CrimeNEWSನಮ್ಮರಾಜ್ಯ

ಕಾಯ್ದೆ-ಕಾನೂನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ನ್ಯಾ. ಯಾದವ ವನಮಾಲಾ ಆನಂದರಾವ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಸಮಾಜದ ಸುವ್ಯವಸ್ಥೆ ಕಾಪಾಡಲು ಕಾಯ್ದೆ-ಕಾನೂನುಗಳನ್ನು ಜಾರಿಗೆ ತರಲಾಗಿದೆ. ಅವುಗಳನ್ನು ಪಾಲಿಸುವುದರೊಂದಿಗೆ ಗೌರವಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಯಾದವ ವನಮಾಲಾ ಆನಂದರಾವ್ ಹೇಳಿದರು.

ಅಗಡಿ ಗ್ರಾಮದಲ್ಲಿ ಗುರುವಾರ ಸಂಜೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಪೊಲೀಸ್ ಇಲಾಖೆ , ತಾಲೂಕ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ 25ನೇ ವರ್ಷಾರಂಭದ ಪ್ರಯುಕ್ತ ಆಯೋಜಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾನೂನು ಎಂದರೆ ಒಳ್ಳೆಯದನ್ನು ಗೌರವಿಸುವುದು ಹಾಗೂ ಕೆಟ್ಟದ್ದನ್ನು ಖಂಡಿಸುವುದಾಗಿದೆ. ಯಾವುದೇ ವಿಷಯದಲ್ಲಿ ಅನ್ಯಾಯವಾದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದಿಂದ ನೆರವು ಪಡೆಯಬಹುದಾಗಿದ್ದು, ಕಾನೂನಿನ ನೆರವು ಹಾಗೂ ಸಹಾಯ ಒದಗಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸೋಮಶೇಖರ ಜಿ.ಮುಳ್ಳಳ್ಳಿ ಮಾತನಾಡಿ, ನಿತ್ಯ ಜೀವನಕ್ಕೆ ಬೇಕಾಗುವ ಕಾಯ್ದೆ-ಕಾನೂನುಗಳನ್ನು ತಿಳಿದುಕೊಂಡು ಇತರರಿಗೂ ತಿಳಿವಳಿಕೆ ನೀಡಬೇಕು. ಕಾನೂನಿನಲ್ಲಿ ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತಿ ಅಧ್ಯಕ್ಷೆ ಸಂಗೀತಾ ತೆರೆದಳ್ಳಿ ಮಾತನಾಡಿ, ದೌರ್ಜನ್ಯಕ್ಕೆ ಒಳಗಾಗದ ಮಹಿಳೆಯರು ಧೈರ್ಯವಾಗಿ ಕಾನೂನಿನ ನೆರವು ಪಡೆದುಕೊಳ್ಳುವ ಮೂಲಕ ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಡಿವೈಎಸ್‍ಪಿ ಶಂಕರ ಮಾರಿಹಾಳ ಅವರು ಮಾತನಾಡಿ, ಇಂದು ಸೈಬರ್‍ಕ್ರೈಮ್ ಅಪರಾಧಗಳು ಹೆಚ್ಚಾಗಿದ್ದು, ಆಧುನಿಕ ಯುಗದಲ್ಲಿ ಅತ್ಯಂತ ಜಾಗೃತರಾಗಿ ಯಾವುದೇ ಆಶೆ-ಆಮೀಷಗಳಿಗೆ ಒಳಗಾಗದೇ ಕಾನೂನಿನ ಚೌಕಟ್ಟಿನೊಳಗೆ ವ್ಯವಹರಿಸಬೇಕು ಎಂದು ಹೇಳಿದರು.

ಕಾನೂನು ಸೇವೆಗಳ ಪ್ರಾಧಿಕಾರದ ದ್ಯೇಯೋದ್ದೇಶಗಳ ಕುರಿತು ಉಪನ್ಯಾಸ ನೀಡಿದ ಹಿರಿಯ ನ್ಯಾಯವಾದಿ ಜಿ.ಕೆ ಕಮ್ಮಾರ ಅವರು, ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರು, ಮಾನಸಿಕ ನ್ಯೂನ್ಯತೆ ಹೊಂದಿದವರು ಕಾನೂನು ಸೇವೆ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದರೆ ಕಾನೂನಿನ ನೆರವು ಒದಗಿಸಲಾಗುವುದು ಎಂದರು.

ಲೋಕ್ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ 60 ದಿನದೊಳಗಾಗಿ ಬಗೆಹರಿಸಲಾಗುವುದು ಹಾಗೂ ಉಭಯ ಪಕ್ಷಗಾರರ ಹಿತಕಾಪಾಡಲಾಗುವುದು. ಇಂದೊಂದು ಸುವರ್ಣಾವಕಾಶವಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪುಟ್ಟರಾಜು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಎಸ್.ಐ.ನಂದಿ, ಪಿಡಿಒ ರುಬೀನ ದೊಡ್ಡಮನಿ ಇತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ