Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲ : ಸಿದ್ದರಾಮಯ್ಯ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರಗಳು ಜನರ ಬದುಕಿನ ಜೊತೆ ಚೆಲ್ಲಾಟವಾಡುತ್ತಿವೆ. ಬಿಜೆಪಿಗರು ತಕ್ಷಣವೇ ತಮ್ಮ ಸುಳ್ಳುಗಳನ್ನು ನಿಲ್ಲಿಸಿ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಇಲ್ಲದಿದ್ದರೆ ಜನರು ಬಿಜೆಪಿಯನ್ನು ನಿಯಂತ್ರಿಸುತ್ತಾರೆ ಎಂದು ಎಚ್ಚರಿಸಿದ್ದಾರೆ.

ನಮ್ಮ ದೇಶವು ಹಿಂದೆಂದೂ ಇಲ್ಲದ ಮಟ್ಟಿಗೆ ಬೆಲೆ ಏರಿಕೆಯ ಬಿಸಿಯಲ್ಲಿ ಬೇಯುತ್ತಿದೆ. ಅಭಿವೃದ್ಧಿ ಹೊಂದುತ್ತಿರುವ ಜಗತ್ತಿನ ಯಾವ ದೇಶವೂ ಅನುಭವಿಸದ ಸಂಕಷ್ಟವನ್ನು ಬಿಜೆಪಿ ಸರ್ಕಾರ ತಂದೊಡ್ಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಪರೀತ ಬೆಲೆಏರಿಕೆ ಮಾಡಿ ನಂತರ ತುಸು ಕಡಿಮೆ ಮಾಡಿದ್ದನ್ನೇ ದೊಡ್ಡ ಸಾಧನೆ ಎಂದು ಹೇಳಿಕೊಂಡು ಬಿಜೆಪಿ ನಾಯಕರು ಓಡಾಡುತ್ತಿದ್ದಾರೆ. ರಾಜಕಾರಣ ಮಾಡುವವರಿಗೂ ಆತ್ಮಸಾಕ್ಷಿ ಎಂಬುದು ಇರಬೇಕಾಗುತ್ತದೆ. ಸರ್ಕಾರಗಳು ಪಂಚೇಂದ್ರಿಯಗಳನ್ನು ಕಳೆದುಕೊಂಡರೆ ಜನ ಬದುಕಲಾಗದ ಸನ್ನಿವೇಶ ಉಂಟಾಗುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಯವರು ಮಾತೆತ್ತಿದರೆ ಕೃಷಿ, ರೈತರ ಕಲ್ಯಾಣ, ಆರೋಗ್ಯ, ನೀರಾವರಿ, ರಸ್ತೆ, ರೈಲ್ವೆಗಳನ್ನು ಅಭಿವೃದ್ಧಿ ಮಾಡಲು, ವಿತ್ತೀಯ ಕೊರತೆ ಕಡಿಮೆ ಮಾಡಲು ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹಾಕುತ್ತಿದ್ದೇವೆ ಅನ್ನುತ್ತಾರೆ. ಇದಂತೂ ಅಪ್ಪಟ ಸುಳ್ಳು.

ಇನ್ನು ಸುಳ್ಳು ಹೇಳುತ್ತಿದ್ದೇವೆ ಎಂದು ಗೊತ್ತಿದ್ದೂ ಬಿಜೆಪಿಯವರು ಜನರ ದಿಕ್ಕು ತಪ್ಪಿಸಲೆಂದೇ ಹೊಸ ಹೊಸ ಸುಳ್ಳುಗಳನ್ನು ಹೊಸೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್, ಡೀಸೆಲ್ ಮೇಲೆ ಸಂಗ್ರಹಿಸಿದ ಹಣದಿಂದಲೇ ದೇಶದ ಆಭಿವೃದ್ಧಿ ಮಾಡುತ್ತಿದ್ದರೆ, 7 ವರ್ಷಗಳಲ್ಲಿ ಮೋದಿಯವರ ಸರ್ಕಾರ ಹೊಸದಾಗಿ 87 ಲಕ್ಷ ಕೋಟಿ ರೂ.ಗಳಷ್ಟು ಸಾಲ ಮಾಡಿದ್ದು ಯಾಕೆ?

ಇದಷ್ಟೆ ಅಲ್ಲ. ಎಲ್ಲ ಟೋಲ್ ಗೇಟುಗಳಲ್ಲಿ ಶುಲ್ಕ ಯಾಕೆ ಹೆಚ್ಚಿಸಲಾಗಿದೆ? ರೈಲ್ವೆ ಫ್ಲ್ಯಾಟ್ ಫಾರಂ ಶುಲ್ಕ 5 ರೂ. ನಿಂದ 50 ರೂ.ಗೆ ಯಾಕೆ ಏರಿಕೆಯಾಯಿತು? ಕೊರೊನಾ ಔಷಧಗಳ ಮೇಲೂ ಜಿಎಸ್‌ಟಿಯನ್ನು ಯಾಕೆ ವಿಧಿಸಲಾಯಿತು? ಎಂದು ಪ್ರಶ್ನಿಸಿದ್ದಾರೆ.

Leave a Reply

error: Content is protected !!
LATEST
4 ವರ್ಷಕ್ಕೊಮ್ಮೆ ಚೌಕಾಸಿ ನಡೆಸುವ ಬದಲು 7ನೇ ವೇತನ ಆಯೋಗ ಜಾರಿಮಾಡಿ: ನೌಕರರ ಸೇನೆ ಆಗ್ರಹ ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ 2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್ KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌