NEWSಕೃಷಿನಮ್ಮರಾಜ್ಯ

ತೊಗರಿ ಬೆಳೆಯಲ್ಲಿ ಉತ್ತಮ ಇಳುವರಿಗೆ ತಾಂತ್ರಿಕ ಸಲಹೆ ಕೊಟ್ಟ ಕೃಷಿ ವಿಜ್ಞಾನಿಗಳು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಹನುಮನಮಟ್ಟಿ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ರಾಣೇಬೆನ್ನೂರ ತಾಲೂಕಿನ ಕಮದೋಡ ಗ್ರಾಮದಲ್ಲಿ ಗುಚ್ಛ ಕ್ಷೇತ್ರ ಪ್ರಾತ್ಯಕ್ಷಿಕೆಯ ಕ್ಷೇತ್ರದಲ್ಲಿ ಪ್ರಗತಿಪರ ರೈತರಾದ ಗಣೇಶ ಆರ್. ಕುಂಟೇರ್ ಮತ್ತು ಹನುಮಂತಪ್ಪ ಬಣಕಾರ ಅವರ ತೊಗರಿ ಕ್ಷೇತ್ರಕ್ಕೆ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಭೇಟಿ ನೀಡಿ ತಾಂತ್ರಿಕ ಸಲಹೆ ನೀಡಿದರು.

ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಅಶೋಕ ಪಿ. ಮಾತನಾಡಿ, ಈ ವರ್ಷ ಜಿಲ್ಲೆಯಲ್ಲಿ ಏಕ ಬೆಳೆಯಾಗಿ ಹಾಗೂ ಅಂತರ ಬೆಳೆಗಳಾಗಿ ತೊಗರಿ ಬೆಳೆಯನ್ನು ರೈತರು ಬೆಳೆದಿದ್ದು, ಈ ಬೆಳೆಯು ಕೈಹಿಡಿಯುವ ಲಕ್ಷಣಗಳು ಗೋಚರಿಸುತ್ತಿವೆ. ತೊಗರಿ ಸದ್ಯ ಹೂ ಬಿಡುವ ಹಂತದಲ್ಲಿದೆ. ಉತ್ತಮ ಮಳೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಕೀಟ ಬಾಧೆ ಇಲ್ಲ. ಆದ್ದರಿಂದ ರೈತರು ಉತ್ತಮ ಇಳುವರಿ ಬರಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ ಎಂದರು.

ಈ ತೊಗರಿ ಬೆಳೆಯ ಎಲೆಗಳು ಕಟಾವಿನ ಹಂತದಲ್ಲಿ ಒಣಗಿ ಉದುರುವುದರಿಂದ ಭೂಮಿಯ ಭೌತಿಕ ಜೈವಿಕ ಚಟುವಟಿಕೆಗಳಿಗೆ ಚಾಲನೆ ದೊರೆತು ಮಣ್ಣಿನ ಫಲವತ್ತತೆಯಲ್ಲಿ ಸ್ಥಿರತೆಯನ್ನು ಕಾಪಾಡುತ್ತದೆ. ತೊಗರಿ ಬೆಳೆ ಹೊಂದಿರುವ ಪ್ರತಿಯೊಬ್ಬ ರೈತರು ಆರಂಭಿಕವಾಗಿ ಬೇವಿನೆಣ್ಣೆ 5 ಮಿ.ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡಬೇಕು.

ಎರಡು ಹಾಗೂ ಮೂರನೇ ಹಂತದ ಕೀಡೆಗಳು ಕಂಡು ಬಂದಿದ್ದರೆ ಪ್ರತಿ ಲೀಟರ್ ನೀರಿಗೆ 2 ಮಿ.ಲೀ ಪ್ರೊಫೆನೊಫಾಸ್ ಪ್ರತಿ ಲೀಟರ್ ನೀರಿಗೆ ಮಿಶ್ರಣ ಮಾಡಿ ಸಿಂಪರಣೆ ಮಾಡಬೇಕು. ಅಂದರೆ ಮಾತ್ರ ಉತ್ತಮ ಇಳುವರಿ ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ನಂತರ ತೊಗರಿಯಲ್ಲಿ ಪಲ್ಸ ಮ್ಯಾಜಿಕ್ ಬಳಸಿ ಇಳುವರಿ ಹೆಚ್ಚಿಸಲು ಈ “ಪಲ್ಸ್ ಮ್ಯಾಜಿಕ್” ಒಂದು ಪೋಷಕಾಂಶಗಳ ಮತ್ತು ಸಸ್ಯ ಪ್ರಚೋದಕಗಳ ಸಮ್ಮಿಶ್ರಣವಾಗಿದೆ. ಪಲ್ಸ ಮ್ಯಾಜಿಕ್ ಅನ್ನು ಬಳಸುವುದರಿಂದ ಕೇವಲ ಹೂ ಉದುರುವುದನ್ನು ತಡೆಗಟ್ಟುವುದಲ್ಲದೇ ಕಾಳುಗಳು ಗಾತ್ರ ಮತ್ತು ಗುಣಮಟ್ಟ ವೃದ್ಧಿಯಾಗುವುದರ ಜೊತೆಗೆ ಕಾಯಿಗಳ ಸಂಖ್ಯೆ ಹೆಚ್ಚಾಗುವುದು ಹಾಗೂ ಟೋಂಗೆಗಳಲ್ಲಿ ಕೊನೆಯವರೆಗೂ ಕಾಯಿ ಕಟ್ಟುತ್ತವೆ.

ಈ ಪಲ್ಸ ಮ್ಯಾಜಿಕ್‍ನ್ನು 10 ಗ್ರಾಂ ಪುಡಿ 1 ಲೀಟರ ನೀರಿನಲ್ಲಿ ಬೆರೆಸಿ ಚೆನ್ನಾಗಿ ಮಿಶ್ರಣಮಾಡಿ ಸಿಂಪಡಿಸಬೇಕು. ಸಿಂಪರಣೆಯನ್ನು ಬೆಳಗ್ಗೆ 8-10 ಹಾಗೂ ಸಾಯಂಕಾಲ 4-6 ಗಂಟೆಯವರೆಗೆ ಕೈಗೊಳ್ಳುವುದು ಸೂಕ್ತ. ಪಲ್ಸ್ ಮ್ಯಾಜಿಕಿನ ಮೊದಲನೇ ಸಿಂಪರಣೆಯನ್ನು ಬೆಳೆಯ ಶೇಕಡಾ 50 ರಷ್ಟು ಹೂವಾಡುವ ಹಂತದಲ್ಲಿ ಹಾಗೂ ಎರಡನೇ ಸಿಂಪರಣೆಯನ್ನು 15 ದಿವಸಗಳ ನಂತರ ಕೈಗೊಳ್ಳಬೇಕು.

ಪಲ್ಸ್ ಮ್ಯಾಜಿಕನ್ನು ಯಾವುದೆ ಕೀಟನಾಶಕ ಅಥವಾ ಶಿಲೀಂದ್ರನಾಶಕ ( ತಾಮ್ರಯುಕ್ತ ಹೊರತುಪಡಿಸಿ) ಗಳೊಂದಿಗೆ ಮಿಶ್ರಣ ಮಾಡಬಹುದು. ಪ್ರತಿ ಎಕರೆಗೆ 4 ಕಿ.ಗ್ರಾಂ ಪಲ್ಸ್ ಮ್ಯಾಜಿಕ್ (2 ಬಾರಿ) ನ್ನು ಬಳಸಿ ಹೆಚ್ಚಿನ ಇಳುವರಿ ಪಡೆಯಿರಿ ಎಂದು ಸಲಹೆ ನೀಡಿದರು.

ವಿಪರೀತ ಮಳೆ ಕಾರಣಕ್ಕೆ ಬಹುತೇಕ ಬೆಳೆಗಳು ಹಾಳಾಗಿದ್ದರೆ ತೊಗರಿ ಬೆಳೆಗೆ ಮಾತ್ರ ಮಳೆ ಪೂರಕವಾಗಿದ್ದು, ನಾಲ್ಕಾರು ವರ್ಷಗಳಲ್ಲಿ ಕಂಡರಿಯದ ರೀತಿಯಲ್ಲಿ ಈ ಬಾರಿ ತೊಗರಿ ಬೆಳೆ ಬೆಳೆದಿದೆ ಎಂದು ಪ್ರಗತಿ ಪರ ರೈತ ಗಣೇಶ ರಾಮಪ್ಪ ಕುಂಟೇರ್ ಹೇಳಿದರು. ಕೇಂದ್ರದ ವಿಜ್ಞಾನಿಗಳಾದ ಡಾ. ಶಾಂತವೀರಯ್ಯ ಇದ್ದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ