NEWSನಮ್ಮಜಿಲ್ಲೆನಮ್ಮರಾಜ್ಯ

ಕೆಎಸ್‌ಆರ್‌ಟಿಸಿ:  ಪ್ರಯಾಣಿಕರು ಮೊಬೈಲ್‌ಗಳಲ್ಲಿ ಜೋರಾಗಿ ಹಾಡು  ಹಾಕಿದರೆ ಬಸ್‌ನಿಂದ ಔಟ್‌ !

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇನ್ನು ಮುಂದೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಉಪಯೋಗಿಸುವ ಪ್ರಯಾಣಿಕರು ಜೋರಾಗಿ ಹಾಡುಗಳನ್ನು ಹಾಕಿದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಮೊಬೈಲ್ ದೂರವಾಣಿ ಮೇಲೆ ಬಹಳಷ್ಟು ಅವಲಂಬಿತರಾಗಿದ್ದಾರೆ. ಅದರ ಜತೆಗೆ ಕುಂತಲ್ಲಿ ನಿಂತಲ್ಲಿ  ಕೆಲವರು ಜೋರಾಗಿ ಮೊಬೈಲ್‌ಗಳಲ್ಲಿ ಹಾಡು, ನ್ಯೂಸ್‌ ಇತರ ಚಟುವಟಿಗಳನ್ನು ನಡೆಸುತ್ತಿದ್ದಾರೆ. ಇದರಿಂದ ಹಲವರಿಗೆ ಕಿರಿಕಿರಿಯಾಗುತ್ತಿದೆ.

ಹೀಗಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಒಂದು ಮಹತ್ವದ ಆದೇಶ ಹೊರಬಿದ್ದಿದ್ದು,  ಬಸ್‌ನಲ್ಲಿ ಮೊಬೈಲ್ ದೂರವಾಣಿ ಮೂಲಕ ಜೋರಾಗಿ ಹಾಡು, ಪದ್ಯ, ವಾರ್ತೆ, ಸಿನಿಮಾ ಇತ್ಯಾದಿ ಹಾಕುಚಂತಿಲ್ಲ ಎಂದು ತಿಳಿಸಿದೆ.

ಇದರಿಂದ ಶಬ್ದ ಮಾಲನ್ಯ ಹಾಗೂ ಬಸ್‌ನಲ್ಲಿ ಪ್ರಯಾಣಿಸುವ ಇತರೆ ಸಹ ಪ್ರಯಾಣಿಕರಿಗೆ ತೊಂದರೆವುಂಟಾಗುತ್ತಿರುವುದು ಮನಗೊಂಡು ಸಾರಿಗೆ ಇಲಾಖೆ ಈ ಆದೇಶ ಹೊರಡಿಸಿದೆ.

ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಿಂದ ಹೊರಡಿಸಿದ ಸುತ್ತೋಲೆ ಸಂಬಂಧ ಸಾರ್ವಜನಿಕ ಸಾರಿಗೆಗಳಲ್ಲಿ ಶಬ್ದಮಾಲನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಉಚ್ಚನ್ಯಾಯಾಲಯದಲ್ಲಿ ದಾಖಲಾಗಿದೆ.

ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 , ನಿಯಮ 94 ( 1 ) ( V ) ನ್ನು ಉಲ್ಲಂಘಿಸಿ ನಿಗಮದ ಬಸ್‌ಗಳಲ್ಲಿ ಪ್ರಯಾಣಿಕರು ಮೊಬೈಲ್ ಮೂಲಕ ಜೋರಾಗಿ ಶಬ್ದ ಹೊರಸೂಸುವಂತೆ ಹಾಡು, ಪದ್ಯ, ವಾರ್ತೆ, ಸಿನಿಮಾ ಇತ್ಯಾದಿ ಹಾಕುವುದರಿಂದ ಶಬ್ದಮಾಲಿನ್ಯ ಉಂಟಾಗುತ್ತಿದೆ ಹೀಗಾಗಿ ಜೋರಾಗಿ ಹಾಡು, ಪದ್ಯ, ವಾರ್ತೆ, ಸಿನಿಮಾ ಇತ್ಯಾದಿ ಹಾಕುವುದನ್ನು ಕಡ್ಡಾಯವಾಗಿ ನಿರ್ಬಂಧಿಸಿದೆ.

ಈ ಸಂಬಂಧ ಕರ್ತವ್ಯ ನಿರತ ಚಾಲಕರು ಹಾಗೂ ನಿರ್ವಾಹಕರು ಪ್ರಯಾಣಿಕರಿಗೆ ಸೂಕ್ತ ತಿಳಿವಳಿಕೆ ನೀಡಿ ಹಾಗೂ ಹೆಚ್ಚಾಗಿ ಶಬ್ದ ಬರುವಂತೆ ಹಾಗೂ ಸಹಪ್ರಯಾಣಿಕರಿಗೆ ತೊಂದರೆಯಾಗುತ್ತಿರುವಂತೆ ಮೊಬೈಲ್ ದೂರವಾಣಿ ಬಳಸುತ್ತಿದ್ದು ಆ ರೀತಿ ಬಳಸದಂತೆ ವಿನಂತಿಸಬೇಕು.

ಒಂದು ವೇಳೆ ಆ ಪ್ರಯಾಣಿಕ ವಿನಂತಿಗೆ ಮನ್ನಣೆ ನೀಡದೇ ಕರ್ನಾಟಕ ಮೋಟಾರು ವಾಹನಗಳ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ಕಂಡಲ್ಲಿ , ಅಂಥ ಪ್ರಯಾಣಿಕರನ್ನು ಚಾಲಕ ಅಥವಾ ನಿರ್ವಾಹಕರು ನಿಗಮದ ಬಸ್‌ನಿಂದ ಇಳಿಸಬಹುದು ಅಂತಹ ಪ್ರಯಾಣಿಕರಿಗೆ ಪ್ರಯಾಣ ದರವನ್ನು ಹಿಂತಿರುಗಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ