Breaking NewsNEWSದೇಶ-ವಿದೇಶ

MSRTC ಸಾರಿಗೆ ನೌಕರರ ಪ್ರಕರಣ : ನ.22ಕ್ಕೆ ಮುಂದೂಡಿದ ಮುಂಬೈ ಹೈ ಕೋರ್ಟ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ
  • ನೌಕರರಿಗೆ ಎಲ್ಲಿಯವರೆಗೆ ನ್ಯಾಯ ಸಿಗುವುದಿಲ್ಲವೋ ಅಲ್ಲಿಯವರೆಗೂ ಮುಷ್ಕರ ಮಾಡಲು ಅವಕಾಶ ನೀಡಿದ ನ್ಯಾಯಾಲಯ

ಮುಂಬೈ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (MSRTC) ನೌಕರರು ರಾಜ್ಯ ಸರ್ಕಾರದೊಂದಿಗೆ ನಿಗಮವನ್ನು ವಿಲೀನಗೊಳಿಸುವಂತೆ ಒತ್ತಾಯಿಸಿ ಕಳೆದ 18 ದಿನಗಳಿಂದ ನಡೆಸುತ್ತಿರುವ ಮುಷ್ಕರ ಕೊನೆಗೊಳ್ಳುವ ಸಾಧ್ಯತೆ ಕಾಣಿಸುತ್ತಿಲ್ಲ. ಈ ನಡುವೆ ಇಂದು (ನ.15) ಬಾಂಬೆ ಹೈಕೋರ್ಟ್‌ನಲ್ಲಿ ಮುಷ್ಕರ ಸಂಬಂಧದ ವಿಚಾರಣೆ ನಡೆಯಿತು.

ಹೈಕೋರ್ಟ್‌ನಲ್ಲಿ ನಡೆದ ಎಸ್‌ಟಿ ಮುಷ್ಕರದ ವಿಚಾರಣೆ ವೇಳೆ ಎರಡೂ ಕಡೆಯ ವಕೀಲರು ವಾದ ಪ್ರತಿವಾದ ನಡೆಸಿದರು. ಅದು ತೀವ್ರ ವಾಗ್ವಾದಕ್ಕೂ ತಲುಪಿತು.

ನ್ಯಾಯಾಲಯ ನೀಡಿರುವ ನಿರ್ದೇಶನಗಳನ್ನು ರಾಜ್ಯ ಸರ್ಕಾರ ಪಾಲಿಸುತ್ತಿದೆ. ಅದರಂತೆ, ವಿಲೀನದ ಪ್ರಶ್ನೆಯನ್ನು ಪರಿಗಣಿಸಲು ಸಮಿತಿಯನ್ನು ರಚಿಸಲಾಗಿದೆ. ಆದರೆ, ಕಾರ್ಮಿಕರು ಮುಷ್ಕರ ಮುಂದುವರಿಸಿದ್ದಾರೆ ಎಂದು ನಿಗಮ್‌ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು.

ಈ ವೇಳೆ ನಿಗಮದ ಪರ ವಕೀಲರ ವಾದವನ್ನು ತಳ್ಳಿಹಾಕುವ ಭರದಲ್ಲಿ ಕಾರ್ಮಿಕ ಸಂಘಟನೆಗಳು ರಾಜ್ಯ ಸರ್ಕಾರದ ಸಮಿತಿಗೆ ಆಕ್ಷೇಪ ವ್ಯಕ್ತಪಡಿಸಿದವು. ಈ ಸಮಿತಿಯು ವಿಶ್ವಾಸಾರ್ಹವಲ್ಲ ಮತ್ತು ಕೇವಲ ಸಚಿವರ ಮಾತುಗಳನ್ನಷ್ಟೇ ಪಾಲಿಸಲಿದೆ ಎಂದು ನಾವು ಭಾವಿಸುತ್ತೇವೆ.

ಹೀಗಾಗಿ ಕಾರ್ಮಿಕ ಸಂಘಟನೆಗಳು ಮುಖ್ಯ ಕಾರ್ಯದರ್ಶಿ ಸೀತಾರಾಂ ಕುಂಟೆ ನೇತೃತ್ವದ ಸಮಿತಿಗೆ ಕಾರ್ಮಿಕರ ವಿರುದ್ಧವಾಗಿರುವವರನ್ನು ಸೇರಿಸಬಾರದು ಎಂದು ತಿಳಿಸಿತು. ಅದಕ್ಕೆ ನಿಗಮದ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು.

ಈ ಎರಡೂ ಕಡೆಯ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ಹೊರಡಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 22ಕ್ಕೆ ನಿಗದಿಪಡಿಸಿದೆ.

ನ್ಯಾಯಮೂರ್ತಿಗಳಾದ ಪ್ರಸನ್ನ ವರಾಳೆ ಮತ್ತು ಶ್ರೀರಾಮ ಮೋದಕ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಇಂದು ಮಧ್ಯಂತರ ಆದೇಶ ನೀಡಿದ್ದು, ನಾಳೆ (ನ.16) ನಡೆಯಲಿರುವ ಸಮಿತಿ ಸಭೆಯಲ್ಲಿ ಭಾಗವಹಿಸುವ ಸಂಘಟನೆಗಳು ತಮ್ಮ ಲಿಖಿತ ಹೇಳಿಕೆಯನ್ನು ಸಲ್ಲಿಸಬೇಕು.

ನಂತರ ಸಮಿತಿ ಸಭೆಯ ನಡಾವಳಿಯನ್ನು ರಾಜ್ಯ ಸರ್ಕಾರವು ನ್ಯಾಯಾಲಯಕ್ಕೆ ಸಲ್ಲಿಸಬೇಕು. ನವೆಂಬರ್ 22 ರೊಳಗೆ ಸ್ವ ಇಚ್ಛೆಯಿಂದ ಚಾಲಕರು ಮತ್ತು ನಿರ್ವಾಹಕರು ಕೆಲಸಕ್ಕೆ ಬರುವುದಕ್ಕೆ ಯಾವುದೇ ಅಡ್ಡಿಯಿಲ್ಲ. ಆದರೆ ಬಲವಂತದಿಂದ ನೌಕರರನ್ನು ಕೆಲಸಕ್ಕೆ ಕರೆತರುವ ಕೆಲಸವನ್ನು ನಿಮಗದ ಅಧಿಕಾರಿಗಳು ಮಾಡಬಾರದು ಎಂದು ಪೀಠವು ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಅಲ್ಲದೆ ಸಾರಿಗೆ ನೌಕರರಿಗೆ ಎಲ್ಲಿಯವರೆಗೆ ನ್ಯಾಯ ಸಿಗುವುದಿಲ್ಲವೋ ಅಲ್ಲಿಯವರೆಗೂ ಮುಷ್ಕರ ಮಾಡಲು ಅವಕಾಶ ನೀಡಿದ ನ್ಯಾಯಾಲಯ ಮುಷ್ಕರವು ನ್ಯಾಯಯುತವಾಗಿ ಇರಬೇಕು, ಸಮಾಜದ ಸ್ವಾಸ್ಥ್ಯ ಕದಡಬಾರದು. ಜತೆಗೆ ಯಾರನ್ನು ವೈಯಕ್ತಿಕವಾಗಿ ನಿಂದಿಸಬಾರದು ಎಂದು ಸೂಚನೆ ಹೇಳಿದ್ದು, ಸಂವಿಧಾನದಲ್ಲಿ ಎಲ್ಲರಿಗೂ ಶಾಂತಯುತವಾಗಿ ಪ್ರತಿಭಟಿಸುವ ಹಕ್ಕಿದೆ ಎಂದು ತಿಳಿಸುವ ಮೂಲಕ ನೌಕರರ ಹೋರಾಟ ನ್ಯಾಯ ಸಮ್ಮತವಾಗಿದೆ ಎಂದು ತಿಳಿಸಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ