NEWSಕೃಷಿದೇಶ-ವಿದೇಶ

ರೈತ ವಿರೋಧಿ ಕಾಯ್ದೆಗಳ ವಾಪಸ್‌ಗೆ ಈಗಿನಿಂದಲೇ ಒಗ್ಗಟ್ಟಾಗಿ ಹೋರಾಡೋಣ: ಹರ್ನೇಕ್ ಸಿಂಗ್ ಕರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರೈತರು ಮುಂದಿನ ಬದುಕು ಹಸನಾಗಿ ನೆಮ್ಮದಿಯಿಂದ ಬದುಕಬೇಕಾದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಕೂಡಲೇ ವಾಪಸ್‌ ಪಡೆಯಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ಹರ್ನೇಕ್ ಸಿಂಗ್ ಆಗ್ರಹಿಸಿದ್ದಾರೆ.

ನಗರದ ಗಾಂಧಿ ಭವನದಲ್ಲಿ ಭಾನುವಾರ ಕರ್ನಾಟಕ ಜನಶಕ್ತಿ ಆಯೋಜಿಸಿದ್ದ ಐತಿಹಾಸಿಕ ರೈತಾಂದೋಲನ ಮಂಥನ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರಕಾರ ರೈತರನ್ನು ತುಳಿಯುವ ಕೆಲಸ ಮಾಡುತ್ತಿದೆ. ಇದಕ್ಕೆ ನಾವು ಆಸ್ಪದ ನೀಡಬಾರದು. ಈಗಿನಿಂದಲೇ ಎಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸಿದರೆ, ಈ ಮೂರು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮಾಡಬಹುದು ಎಂದು ತಿಳಿಸಿದರು.

ನಮ್ಮ ಹಿರಿಯ ರೈತ ಮುಖಂಡರು ಮುಂದೊಂದು ದಿನ ರೈತರು ಹಲವು ಸಂಕಷ್ಟಗಳಿಗೆ ಈಡಾಗುತ್ತಾರೆ. ಹೀಗಾಗಿ, ಈಗಿನಿಂದಲೇ ಹೋರಾಟಕ್ಕೆ ಸಜ್ಜಾಗಿ ಎಂದು ಕರೆ ಕೊಟ್ಟಿದ್ದರು. ಅವರು ಹಾಕಿಕೊಟ್ಟ ಮಾರ್ಗದರ್ಶನದಿಂದಲೇ ದಿಲ್ಲಿಯ ಗಡಿಭಾಗದಲ್ಲಿ ಇಂದು ಸಾವಿರಾರು ಸಂಖ್ಯೆಯ ರೈತರು ಹೋರಾಟ ನಡೆಸಲು ಸಾಧ್ಯವಾಗಿದೆ ಎಂದು ಹೇಳಿದರು.

ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದೆಂಬ ಕಾರಣಕ್ಕೆ ದಿನವನ್ನು ದೂಡುತ್ತಿದ್ದಾರೆ. ಆದರೆ, ಅವರಿಗೆ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ. ಸರ್ಕಾರಗಳು ರೈತರ ಸಾಲವನ್ನು ಮನ್ನಾ ಮಾಡದೇ, ರೈತರನ್ನು ಇನ್ನಷ್ಟು ಬಡತನಕ್ಕೆ ನೂಕಲು ಪ್ರಯತ್ನ ಮಾಡುತ್ತಿವೆ ಎಂದು ಕಿಡಿಕಾರಿದರು.

ವಿಶ್ವದ ಎಲ್ಲ ಧರ್ಮಗಳು ಎಲ್ಲರೂ ಒಟ್ಟಾಗಿ ಶಾಂತಿಯಿಂದ ಬದುಕಬೇಕೆಂಬ ಸಂದೇಶವನ್ನು ಸಾರುತ್ತವೆ. ಆದರೆ, ಫ್ಯಾಸಿಸ್ಟ್ ಮನೋಭಾವವುಳ್ಳ ಜನರು ದಲಿತರು, ರೈತರು, ಮಹಿಳೆಯರ ಮೇಲೆ ದೌರ್ಜನ್ಯಗಳನ್ನು ಎಸಗುತ್ತಾರೆ. ಇಂತಹ ಪ್ರಜಾಪ್ರಭುತ್ವ ವಿರೋಧಿಗಳನ್ನು ನಾವು ವಿರೋಧಿಸಬೇಕಾಗಿದೆ ಎಂದರು.

ಈ ಹಿಂದೆ ಕೃಷಿ ಬೆಳೆ ಬಂದರೆ ರೈತರು ಖುಷಿಪಡುತ್ತಿದ್ದರು. ಆದರೆ, ಈಗ ಆ ಪರಿಸ್ಥಿತಿ ಇಲ್ಲವಾಗಿದ್ದು, ಬರೀ ಸಾಲ ತೀರಿಸಲು ದುಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ಅದಾನಿ, ಅಂಬಾನಿ ಅಂತಹ ಉದ್ಯಮಿದಾರರಿಗೆ ಲಾಭ ಮಾಡಿಕೊಡಲು ನಾವು ದುಡಿಯಬೇಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಂಜಾಬ್‍ನಲ್ಲಿ ಒಂದು ಗ್ರಾಮಕ್ಕೆ ಒಬ್ಬ ರಾಜಕೀಯ ನಾಯಕ ಬರಬೇಕೆಂದರೂ ಅಲ್ಲಿಯ ರೈತ ಮುಖಂಡನ ಅನುಮತಿಯನ್ನು ಪಡೆಯಬೇಕು. ಈ ರೀತಿಯ ಬದಲಾವಣೆಗೆ ರೈತರ ಹೋರಾಟವೇ ಪ್ರಮುಖ ಕಾರಣವಾಗಿದೆ. ನಾವು ಕನಿಷ್ಠ ಬೆಂಬಲ ಬೆಲೆಗಾಗಿ ಕಾಯುವಂತಾಗಬಾರದು ನಮ್ಮ ಬೆಳೆಗೆ ನಾವೇ ದರವನ್ನು ನಿಗದಿಪಡಿಸವಂತಾಗಬೇಕೆಂದು ಕರೆ ನೀಡಿದರು.

ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡರಾದ ಕವಿತಾ ಕುರುಗಂಟಿ ಮಾತನಾಡಿ, ಎಪಿಎಂಸಿ ಕಾಯ್ದೆಗೆ 2020ರ ಆಗಸ್ಟ್‌ನಲ್ಲಿ ತಿದ್ದುಪಡಿ ಮಾಡಿ, ಮಾರುಕಟ್ಟೆ ಪ್ರಾಂಗಣದ ಹೊರಗೆ ಮುಕ್ತ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿತ್ತು. ಈಗ ಅವುಗಳ ನಿರ್ವಹಣಾ ವೆಚ್ಚಕ್ಕೂ ಪರದಾಡುವ ಸ್ಥಿತಿ ಎದುರಾಗಿದೆ ಎಂದು ತಿಳಿಸಿದರು.

100ಕ್ಕೆ 1.60 ಇದ್ದ ಸೆಸ್ ಅನ್ನು ಈಗ 60 ಪೈಸೆಗೆ ಇಳಿಸಿರುವುದು ಎಪಿಎಂಸಿಗಳ ಆದಾಯಕ್ಕೆ ತೊಂದರೆಯಾಗಿದೆ. ಅದನ್ನೆ ನಂಬಿಕೊಂಡಿದ್ದ ರೈತರ, ಎಪಿಎಂಸಿ ಹಮಾಲಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.

ದೆಹಲಿಯ ಗಡಿಭಾಗದಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೂ ಭಾಗವಹಿಸಬೇಕು. ಇದರಿಂದ, ಚಳವಳಿಗೆ ಮತ್ತಷ್ಟು ಶಕ್ತಿ ಬರಲಿದೆ ಎಂದು ತಿಳಿಸಿದರು.

ಕರ್ನಾಟಕ ಜನಶಕ್ತಿ ಮುಖಂಡ ಕುಮಾರ್ ಸಮತಳ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ, ಡಾ.ಬಿ.ಸಿ.ಬಸವರಾಜು, ವಿ.ಗಾಯತ್ರಿ, ಟಿ.ಯಶವಂತ್ ಮತ್ತಿತರರು ಇದ್ದರು.

ಇಂದಿನ ಸಂದರ್ಭದಲ್ಲಿ ಮೂರ್ಖರು ಮಾತ್ರ ನೆಮ್ಮದಿಯಿಂದ ನಿದ್ದೆ ಮಾಡಲು ಸಾಧ್ಯ, ಬುದ್ಧಿಯುಳ್ಳವರು ಸುಮ್ಮನಿರಲಾರರು. ಕೃಷಿ ಕಾಯ್ದೆಗಳನ್ನು ವಿರೋಧಿಸದಿರುವವರು ಮೂರ್ಖರ ಪಟ್ಟಿಗೆ ಬರುತ್ತಾರೆ. ರೈತರು ನಿಜವಾಗಲು ಮುಂದಿನ ದಿನಗಳಲ್ಲಿ ಅನುಭವಿಸುವ ಸಂಕಷ್ಟಗಳ ವಿರುದ್ಧ ಇಂದಿನಿಂದಲೇ ಹೋರಾಟ ಮಾಡಬೇಕಿದೆ. ಹೀಗಾಗಿ ಮುಂದಿನ ದಿನಗಳ ನೆಮ್ಮದಿ ಜೀವನಕ್ಕೆ ಇಂದೇ ಸಜ್ಜಾಗೋಣ.

l ಹರ್ನೇಕ್ ಸಿಂಗ್, ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು