NEWSಕೃಷಿನಮ್ಮರಾಜ್ಯ

ಸ್ವ ಸಹಾಯ ಸಂಘಗಳ ಉತ್ಪನ್ನಗಳ ಮಾರಾಟಕ್ಕೆ ಶಾಶ್ವತ ಮಾರುಕಟ್ಟೆ ವ್ಯವಸ್ಥೆ: ಕೃಷಿ ಸಚಿವ ಬಿ.ಸಿ.ಪಾಟೀಲ್‌

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಸರ್ಕಾರದ ಆರ್ಥಿಕ ನೆರವನ್ನು ಸದ್ಬಳಕೆಮಾಡಿಕೊಂಡು ಕಿರು ಉದ್ಯಮಗಳನ್ನು ಆರಂಭಿಸಿ ಸ್ವಾವಲಂಬಿಯಾಗಿ ಬೆಳೆಯಲು ಸ್ವ ಸಹಾಯ ಸಂಘಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಸಲಹೆ ನೀಡಿದರು.

ಭಾನುವಾರ ಹಿರೇಕೆರೂರು ಪೊಲೀಸ್ ಮೈದಾನದಲ್ಲಿ ಆಯೋಜಿಸಲಾದ ಸ್ವ ಸಹಾಯ ಸಂಘದ ಪ್ರತಿನಿಧಿಗಳಿಗೆ ಎನ್.ಆರ್.ಎಲ್.ಎಂ ಯೋಜನೆಯಡಿ 4.35ಕೋಟಿ ರೂ. ಸಾಲದ ಚೆಕ್‍ಗಳನ್ನು ವಿತರಿಸಿ ಮಾತನಾಡಿದ ಅವರು ಸ್ವ ಸಹಾಯ ಸಂಘಗಳ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ತಾಲೂಕಾ ಕೇಂದ್ರದಲ್ಲಿ ಶಾಶ್ವತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಗೃಹ ಬಳಕೆಯ ಆಹಾರ ಉತ್ಪನ್ನಗಳಿಗೆ ಹಾಗೂ ಅಲಂಕಾರಿಕ ವಸ್ತುಗಳಿಗೆ ಬೇಡಿಕೆಗಳು ಹೆಚ್ಚಾಗಿವೆ. ಆನ್‍ಲೈನ್‍ನಂತಹ ಉತ್ತಮ ಮಾರುಕಟ್ಟೆ ಅವಕಾಶವನ್ನು ಬಳಸಿಕೊಂಡು ಗೃಹ ಬಳಕೆ ಸಹಾರ ಪದಾರ್ಥ, ಅಲಂಕಾರಿಕ ವಸ್ತು, ಜೇನು ಸಾಕಾಣಿಕೆ ಸೇರಿದಂತೆ ಹಲವು ಸ್ವ ಉದ್ಯೋಗ ಕೈಗೊಳ್ಳಲು ಸಲಹೆ ನೀಡಿದರು.

ಸಾವಯವ ಕೃಷಿ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಇದೆ. ಕೃಷಿಯಲ್ಲಿ ರಾಸಾಯನಿಕ ಬಳಕೆಯಿಂದ ತಿನ್ನುವ ಆಹಾರ, ಬೆಳೆಯುವ ಭೂಮಿ ವಿಷಮಯವಾಗುತ್ತಿದೆ. ಇದರ ಬದಲು ಸಾಯವ ಕೃಷಿ ಪದ್ಧತಿ ಅಳವಡಿಸಿಕೊಂಡು ಮಿಶ್ರ ಬೆಳೆಯ ಪದ್ಧತಿಯ ಮೂಲಕ ಕೃಷಿಯನ್ನು ಲಾಭದಾಯಕವಾಗಿಸಿ ಎಂದು ಸಲಹೆ ನೀಡಿದರು.

ಎರಡು ಕೋಟಿ ರೂ. ವೆಚ್ಚದಲ್ಲಿ ಕಾರ್ಮಿಕ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಶೀಘ್ರವೇ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗುವುದು. ಕಡಿಮೆ ದರದಲ್ಲಿ ಜನರ ಬಳಕೆಗೆ ನೀಡಲು ಉದ್ದೇಶಿಸಲಾಗಿದೆ ಎಂದರು.

ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಸಾಮಾನ್ಯ ಜನರ ನೆರವಿಗೆ ಸರ್ಕಾರ ಧಾವಿಸಿದೆ. ಕ್ಷೇತ್ರದಲ್ಲಿ 25 ಸಾವಿರ ಆಹಾರ ಕಿಟ್‍ಗಳನ್ನು ಕಾರ್ಮಿಕ ಇಲಾಖೆ ವಿತರಿಸಿದೆ. ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಶ್ರಮವಹಿಸಿದೆ. ಕೋವಿಡ್‍ನಂತಹ ಆರ್ಥಿಕ ಸಂಕಷ್ಟದಲ್ಲೂ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ಕ್ರಮವಹಿಸಿದೆ. ಜನರ ಸಂಕಷ್ಟಗಳಿಗೆ ಹಾಗೂ ಆಶೋತ್ತರಗಳಿಗೆ ಸ್ಪಂದಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜೀವಿಶಾಸ್ತ್ರ ಮತ್ತು ಪರಿಸರ, ಪ್ರವಾಸೋದ್ಯಮ ಸಚಿವ ಸಚಿವರಾದ ಆನಂದಸಿಂಗ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ  ಮಾತನಾಡಿದರು. ವಿವಿಧ ಮುಖಂಡರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು