NEWSನಮ್ಮಜಿಲ್ಲೆನಮ್ಮರಾಜ್ಯ

ವಜಾಗೊಂಡ ಸಾರಿಗೆ ನೌಕರರು ಲೇಬರ್‌ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಉಳಿದಿರುವುದು ಒಂದೇದಿನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಏಪ್ರಿಲ್‌ನಲ್ಲಿ ನಡೆದ ಮುಷ್ಕರದ ವೇಳೆ ಸೇವೆಯಿಂದ ವಜಾ ಆಗಿರುವ ಎಲ್ಲಾ ಅಂದರೆ ಟ್ರೈನಿಯವರನ್ನು ಒಳಗೊಂಡಂತೆ ವಜಾ ಆದ ನೌಕರರು ಲೇಬರ್‌ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ಇನ್ನು ಎರಡು ಒಂದು ದಿನ ಮಾತ್ರ ಉಳಿದಿದೆ. ಹೀಗಾಗಿ ಪ್ರತಿಯೊಬ್ಬರೂ ಶೀಘ್ರದಲ್ಲೇ ದಾವೆ ಹೂಡಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಮನವಿ ಮಾಡಿದೆ.

ನವೆಂಬರ್‌ 13ರ ಒಳಗಾಗಿ ಲೇಬರ್‌ ಕೋರ್ಟ್‌ನಲ್ಲಿ ಪ್ರಕರಣದ ಸಂಬಂಧ ಅರ್ಜಿ ಸಲ್ಲಿಸಬೇಕಿದ್ದು, ಸೇವೆಯಿಂದ ವಜಾಗೊಂಡಿರುವ ಅಂದರೆ ಈಗ ಕೋರ್ಟ್‌ ಮೊರೆ ಹೋಗಿರುವವರನ್ನು ಹೊರತುಪಡಿಸಿ ಉಳಿದ ಪ್ರತಿಯೊಬ್ಬರೂ ವಜಾ ಮಾಡಿರುವ ವಿರುದ್ಧ ವಕಾಲತ್ತುಹಾಕಬೇಕಿದೆ.

ಜತೆಗೆ ಕಳೆದ ತಿಂಗಳಲ್ಲಿ ವಜಾ ಆದ ನೌಕರರು ಸೇರಿದಂತೆ ಎಲ್ಲರೂ ಅರ್ಜಿ ಸಲ್ಲಿಸಿ. ನಾವು ಶನಿವಾರ ಲೋಕ ಆದಾಲತ್‌ಗೆ ದಿನಾಂಕ ನಿಗದಿ ಪಡಿಸುತ್ತೇವೆಂದು ಸಾರಿಗೆ ಸಚಿವರು, ನಿಗಮಗಳ ಅಧ್ಯಕ್ಷರು ತಿಳಿಸಿದ್ದಾರೆ.

ಇನ್ನು ಪ್ರಮುಖವಾಗಿ ಕೋರ್ಟ್‌ನಲ್ಲಿ ದಾವೆ ಹೂಡದ ನೌಕರರ ಪ್ರಕರಣವನ್ನು ಪರಿಗಣಿಸುವುದಿಲ್ಲ. ಹೀಗಾಗಿ ಪ್ರತಿಯೊಬ್ಬರೂ ಲೇಬರ್‌ಕೋರ್ಟ್‌ನಲ್ಲೇ ಮೊದಲು ಅರ್ಜಿ ಸಲ್ಲಿಸುವಂತೆ ತಿಳಿಸಿದ್ದಾರೆ.

ವಕಾಲತ್‌ಗೆ ಬೇಕಾಗಿರುವ ದಾಖಲೆಗಳು: ಎಸ್‌ಪಿ, ಡಿಸ್ಮಿಸ್‌ ಕಾಪಿ, ಮೇಲ್ಮನವಿ ಪ್ರಾಧಿಕಾರಕ್ಕೆ ಸಲ್ಲಿಸಿರುವ ಕಾಪಿ, ಮೇಲ್ಮನವಿ ಪ್ರಾಧಿಕಾರ ತಿರಸ್ಕರಿಸಿರುವ ಕಾಪಿ, ಎರಡು ತಿಂಗಳ ವೇತನ ಪಟ್ಟಿ, ಆಧಾರ್‌ ಕಾರ್ಡ್‌, ಸಂಸ್ಥೆ ನೌಕರರಿಗೆ ಕೊಟ್ಟಿರುವ ಉಚಿತ ಪಾಸ್‌ ಕಾಪಿಯ 2-2 ನಕಲು (ಝರೆಕ್ಸ್‌) ಪ್ರತಿಗಳನ್ನು ಕೋರ್ಟ್‌ಗೆ ಸಲ್ಲಿಸಬೇಕಿದೆ.

Leave a Reply

error: Content is protected !!
LATEST
ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ...