ಪಿಯುಸಿ, ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನಕ್ಕೆ ಆಹ್ವಾನ
ಬೆಂಗಳೂರು: ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ ಎಂದು ಒಕ್ಕೂಟ ಟ್ರಸ್ಟ್ ಅಧ್ಯಕ್ಷ ಸಿ.ವಿ. ದೇವರಾಜ್ ತಿಳಿಸಿದ್ದಾರೆ.
2020- 21 ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಪಡೆದ ಒಕ್ಕಲಿಗ ಹಾಗೂ ಇತರೆ ಜನಾಂಗದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಡಿಸೆಂಬರ್ ತಿಂಗಳಿನಲ್ಲಿ ಸನ್ಮಾನಿಸಲಾಗುವುದು.
ಹೀಗಾಗಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ತಮ್ಮ ಪಿಯುಸಿ, ಎಸ್ಸೆಸ್ಸೆಲ್ಸಿ ಅಂಕಪಟ್ಟಿ ಮತ್ತು ವರ್ಗಾವಣೆ ಪತ್ರದ ಜೆರಾಕ್ಸ್ ಪ್ರತಿಯನ್ನು ಅಂಚೆ ವಿಳಾಸ, ಮೊಬೈಲ್ ನಂಬರ್ ಹಾಗೂ ಪಾಸ್ಪೋರ್ಟ್ ಅಳತೆಯ ಒಂದು ಭಾವಚಿತ್ರದೊಂದಿಗೆ ಡಿಸೆಂಬರ್ 15ರೊಳಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಈ ವಿಳಾಸಕ್ಕೆ ಸಲ್ಲಿಸಲು ಕೋರಲಾಗಿದೆ.
ಅಂಚೆ ಮೂಲಕ: ಸಿ.ವಿ. ದೇವರಾಜ್ ಅಧ್ಯಕ್ಷರು, ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್, ನಂ. 151 ಶ್ರೀವಾರಿ ಕಾಂಪ್ಲೆಕ್ಸ್, 5ನೇ ಮುಖ್ಯ ರಸ್ತೆ, ಚಾಮರಾಜಪೇಟೆ ಬೆಂಗಳೂರು -560 018.
ಹೆಚ್ಚಿನ ವಿವರಗಳಿಗೆ ಸಿ.ವಿ. ದೇವರಾಜ್ (ಮೊ: 9535 504 176), ಆರ್. ಸುರೇಶ್ (ಮೊ: 98863 3808) ಮತ್ತು ಬಿ. ಪ್ರದೀಪ್ (ಮೊ: 9880 2928 10) ಇವರನ್ನು ಸಂಪರ್ಕಿಸಬಹುದು.