ಬೆಂಗಳೂರು: ರಾಜ್ಯ ದಲ್ಲಿ ಮಳೆಯಿಂದ ತೊಂದರೆಗೆ ಒಳಗಾಗಿರುವ ರೈತರ ಬೆಳೆಗಳನ್ನು ತಕ್ಷಣ ಸಮರ್ಪಕವಾಗಿ ಸಮೀಕ್ಷೆ ಮಾಡಿಸಿ, ಪರಿಹಾರ ನೀಡಬೇಕು ಎಂದು ಒತ್ತಾಯಿಸಿಮುಖ್ಯ ಮಂತ್ರಿ ಬಸವರಾಜಬೊಮ್ಮಾಯಿ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದ ರಾಮಯ್ಯ ಪತ್ರ ಬರೆದಿದ್ದಾರೆ.
‘ಕೃಷಿ ಇಲಾಖೆಯಮಾಹಿತಿಯ ಪ್ರಕಾರ, ವ್ಯಾ ಪಕ ಮಳೆಯಿಂದಾಗಿ ಅಕ್ಟೋ ಬರ್ ಅಂತ್ಯ ದ ವೇಳೆಗೆ 11.22 ಲಕ್ಷ ಹೆಕ್ಟೇ ರ್ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟ ವಾಗಿದೆ. ಆದರೆ, ಸರ್ಕಾರ ಕೈ ಕಟ್ಟಿ ಕುಳಿತಿದೆ. ನಷ್ಟ ವಾಗಿರುವ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡುವುದಾಗಲಿ, ಪರಿಹಾರ ನೀಡುವುದನ್ನಾಗಲಿ ಮಾಡುತ್ತಿಲ್ಲಎಂದು ಪತ್ರ ದಲ್ಲಿ ದೂರಿದ್ದಾರೆ.
ಮಳೆಯಿಂದಾಗಿ ಕೊಯಿಲಿಗೆ ಬಂದ ಬೆಳೆಗಳು ಹೊಲ ಗದ್ದೆಗಳಲ್ಲೆ ಕೊಳೆತು ಹೋಗುವಂತಾಗಿದೆ. ವಾಡಿಕೆಯಂತೆ ರಾಜ್ಯ ದಲ್ಲಿ 69.79 ಲಕ್ಷ ಹೆಕ್ಟೇ ರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತದೆ. ಕಳೆದ ವರ್ಷಮುಂಗಾರಿನಲ್ಲಿ ವಾಡಿಕೆಗಿಂತ ಸುಮಾರು 8 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಮಾಡಲಾಗಿತ್ತು.
ಅಂದರೆ, 77.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಮಾಡಲಾಗಿತ್ತು . ಕಳೆದ ಬಾರಿಗಿಂತ ಈ ಬಾರಿ 1.07 ಲಕ್ಷ ಹೆಕ್ಟೇ ರ್ ಪ್ರದೇಶದಲ್ಲಿ ಹೆಚ್ಚಾಗಿ ಬಿತ್ತನೆಯಾಗಿದೆ. ರಾಗಿ, ಭತ್ತ , ಮುಸುಕಿನಜೋಳ, ತೊಗರಿ, ಹತ್ತಿ , ಮೆಣಸಿನ ಕಾಯಿ, ಶೇಂಗಾ, ಹೆಸರು, ಉದ್ದು ಮುಂತಾದವುಗಳ ಕೊಯಿಲಿನ ಕೆಲಸ ನಡೆಯುತ್ತಿದೆ.
ಆದರೆ ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾದ ಮಳೆ ಇನ್ನೂ ನಿಂತಿಲ್ಲ. ಆರಂಭದಲ್ಲಿ ಬಿತ್ತನೆ ಮಾಡುವಾಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟ ಕಾರಣ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಬಿತ್ತನೆ ಬೀಜಗಳು ಸರಿಯಾಗಿ ಹುಟ್ಟಲಿಲ್ಲ.
ಆನಂತರ ಸರಿಯಾದ ಸಮಯಕ್ಕೆ ರಸಗೊಬ್ಬರ ಸಿಗಲಿಲ್ಲ. ಇಷ್ಟರ ನಡುವೆಯೂ ರೈತರು ಕಷ್ಟಪಟ್ಟು ಬೆಳೆಗಳನ್ನು ಬೆಳೆದಿದ್ದಾರೆ. ಆದರೆ ವ್ಯಾ ಪಕವಾಗಿ ಸುರಿಯುತ್ತಿರುವ ಮಳೆ ಕಾರಣದಿಂದ ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ ಎಂದೂ ಹೇಳಿದ್ದಾರೆ.
ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಅಡಿಕೆ, ಕಾಫಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳು ಹಲವು ರೀತಿಯ ಸಮಸ್ಯೆ ಗಳನ್ನು ಎದುರಿಸುತ್ತಿವೆ. ಕೊಳೆ ರೋಗದ ಜೊತೆಗೆ ಅಡಿಕೆಗೆ ಹಳದಿ ಎಲೆ ರೋಗ ಬಂದಿದೆ.
ಮೆಣಸಿನ ಬಳ್ಳಿಗಳು ಕೊಳೆತುಹೋಗುತ್ತಿವೆ. ಕಾಫಿಯೂಕೊಳೆ ರೋಗದ ಸಮಸ್ಯೆ ಎದುರಿಸುತ್ತಿದೆ. ಆದರೆ, ಕೃಷಿ ಇಲಾಖೆಯಮಾಹಿತಿಗಳಲ್ಲಿ ಕಳೆದ ಒಂದೂವರೆ ತಿಂಗಳಿಂದ ಅತಿ ಹೆಚ್ಚು ಮಳೆ ಬಿದ್ದು ಹಾನಿಯಾಗಿರುವ ಜಿಲ್ಲೆ ಗಳಮಾಹಿತಿ ಇಲ್ಲ . ಮಲೆನಾಡು, ಕರಾವಳಿ ಜಿಲ್ಲೆ ಗಳ ಅಡಿಕೆ, ಮೆಣಸು, ಕಾಫಿಗೆ ಆಗಿರುವ ನಷ್ಟದ ಮಾಹಿತಿಯೂ ಇಲ್ಲ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಿಕ್ಕ ಬಳ್ಳಾ ಪುರ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ ಮುಂತಾದ ಜಿಲ್ಲೆಗಳಲ್ಲಿ ಬೆಳೆದ ರಾಗಿ, ಭತ್ತ, ಮುಸುಕಿನಜೋಳದ ಬೆಳೆಗಳಿಗೆ ಆಗಿರುವ ನಷ್ಟದ ಕುರಿತು ಸಮೀಕ್ಷೆಯೆ ನಡೆಸಿಲ್ಲ.
ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಜಿಲ್ಲೆಗಳ ಬೆಳೆಗಳಲ್ಲಿ ಜುಲೈ ತಿಂಗಳಿಂದ ಸುರಿಯುತ್ತಿರುವ ಮಳೆಯಿಂದ ರೈತರು ಭಾರಿ ಸಮಸ್ಯೆ ಎದುರಿಸುತ್ತಿದ್ದಾರೆ. ಅನೇಕ ಕಡೆ ಬರದ ಸಮಸ್ಯೆಯೂ ಇದೆ. ಕೇಂದ್ರ ಸರ್ಕಾರವೂ ಕೂಡ ಸಮರ್ಪಕ ಪರಿಹಾರ ನೀಡುತ್ತಿಲ್ಲ.
2019–20, 2020–21ರ ವರ್ಷಗಳಲ್ಲಿ ಸುಮಾರು 1.5 ಲಕ್ಷ ರೂ.ಗಳಿಂದ 2 ಲಕ್ಷ ಕೋಟಿ ರೂ.ಗಳ ನಷ್ಟವಾಗಿತ್ತು. ಕೇಂದ್ರ 2019–20ರಲ್ಲಿ 1,652.85 ರೂ., 2020–21ರಲ್ಲಿ 1,328.30 ಕೋಟಿ ರೂ. ಮಾತ್ರ ಬಿಡುಗಡೆಮಾಡಿದೆ. ಅಂದರೆ, ಕೇವಲ 2981.15 ಕೋಟಿ ರೂ.ಬಿಡುಗಡೆಮಾಡಿದೆ. 2021– 22ರ ನಷ್ಟ ಕ್ಕೆ ನಯಾಪೈಸೆ ನೀಡಿಲ್ಲ . ಕೇಂದ್ರ ಮತ್ತು ರಾಜ್ಯ ಗಳೆರಡೂಈ ರೀತಿ ನಿರ್ಲಕ್ಷ್ಯ ತೋರಿಸುವುದು ಅತ್ಯಂ ತ ಅಮಾನವೀಯ ನಡವಳಿಕೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನವೆಂಬರ್ ತಿಂಗಳ ಮಧ್ಯಭಾಗದಲ್ಲೂ ರಾಜ್ಯದ ಹಲವೆಡೆ ನಿರಂತರ ಮಳೆ ಬೀಳುತ್ತಿರುವ ಕಾರಣ ಅಡಿಕೆ, ಭತ್ತ, ಜೋಳ, ಕಾಫಿ, ಕರಿಮೆಣಸು ಬೆಳೆದ ರೈತರು ಬೆಳೆನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಈ ಕೂಡಲೆ ಸಮರ್ಪಕವಾಗಿ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕೆಂದು @CMofKarnataka ಅವರನ್ನು ಆಗ್ರಹಿಸುತ್ತೇನೆ. pic.twitter.com/uLjTVcuhqX
— Siddaramaiah (@siddaramaiah) November 11, 2021