NEWSನಮ್ಮರಾಜ್ಯಸಂಸ್ಕೃತಿ

ಹೊಸ ಬಟ್ಟೆ, ಸಿಹಿ ವಿತರಿಸಿ ಅನಾಥಾಶ್ರಮದ ಮಕ್ಕಳೊಂದಿಗೆ ದೀಪಾವಳಿ ಆಚರಿಸಿದ ಡಿಸಿ ಸಂಜಯ ಶೆಟ್ಟೆಣ್ಣವರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಅನಾಥ ಮಕ್ಕಳೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಿದ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಕ್ಕಳಿಗೆ ಹೊಸ ಬಟ್ಟೆ ಹಾಗೂ ಸಿಹಿ ವಿತರಿಸಿ ಶುಭ ಹಾರೈಸಿದರು.

ಗುರುವಾರ ಮಧ್ಯಾಹ್ನ ಅನಾಥಾಶ್ರಮದ ಮಕ್ಕಳು ವೃದ್ಧಾಶ್ರಮದಲ್ಲಿ ಆಶ್ರಯ ಪಡೆದಿರುವ ಹಿರಿಯರನ್ನು ಮನೆಗೆ ಆಹ್ವಾನಿಸಿ ದೀಪಾವಳಿಯ ಆಚರಿಸಿದರು.

ಜಿಲ್ಲಾಧಿಕಾರಿಗಳಿಗೆ ಜೊತೆಯಾದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅವರು ವೃದ್ಧರು ಮತ್ತು ಮಕ್ಕಳೊಂದಿಗಿನ ದೀಪಾವಳಿ ಸಂಭ್ರಮದಲ್ಲಿ ಭಾಗವಹಿಸಿ ಬೋಂದಿ ಹಾಗೂ ಬೆಸನ್ ಲಾಡು, ಚಾಕಲೇಟ್ ಹಾಗೂ ಬಾಳೆಹಣ್ಣು ವಿತರಿಸಿದರು. ಆಶ್ರಮದಲ್ಲಿ ಸಿಹಿಯ ಹೋಳಿಗೆಯ ಊಟ ಸಿದ್ಧ ಪಡಿಸಲಾಗಿತ್ತು.

ಶಕ್ತಿ ವೃದ್ಧಾಶ್ರಮದಿಂದ 22 ಜನ ವಯೋವೃದ್ಧ ಪುರುಷರಿಗೆ ಶರ್ಟ್, ಪಂಚೆ, ಟವೆಲ್ ಹಾಗೂ ಮಹಿಳೆಯರಿಗೆ ಸೀರೆ, ರವಿಕೆ,ಟವೆಲ್ ಹಾಗೂ ಸರ್ಕಾರಿ ತೆರೆದ ತಂಗುದಾಣದಲ್ಲಿ ಆಶ್ರಯ ಪಡೆದಿರುವ 12 ಜನ ಮಕ್ಕಳು ಭಾಗವಹಿಸಿದ್ದು, ಬಾಲಕಿಯರಿಗೆ ಸ್ಕರ್ಟ್ ಹಾಗೂ ಬಾಲಕರಿಗೆ ಪ್ಯಾಂಟ್ ಶರ್ಟ್ ವಿತರಿಸಲಾಯಿತು.

ಮಕ್ಕಳಿಗೆ ಸಿಹಿ ಮತ್ತು ಬಟ್ಟೆ ವಿತರಿಸಿದ ಮಾತನಾಡಿದ ಜಿಲ್ಲಾಧಿಕಾರಿಗಳು ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗ ಸಂಪಾದಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ, ನಿಮಗೆ ಒಳ್ಳೆಯ ಭವಿಷ್ಯ ಸಿಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್ ಆಲದರ್ತಿ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ, ಶ್ರೀಮತಿ ಅಂಕಿತಾ ವರ್ಮಾ ಮಹಮ್ಮದ ರೋಷನ್ ಇತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ