ಬೆಂ.ಗ್ರಾಮಾಂತರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ನೆಂವೆಂಬರ್ 30ರವರೆಗೆ ವಿಸ್ತರಣೆ ಮಾಡಲಾಗಿದೆ.
2021-22ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-l ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”.
“ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನವೆಂಬರ್30 ರವರೆಗೆ ಅವಕಾಧ ಕಲ್ಪಿಸಿಕೊಡಲಾಗಿದೆ.
ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ಸೈಟ್ www.bcwd.karnataka.gov.in ಅನ್ನು ಸಂಪರ್ಕಿಸಬಹುದು ಹಾಗೂ ವೆಬ್ಸೈಟ್ www.ssp.postmatric.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 2021ರ ನವೆಂಬರ್ 30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಇಲಾಖೆಯ ದೂರವಾಣಿ ಸಂಖ್ಯೆ.: 8050770005, 8050770004, ಇಮೇಲ್: [email protected] ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ: 080-35254757, ಇಮೇಲ್: [email protected] ಹಾಗೂ ಸಹಾಯವಾಣಿ ಸಂಖ್ಯೆ: 080-29787440 ಅನ್ನು ಸಂಪರ್ಕಿಸಲು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಭವ್ಯ ತಿಳಿಸಿದ್ದಾರೆ.