Vijayapatha – ವಿಜಯಪಥ
Saturday, November 2, 2024
CrimeNEWSನಮ್ಮರಾಜ್ಯ

ಸಾವಿನ ಹಾದಿ ಹಿಡಿದ ಸಾರಿಗೆ ನೌಕರ; ಕೊನೆಗೂ ಬದುಕಿ ವಾಪಸ್‌ ಬರಲೇ ಇಲ್ಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಸಮಯಕ್ಕೆ ಸರಿಯಾಗಿ ವೇತನ  ಕೊಡುತ್ತಿ. ಇನ್ನು ಕೊಡುವ ಅರ್ಧ ವೇತನದಲ್ಲಿ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಮನನೊಂದು ಮಂಗಳವಾರ ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ ವಾಯವ್ಯ ಸಾರಿಗೆ ಸಂಸ್ಥೆ ನೌಕರ ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ನಿವಾಸಿ ಭರಮಪ್ಪ ಗೊಂದಿ(44) ಮೃತರು. ಬಾದಾಮಿ ಡಿಪೋದಲ್ಲಿ ಕಳೆದ 13 ವರ್ಷಗಳಿಂದ ಚಾಲಕ ಕಂ ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿದ್ದ ಭರಮಪ್ಪ, ಲಕ್ಷಾಂತರ ರೂಪಾಯಿ ಸಾಲಮಾಡಿದ್ದರು.

ಮುಷ್ಕರದ ಬಳಿಕ ಸರಿಯಾದ ಸಮಯಕ್ಕೆ ವೇತನ ನೀಡುತ್ತಿಲ್ಲ. ಜತೆಗೆ ಅರ್ಧ ವೇತನ ಹಾಕುತ್ತಿದ್ದಾರೆ. ಇದರಿಂದ ಸಂಸಾರ ನಡೆಸುವುದು ತುಂಬಾ ಕಷ್ಟಕರವಾಗುತ್ತಿದೆ ಎಂದು ದುಃಖ ಹಂಚಿಕೊಂಡಿದ್ದರು. ಇದರಿಂದ ಮನನೊಂದು ಕಳೆದ ಮಂಗಳವಾರ (ನ.2) ಆತ್ಮಹತ್ಯೆಗೆ ಯತ್ನಿಸಿದರು. ಕೂಡಲೇ ಅವರನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಕಳೆದ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸಲಿಲ್ಲ.

ಸಮೀಪದ ಕೆರೂರಿನಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಭರಮಪ್ಪ ವಾಸವಿದ್ದರು. ಈ ನಡುವೆ ‘ಕೋವಿಡ್ ಸಂಕಷ್ಟದ ನಂತರ ಆರ್ಥಿಕ ಪರಿಸ್ಥಿತಿ ದುರ್ಲಬವಾಗಿದೆ. ಸಮಯಕ್ಕೆ ಸರಿಯಾಗಿ ವೇತನ ಆಗದೇ ಜೀವನ ನಿರ್ವಹಣೆಗೆ ತುಂಬಾ ತೊಂದರೆ ಆಗಿದೆ ಎಂದು ಅಣ್ಣ ಬೇಸರ ಪಟ್ಟುಕೊಂಡಿದ್ದನು.

ಅತ್ತಿಗೆ ರೂಪಾ ಅವರ ಬಳಿಯೂ ಮಂಗಳವಾರ ಬೆಳಗ್ಗೆ ಅಳಲು ತೋಡಿಕೊಂಡಿದ್ದನು. ಈ ಬಾರಿ ದೀಪಾವಳಿ ಹಬ್ಬಕ್ಕೆ ಹಣದ ತೊಂದರೆ ಆಗಿತ್ತು. ಹೀಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಸಹೋದರ ಪರಸಪ್ಪಗೊಂದಿ ತಿಳಿಸಿದ್ದರು.

ಭರಮಪ್ಪ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ