NEWSನಮ್ಮರಾಜ್ಯ

ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಭಾರಿ ಅಕ್ರಮ: ಅಭ್ಯರ್ಥಿ ಚನ್ನಪ್ಪ ಗೌಡ ನೆಲ್ಲೂರು ಗಂಭೀರ ಆರೋಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಭಾರಿ ಅಕ್ರಮ ನಡೆಯುತ್ತಿದ್ದು, ಇದನ್ನು ತಡೆಯಲು ಚುನಾವಣಾ ಅಧಿಕಾರಿಗಳು ಮುಂದಾಗದಿದ್ದರೆ ಭ್ರಷ್ಟಾಚಾರಿಗಳು ಜಯಗಳಿಸಿ ಸಂಘವನ್ನು ಹಾಳು ಮಾಡಲಿದ್ದಾರೆ ಎಂದು ಚುನಾವಣೆಗೆ ಸ್ಪರ್ಧಿಸಿರುವ ಆಮ್‌ ಆದ್ಮಿ ಪಕ್ಷದ ಮುಖಂಡ ಚನ್ನಪ್ಪ ಗೌಡ ನೆಲ್ಲೂರು ಆತಂಕ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಕ್ಕಲಿಗರ ಸಂಘದ ಚುನಾವಣೆಯ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ತಿಳಿಯುತ್ತದೆ. ಭಾರಿ ಸಂಖ್ಯೆಯಲ್ಲಿ ನಕಲಿ ಮತದಾರರ ಹೆಸರು ನೋಂದಣಿಯಾಗಿದೆ. ಮತದಾರರ ಪಟ್ಟಿಯಲ್ಲಿ ಹಲವು ಮತದಾರರಿಗೆ ಒಂದೇ ವಿಳಾಸವಿದೆ.

ಇನ್ನು ಕೆಲವರಿಗೆ ವಿಳಾಸವೇ ಇಲ್ಲ. ಕೆಲವು ಮತದಾರರಿಗೆ ಮೊಬೈಲ್‌ ಸಂಖ್ಯೆಯೇ ಇಲ್ಲ. ಕೆಲವು ಮತದಾರರಿಗೆ ತಪ್ಪು ಮೊಬೈಲ್‌ ನಂಬರ್‌ ನಮೂದಿಸಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ತಾಲೂಕುಗಳ ಸಾವಿರಾರು ಮತದಾರರಿಗೆ ಒಂದೇ ಮೊಬೈಲ್‌ ನಂಬರ್‌ ನೀಡಲಾಗಿದೆ” ಎಂದು ಆರೋಪ ಮಾಡಿದರು.

“ಮತದಾರರ ಪಟ್ಟಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ ಊಹಿಸಲೂ ಸಾಧ್ಯವಾಗದಷ್ಟು ಅಕ್ರಮವು ವ್ಯವಸ್ಥಿತವಾಗಿ ನಡೆದಿರುವುದು ಸ್ಪಷ್ಟವಾಗುತ್ತದೆ. ಭ್ರಷ್ಟ ಅಭ್ಯರ್ಥಿಗಳು ಗೆದ್ದರೆ ಸಂಘದ ಘನತೆಗೆ ಧಕ್ಕೆಯಾಗಲಿದೆ, ಚುನಾವಣೆಯಲ್ಲಿ ಅಕ್ರಮ ಎಸಗಿ ಗೆದ್ದು ಬರುವವರು ಒಕ್ಕಲಿಗರ ಹಿತ ಕಾಪಾಡುತ್ತಾರೆಂದು ಹೇಗೆ ತಾನೇ ನಿರೀಕ್ಷಿಸಲು ಸಾಧ್ಯ?

ಚುನಾವಣಾ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಅಕ್ರಮವನ್ನು ಹತ್ತಿಕ್ಕಬೇಕು ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸಬೇಕು. ಈ ಕುರಿತು ಒಕ್ಕಲಿಗರ ಸಂಘದ ಚುನಾವಣಾ ಅಧಿಕಾರಿಗಳು, ಆಡಳಿತಾಧಿಕಾರಿಗಳು ಹಾಗೂ ಸಹಕಾರ ಇಲಾಖೆಯ ಬೆಂಗಳೂರು ಜಿಲ್ಲಾ ನೋಂದಣಾಧಿಕಾರಿಗಳಿಗೆ ಲಿಖಿತ ದೂರ ಸಲ್ಲಿಸಿದ್ದೇನೆ” ಎಂದು ಚನ್ನಪ್ಪ ತಿಳಿಸಿದರು.

ದಿ. ಎಚ್‌.ಎಸ್‌.ದೊರೆಸ್ವಾಮಿಯವರ ನಿಕಟವರ್ತಿ ಹಾಗೂ ಭೂಹೋರಾಟ ಸಮಿತಿಯ ಸಕ್ರಿಯ ಸದಸ್ಯರಾದ ಬಿ.ಎಚ್. ಸುರೇಶ್‌ ಮಾತನಾಡಿ, ಒಕ್ಕಲಿಗರ ಸಂಘದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು ಹಾಗೂ ಸಮುದಾಯದ ಜನರಿಗೆ ನ್ಯಾಯ ಸಿಗಬೇಕೆಂದರೆ ಚುನಾವಣೆಯು ನ್ಯಾಯಯುತವಾಗಿ ನಡೆಯಬೇಕು.

ಸಹಕಾರ ಇಲಾಖೆಯು ತಕ್ಷಣವೇ ಮಧ್ಯಪ್ರವೇಶಿಸಿ ಎಲ್ಲಾ ಅಕ್ರಮಗಳಿಗೆ ಕಡಿವಾಣ ಹಾಕಬೇಕು. ಮತದಾರರ ಪಟ್ಟಿಯಲ್ಲಿರುವ ನಕಲಿ ಮತದಾರರನ್ನು ತೆಗೆದು, ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC