್‌ಟೆಕ್, ಅಮೆರಿಕ ಮೂಲದ ಜಾನ್ಸನ್ ಮತ್ತು ಜಾನ್ಸನ್, ಮಾಡೆರ್ನಾ, ಚೀನಾದ ಸಿನೋಫಾರ್ಮ್ ಮತ್ತು ಆಕ್ಸ್‌ಫರ್ಡ್ ಸಂಸ್ಥೆಯ ಅಸ್ಟ್ರಾಜೆನೆಕಾ ಲಸಿಕೆಗೆಳಗೆ ವಿಶ್ವ ಆರೋಗ್ಯ ಸಂಸ್ಥೆ ತುರ್ತು ಬಳಕೆಯ ಅನುಮತಿ ನೀಡಿತ್ತು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...