NEWSಶಿಕ್ಷಣ-ಸಿನಿಪಥ

ಮೈಸೂರಿನ ಶಕ್ತಿಧಾಮದ ಮಕ್ಕಳ ಜವಾಬ್ದಾರಿ ಹೊರಲು ತಮಿಳು ನಟ ವಿಶಾಲ್ ಸಿದ್ಧ: ಪುನೀತ್ ಪತ್ನಿ ಅಶ್ವಿನಿಗೆ ಮನವಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನೋಡಿಕೊಳ್ಳುತ್ತಿದ್ದ  ಮೈಸೂರಿನ ಶಕ್ತಿಧಾಮದ ಮಕ್ಕಳ ಜವಾಬ್ದಾರಿಯನ್ನು ಅವರ ನಿಧನದ ಬಳಿಕ ತಮಿಳು ನಟ ವಿಶಾಲ್ ವಹಿಸಿಕೊಳ್ಳಲು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಬುಧವಾರ  ದಿ. ನಟ ಪುನೀತ್ ರಾಜ್‍ಕುಮಾರ್ ಮನೆಗೆ ಆಗಮಿಸಿದ ವಿಶಾಲ್, ಪುನೀತ್ ಪತ್ನಿ ಅಶ್ವಿನಿ ಬಳಿ ಈ ಬಗ್ಗೆ ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆ ಅಶ್ವಿನಿ ಅವರು ಸ್ವಲ್ಪ ಕಾಲವಕಾಶ ಕೇಳಿದ್ದಾರೆ.

ನಿನ್ನೆ ಶಿವರಾಜ್ ಕುಮಾರ್ ಜತೆ ಮಾತನಾಡಿದ್ದ ವಿಶಾಲ್ ಇಂದು ಪುನೀತ್ ಮನೆಗೆ ಆಗಮಿಸಿ ಶಕ್ತಿಧಾಮದ ಮಕ್ಕಳ ಜವಾಬ್ದಾರಿ ಬಗ್ಗೆ ಅಶ್ವಿನಿ ಜತೆ ಪ್ರಸ್ತಾಪ ಮಾಡಿ ಅನುಮತಿ ಕೇಳಿದರು. ಕೆಲವೇ ದಿನಗಳಲ್ಲಿ ಈ ಬಗ್ಗೆ ತಿಳಿಸುವುದಾಗಿ ಅಶ್ವಿನಿ ಭರವಸೆ ನೀಡಿದರು.

ಶಕ್ತಿಧಾಮದಲ್ಲಿ 1,800 ವಿದ್ಯಾರ್ಥಿಗಳು ಇದ್ದು,  ಅವರ ಎಲ್ಲ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಬಗ್ಗೆ ವಿಶಾಲ್, ಅಶ್ವಿನಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಶಿವಣ್ಣ ಬಳಿಯೂ ಚರ್ಚೆ ನಡೆಸಿದರು. ಇದಕ್ಕೂ ಮುನ್ನ  ಅಪ್ಪು ಸಮಾಧಿ ಬಳಿ ತೆರಳಿದ ವಿಶಾಲ್ ಪೂಜೆ ಸಲ್ಲಿಸಿದರು.

ಪುನೀತ್  ಅವರು 1,800 ಮಕ್ಕಳಿಗೆ ಉಚಿತ ಶಿಕ್ಷಣ, ಅನಾಥಶ್ರಮ, ವೃದ್ಧಾಶ್ರಮ ನಡೆಸುವುದರ ಜೊತೆಗೆ ತಮ್ಮ ಸಾವಿನ ಬಳಿಕವೂ ಕಣ್ಣುಗಳನ್ನು ದಾನ ಮಾಡಿದ್ದಾರೆ. ಇದನ್ನೆಲ್ಲ ನೆನೆಸಿಕೊಳ್ಳುವಾಗ, ಪುನೀತ್ ಇಲ್ಲ ಅನ್ನೋದನ್ನು ಇನ್ನೂ ನಂಬಲು ಆಗುತ್ತಿಲ್ಲ. ಆದರೆ, ಅದೇ ಸತ್ಯ ಎಂದು ವಿಶಾಲ್ ಹೇಳಿದರು.

ಪುನೀತ್ ಅವರಂತಹ ಬಹುಮುಖ ನಟನನ್ನು ನಾವು ಕಳೆದುಕೊಂಡಿದ್ದೇವೆ. ಪುನೀತ್‍ನನ್ನು ನೋಡಿದಾಗ, ನೆನಪಿಸಿಕೊಂಡಾಗ ನನ್ನ ಮನಸ್ಸಿಗೆ ಒಂದು ವಿಷಯ ಬಂತು. ನಿನ್ನ ಗೆಳೆಯನಾಗಿ ಮಾತು ಕೊಡುತ್ತಿದ್ದೇನೆ. ಆ 1,800 ಮಕ್ಕಳಿಗೆ ನಾನು ವಿದ್ಯಾಭ್ಯಾಸ ಕೊಡಿಸುತ್ತೇನೆ. ಮುಂದಿನ ವರ್ಷದಿಂದ ನಿಮ್ಮ ಫೌಂಡೇಷನ್, ನಿಮ್ಮ ಸಮಾಜಸೇವೆಯನ್ನು ನಾನು ಮುಂದುವರಿಸುತ್ತೇನೆ ಎಂದು ಭರವಸೆ ನೀಡಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ