NEWSದೇಶ-ವಿದೇಶರಾಜಕೀಯ

ಪೆಟ್ರೋಲ್‌, ಡೀಸೆಲ್‌ ದರ ಇಳಿಕೆ ಹಾಗೆಯೇ ಮುಂದುವರಿಯಲಿ : ಸಚಿವೆ ಶೋಭಾ ಕರಂದ್ಲಾಜೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಉಡುಪಿ: ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ದರವನ್ನು ಇಳಿಕೆ ಮಾಡಿದ್ದು, ಅದು ಹಾಗೆಯೇ ಮುಂದುವರಿಯಲಿ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಇಂಧನ ದರ ಕಡಿಮೆಯಾಗಿದ್ದು, ಅದು ಹಾಗೆಯೇ ಉಳಿಯಬೇಕು. ನಮ್ಮ ಗ್ರಾಹಕರಿಗೆ ಒಳ್ಳೆಯದಾಗಬೇಕು. ಪೆಟ್ರೋಲ್ ದರ ಆಧರಿಸಿ ಇತರ ಪದಾರ್ಥಗಳ ಬೆಲೆ ಏರಿಕೆಯಾಗುತ್ತದೆ. ದರ ಯಥಾಸ್ಥಿತಿ ಇದ್ದರೆ ಜನರಿಗೆ ಅನುಕೂಲವಾಗುತ್ತದೆ. ಪ್ರಧಾನಿಯವರು ಒಳ್ಳೆಯ ಕೊಡುಗೆ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪೆಟ್ರೋಲಿಯಮ್ ಉತ್ಪನ್ನಗಳು ನಮ್ಮ ದೇಶದಲ್ಲಿ ಉತ್ಪಾದನೆಯಾಗುವ ಪದಾರ್ಥವಲ್ಲ ಹೀಗಾಗಿ ಬೆಲೆ ನಿಗದಿ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ಇಲ್ಲ. ಕೇಂದ್ರ ಸರ್ಕಾರ ಡೀಸೆಲ್‌, ಪೆಟ್ರೋಲ್ ದರ ಕಡಿಮೆ ಮಾಡಿ ದೀಪಾವಳಿಯಲ್ಲಿ ಜನತೆಗೆ ಹೊಸ ಕೊಡುಗೆ ನೀಡಿದೆ. ದರ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂಬ ಅಪೇಕ್ಷೆ ಇದೆ ಎಂದು ಆಶಯ ವ್ಯಕ್ತಪಡಿಸಿದರು.

ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರುಪೇರಾದಾಗ ದರ ವ್ಯತ್ಯಾಸ ಆಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಈ ರೀತಿಯಾಗುತ್ತಿದೆ. ಕೇವಲ ನಮ್ಮ ಸರ್ಕಾರ ಮಾತ್ರವಲ್ಲ, ಆಯಾ ಸರ್ಕಾರಗಳ ಅವಧಿಯಲ್ಲೂ ಹೀಗೆಯೇ ಆಗಿದೆ ಎಂದರು.

ಉಪಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯೆ: ಚುನಾವಣೆಯ ಫಲಿತಾಂಶ ಈಗ ವಿಶ್ಲೇಷಣೆ ಮಾಡಲು ಸಾಧ್ಯವಿಲ್ಲ. ಎರಡು ಪಕ್ಷಗಳು ತಲಾ ಒಂದೊಂದು ಸ್ಥಾನ ಗೆದ್ದಿವೆ. ಪ್ರಜಾತಂತ್ರದಲ್ಲಿ ಜನರ ತೀರ್ಪನ್ನು ನಾವು ಸ್ವಾಗತಿಸಬೇಕು. ಹೋಲಿಕೆ ಮಾಡಲು ಹೋದರೆ ಸಿಂದಗಿಯಲ್ಲಿ ನಾವು ದೊಡ್ಡ ಅಂತರದಲ್ಲಿ ಗೆದ್ದಿದ್ದೇವೆ.

ಉಪಚುನಾವಣೆಯಲ್ಲಿ ಇಷ್ಟು ದೊಡ್ಡ ಪ್ರಮಾಣದ ಅಂತರ ಸುಲಭದ ವಿಚಾರವಲ್ಲ. ಒಬ್ಬ ಸಾಮಾನ್ಯ ಅಭ್ಯರ್ಥಿಯನ್ನು ಇಟ್ಟುಕೊಂಡು ಗೆದ್ದಿದ್ದೇವೆ. ಫಲಿತಾಂಶ ನೋಡಿ ಒಬ್ಬ ವ್ಯಕ್ತಿ ಅಥವಾ ಸರ್ಕಾರದ ಬಗ್ಗೆ ನಿರ್ಧಾರ ಮಾಡುವುದು ಸರಿಯಲ್ಲ ಎಂದು ಉಪಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿದರು.

ಭತ್ತ ಬೆಳೆಗಾರರಿಗೆ ಬೆಂಬಲ ಬೆಲೆ ವಿಚಾರ: ಕರಾವಳಿ ಜಿಲ್ಲೆಗಳ ರೈತ ಮುಖಂಡರು ನನ್ನನ್ನು ಭೇಟಿಯಾಗಿದ್ದರು. ಭತ್ತಕ್ಕೆ ಕೇಂದ್ರ ಸರ್ಕಾರ 1,940 ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಿದೆ. ತಕ್ಷಣ ಖರೀದಿ ಕೇಂದ್ರ ಆರಂಭಿಸಲು ಕರ್ನಾಟಕ ಸರ್ಕಾರಕ್ಕೆ ಸೂಚಿಸಿದ್ದೇವೆ. ಖರೀದಿ ಕೇಂದ್ರ ಆರಂಭಿಸಲು ಇದು ಸಕಾಲ. ತಕ್ಷಣವೇ ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ