NEWSನಮ್ಮರಾಜ್ಯ

ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಸಹಕಾರ ಅಗತ್ಯ : ನ್ಯಾ.ದೇಶಪಾಂಡೆ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಬಾಲ ಕಾರ್ಮಿಕ ಪದ್ದತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ವಿವಿಧ ಇಲಾಖೆಗಳ ಜೊತೆ ಸಾರ್ವಜನಿಕರ ಸರಕಾರ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ದೇಶಪಾಂಡೆ ಜಿ.ಎಸ್ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿರುವ ನೂತನ ಸಭಾಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡ ಬಾಲಕಾರ್ಮಿಕರ ಸಮೀಕ್ಷಾ ತರಬೇತಿ ಕಾರ್ಯಾಗಾರ, ಕಾನೂನು ಸೇವಾ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೋಟೆಲ್, ವೆಲ್ಡಿಂಗ್ ಶಾಪ್‍ಗಳಲ್ಲಿ ಹೆಚ್ಚಾಗಿ ಬಾಲಕಾರ್ಮಿಕರು ಕಂಡುಬರುತ್ತಿದ್ದಾರೆ. ಬಾಲಕಾರ್ಮಿಕರಾಗಲು ಬಡತನವೇ ಮುಖ್ಯ ಕಾರಣವಾಗಿದ್ದು, ಅಂತಹ ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ಆ ಮಕ್ಕಳಿಗೆ ಶಿಕ್ಷಣ ಕೊಡಿಸುವ ಕೆಲಸವಾಗಬೇಕು.

ಆಟ, ಪಾಠವನ್ನು ಮಾಡುವ ವಯಸ್ಸಿಯಲ್ಲಿ ಕೆಲಸಕ್ಕೆ ಹಚ್ಚುವದರಿಂದ ಆರೋಗ್ಯವಂತರಾಗಿ ಬೆಳೆಯಲು ಸಾಧ್ಯವಾಗುವದಿಲ್ಲ. ಆದ್ದರಿಂದ ಬಾಲಕಾರ್ಮಿಕ ಸಮೀಕ್ಷೆಗೆ ಕಾರ್ಯಾಗಾರ ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಮಾತನಾಡಿ ಬಾಲಕಾರ್ಮಿಕ ಒಂದು ಪಿಡುವಾಗಿ ಪರಿಣಮಿಸಿದ್ದು, ಇದರ ನಿರ್ಮೂಲನೆಗೆ ಎಲ್ಲ ಸಹಕಾರ ಅಗತ್ಯವಾಗಿದೆ ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿ.ಬಿ.ಚೌಕಿಮಠ ಮಾತನಾಡಿ ಬಾಲಕಾರ್ಮಿಕ ಸಮೀಕ್ಷೆ ಕಾರ್ಯ ಮಹತ್ವದ್ದಾಗಿದ್ದು, ಅಂತಹ ಮಕ್ಕಳನ್ನು ಪತ್ತೆ ಹಚ್ಚಿ ರಕ್ಷಣೆ ಮಾಡುವದರ ಜೊತೆಗೆ ಶಾಲೆಗೆ ಕಳುಹಿಸುವ ಕಾರ್ಯವಾಗಬೇಕು. ಕಾನೂನಿನ ಸಾಮಾನ್ಯ ಜ್ಞಾನದ ಅರಿವು ಎಲ್ಲರಿಗೂ ಅಗತ್ಯವಾಗಿದೆ ಎಂದರು.

ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಸರಕಾರ ಅನೇಕ ಕಾಯ್ದೆಗಳನ್ನು ಜಾರಿಗೆ ತಂದಿದ್ದು, ಬೀದಿ ನಾಟಕ, ಬಿತ್ತಿಪತ್ರ ಪ್ರದರ್ಶನದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ.

ನಿರ್ಮೂಲನೆಗೆ ಕೇವಲ ಅಧಿಕಾರಿಗಳು ಕೆಲಸ ಮಾಡಿದರೆ ಸಾಲದು ಅವರ ಜೊತೆಗೆ ಸಾರ್ವಜನಿಕರು ಸಹ ಕೈಜೋಡಿಸಿದಲ್ಲಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ. ಎಲ್ಲ ವರ್ಗದ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದರು.

ಬಾಲಾವಸ್ಥೆಯ ಮತ್ತು ಕಿಶೋರಾವಸ್ಥೆಯ ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಹಾಗೂ ಹೊಸ ತಿದ್ದುಪಡಿ ಕಾಯ್ದೆ 2016ರ ಕಲಂ 17 ಹಾಗೂ ಕಲಂ 16ರ ಕುರಿತು ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿ ಜಾಸ್ಮೀನ್ ಕಿಲ್ಲೇದಾರ ಮತ್ತು ಶಾಸಕರ ಮಾದರಿ ಶಾಲೆಯ ಮುಖ್ಯ ಗುರು ಎಸ್.ಬಿ.ಸನತಂಗಿ ತರಬೇತಿ ನೀಡಿದರು.

ಕಾರ್ಯಾಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ, ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಆರ್.ಜಾದವ, ಬಾಲಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕ ಸುಧಾಕರ ಬಡಿಗೇರ ಇತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು