CrimeNEWSಸಿನಿಪಥ

 ವೈದ್ಯರ ವಿರುದ್ಧ ಅಪ್ಪು ಅಭಿಮಾನಿ ದೂರು- ಅವನೇ ಇಲ್ಲದ ಮೇಲೆ ದೂರು ಕೊಟ್ಟು ಏನು ಪ್ರಯೋಜನ ಎಂದ ಶಿವಣ್ಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಸಾವು ಇಡೀ ಚಿತ್ರರಂಗ, ಕುಟುಂಬ, ಅಭಿಮಾನಿಗಳನ್ನು ಕಂಗಾಲಾಗಿಸಿದೆ. ಈ ಮಧ್ಯೆ ಅಭಿಮಾನಿಯೊಬ್ಬ ಸದಾಶಿವನಗರದಲ್ಲಿ ವೈದ್ಯರ ವಿರುದ್ಧ ದೂರು ನೀಡಿದ್ದಾರೆ.

ಅದಕ್ಕೆ ಪ್ರತಿಕ್ರಿಯಿಸಿರುವ ಶಿವರಾಜ್‌ ಕುಮಾರ್‌, ಅವನೇ ಇಲ್ಲ ಅಂದಮೇಲೆ ದೂರು ಕೊಟ್ಟು ಏನು ಪ್ರಯೋಜನ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಈಗ ಅವನೇ ಇಲ್ಲ. ಹೀಗಿರುವಾಗ ದೂರು ಕೊಟ್ಟು ಏನು ಪ್ರಯೋಜನ. ಮುಂದೊಂದು ದಿನ ಅವರಿಗೆ ಅರ್ಥವಾಗುತ್ತದೆ. ನಾವೇನು ಮಾಡೋದು ಬೇಕಾಗಿಲ್ಲ. ದೇವರಿದ್ದಾನೆ. ದಯವಿಟ್ಟು ಅದೆಲ್ಲಾ ಬೇಡ. ಈಗ ಅದೆಲ್ಲವನ್ನು ಮಾತನಾಡಿ ಪ್ರಯೋಜನವಿಲ್ಲ. ಅದೆಲ್ಲ ಬಿಟ್ಟು ಮುಂದೆ ಸಾಗೋಣ ಎಂದು ಹೇಳಿದರು.

ದೂರಿನಲ್ಲೇನಿದೆ..?: ವೈದ್ಯರು ಸರಿಯಾದ ಸಮಯಕ್ಕೆ ಅಲ್ಲಿಗೆ ಹೋಗಿಲ್ಲ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡುತ್ತಿದ್ದರೆ ಪುನೀತ್ ಅವರಿಗೆ ಹೀಗಾಗುತ್ತಿರಲಿಲ್ಲ ಎಂದು ಅಭಿಮಾನಿ ವೈದ್ಯರ ವಿರುದ್ಧ ಸದಾಶಿವನಗರದಲ್ಲಿ ದೂರು ಕೊಟ್ಟಿದ್ದಾರೆ.

ಇದರಿಂದ ಪ್ರಯೋಜನವಿಲ್ಲ ಏನು ಆಗಬಾರದಿತ್ತೊ ಅದು ಆಗಿ ಹೋಗಿದೆ. ಹೀಗಾಗಿ ಒಬ್ಬರ ವಿರುದ್ಧ ಒಬ್ಬರು ನಡೆದುಕೊಂಡರೆ ಪ್ರಯೋಜನವಿಲ್ಲ ಎಂದು ಅಭಿಮಾನಿಗೆ ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ