NEWSದೇಶ-ವಿದೇಶನಮ್ಮರಾಜ್ಯ

ಮಾಲಿನ್ಯ ತಡೆಗೆ ಕಠಿಣ ಕ್ರಮ ತೆಗೆದುಕೊಂಡ ದೆಹಲಿ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಾಯು ಮಾಲಿನ್ಯವು ದೆಹಲಿಯಲ್ಲಿ ಮಿತಿ ಮಿರುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ತಡೆಗೆ ದೆಹಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.

ವಾಯುಮಾಲಿನ್ಯ ತಡೆಗೆ ಕಠಿಣ ಕ್ರಮ ಜರುಗಿಸಬೇಕು ಎಂದು ಸುಪ್ರೀಂಕೋರ್ಟ್ ನೀಡಿದ 1 ದಿನ ಗಡುವಿನ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ನೇತೃತ್ವದಲ್ಲಿ ನಡೆದ ದೆಹಲಿ ಸುತ್ತಮುತ್ತಲಿನ 4 ರಾಜ್ಯಗಳ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ದೆಹಲಿ ಸರ್ಕಾರ ಕೈಗೊಂಡಿದೆ.

ದೆಹಲಿ, ರಾಜಸ್ತಾನ, ಹರಿಯಾಣ, ಉತ್ತರಪ್ರದೇಶ ಹಾಗೂ ಪಂಜಾಬ್ ರಾಜ್ಯಗಳ ಸಭೆ ನಡೆದಿದೆ. ಬಳಿಕ ತಡರಾತ್ರಿ ವಾಯು ಗುಣಮಟ್ಟ ಆಯೋಗವು ಮುಂದಿನ ಕೆಲವು ದಿನಗಳ ಮಟ್ಟಿಗೆ ಅನ್ವಯ ಆಗುವಂತೆ ಕೆಲವು ಕ್ರಮ ಪ್ರಕಟಿಸಿದೆ.

ಕೈಗೊಂಡ ನಿರ್ಣಯಗಳು:  ದೆಹಲಿ ಹಾಗೂ ಸುತ್ತಮುತ್ತಲಿನ ವಲಯದಲ್ಲಿ ಮಾಲಿನ್ಯಕಾರಕ ಇಂಧನ ಬಳಕೆ ಉದ್ದಿಮೆಗಳು ಕಾರ್ಯ ನಿರ್ವಹಿಸಕೂಡದು

11 ಉಷ್ಣವಿದ್ಯುತ್ ಸ್ಥಾವರಗಳ ಪೈಕಿ 5 ಮಾತ್ರ ನವೆಂಬರ್ 30ರವರೆಗೆ ಕೆಲಸ ಮಾಡಬೇಕು

ನವೆಂಬರ್ 31ರವರೆಗೆ ಅಗತ್ಯವಸ್ತು ಸಾಗಾಣೆ ಟ್ರಕ್ ಹೊರತುಪಡಿಸಿ ಉಳಿದ ಟ್ರಕ್‍ಗಳ ಪ್ರವೇಶ ನಿಷೇಧ

10 ವರ್ಷಕ್ಕಿಂತ ಹಳೆಯ ಪೆಡ್ರೋಲ್, 15 ವರ್ಷಕ್ಕಿಂತ ಹಳೆ ಡಿಸೇಲ್‍ವಾಹನ ನವೆಂಬರ್ 21ರವರೆಗೆ ಸಂಚಾರ ಮಾಡಬಾರದು

ನವೆಂಬರ್ 21ರವರೆಗೆ ವರ್ಕ್ ಫ್ರಂ ಹೋಮ್‍ಗೆ ಆದ್ಯತೆ. ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿಗೆ ಮಾತ್ರ ಅವಕಾಶವಿರುತ್ತದೆ

ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಇರುತ್ತದೆ

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ