NEWSರಾಜಕೀಯ

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಮೇಕೆದಾಟುವಿನಿಂದ ಬೆಂಗಳೂರಿಗೆ ಪಾದಯಾತ್ರೆ: ಸಿದ್ದರಾಮಯ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಡಿಸೆಂಬರ್ ಮೊದಲ ವಾರದಲ್ಲಿ ಮೇಕೆದಾಟುವಿನಿಂದ ಬೆಂಗಳೂರು ವರೆಗೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಪಾದಯಾತ್ರೆ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಮೇಕೆದಾಟು ಯೋಜನೆಯನ್ನು ರೂಪಿಸಿ, ಯೋಜನಾ ವರದಿಯನ್ನು ಸಿದ್ಧಪಡಿಸಿತ್ತು. ಕೇಂದ್ರ ಬಿಜೆಪಿ ಸರ್ಕಾರ ಅನುಮತಿ ನೀಡದ ಕಾರಣಕ್ಕೆ ಯೋಜನೆ ಜಾರಿ ಸಾಧ್ಯವಾಗಿರಲಿಲ್ಲ ಎಂದರು.

ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ. ಸಮುದ್ರದ ಪಾಲಾಗುತ್ತಿರುವ ಹೆಚ್ಚುವರಿ ನೀರನ್ನು ನಾವು ಸದ್ಬಳಕೆ ಮಾಡಿಕೊಂಡರೆ ಅವರಿಗೇನು ತೊಂದರೆ ಎಂದು ಪ್ರಶ್ನಿಸಿದ ಅವರು, ತಮ್ಮ ಪಾಲಿನ ನೀರನ್ನು ಪಡೆಯುವುದಕ್ಕೆ ಮಾತ್ರ ತಮಿಳುನಾಡಿಗೆ ಹಕ್ಕಿರುವುದು ಎಂದು ತಿಳಿಸಿದರು.

ಮೇಕೆದಾಟು ಯೋಜನೆ ಅನುಷ್ಠಾನವಾದ ಮೇಲೆ ಕೂಡ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವು ನ್ಯಾಯಾಲಯದ ಆದೇಶದ ಅನುಸಾರ ತಮಿಳುನಾಡಿನ ಪಾಲಿನ ನೀರನ್ನು ಅವರಿಗೆ ಬಿಡುತ್ತದೆ. ಹೀಗಿದ್ದಾಗ ನಮ್ಮ ರಾಜ್ಯದೊಳಗೆ ನಿರ್ಮಿಸಲು ಉದ್ದೇಶಿಸಿರುವ ಯೋಜನೆಗೆ ತಕರಾರು ಮಾಡಲು ತಮಿಳುನಾಡಿಗೆ ಯಾವುದೇ ಹಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೇಕೆದಾಟು ಯೋಜನೆ ಜಾರಿ ಮಾಡಲು ನಮ್ಮ ರಾಜ್ಯಕ್ಕೆ ಕಾನೂನಾತ್ಮಕ ಸೇರಿದಂತೆ ಎಲ್ಲ ರೀತಿಯ ಹಕ್ಕುಗಳಿವೆ. ಅಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಪರಿಸರ ಇಲಾಖೆಯು ಅನುಮತಿ ಪತ್ರ ನೀಡಬೇಕು ಹಾಗೂ ರಾಜ್ಯ ಸರ್ಕಾರ ಯೋಜನೆ ಅನುಷ್ಠಾನಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ