NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಪುನೀತ್‍ರಾಜ್ ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ : ಸಿಎಂ ಬೊಮ್ಮಾಯಿ ಘೋಷಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಿನಿಮಾ ಕ್ಷೇತ್ರದಲ್ಲಿ ಮಾತ್ರವಲ್ಲದೆ ಹಲವಾರು ಕ್ಷೇತ್ರಗಳಲ್ಲಿ ತಮ್ಮ ಸಾಮಾಜಿಕ ಸೇವೆ ಸಲ್ಲಿಸುವ ಮೂಲಕ ಅಭಿಮಾನಿಗಳು ಹಾಗೂ ರಾಜ್ಯದ ಜನರ ಮನಸ್ಸಿನಲ್ಲಿ ಅಜರಾಮರವಾಗಿರುವ ಸ್ಯಾಂಡಲ್‍ವುಡ್ ನಟ ಪುನೀತ್‍ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಮಂಗಳವಾರ ಫಿಲ್ಮ್ ಚೇಂಬರ್ ಆಯೋಜಿಸಿದ್ದ ಪುನೀತ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತವೆ. ಅಪ್ಪು ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡುತ್ತೇನೆ ಎಂದು ತಿಳಿಸಿದರು.

ಇನ್ನು ಮುಖ್ಯವಾಗಿ ಕರ್ನಾಟಕ ರತ್ನ ಪ್ರಶಸ್ತಿ ಈ ಮೂಲಕ ಸಿನಿಮಾ ಕ್ಷೇತ್ರ ಇಬ್ಬರು ಮಹಾನ್‌ ನಾಯಕರಿಗೆ ಅದರಲ್ಲೂ ಒಂದೇ ಕುಟುಂಬದ ಮೇರು ನಾಯಕರು ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ.

ಡಾ.ರಾಜ್‌ ಕುಮಾರ್‌ ಅವರಿಗೆ 1992ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಆ ಸಾಲಿಗೆ ಮತ್ತೆ ಅವರ ಕುಟುಂಬದ ಮತ್ತೊಂದು ರತ್ನ ಕರ್ನಾಟಕ ರತ್ನ ಪ್ರಶಸ್ತಿ ಪಡೆಯುತ್ತಿರುವುದು ರಾಜ್ಯದ ಪ್ರತಿಯೊಬ್ಬರಿಗೂ ಹೆಮ್ಮೆ ಎನಿಸುತ್ತಿದೆ.

ಈ ಕರ್ನಾಟಕ ರತ್ನ ಪ್ರಶಸ್ತಿಯು ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು 1992ರಲ್ಲಿ ಪ್ರಾರಂಭಿಸಲಾಯಿತು. ಒಟ್ಟಾರೆ ಇಲ್ಲಿಯವರೆಗೆ 9 ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.

ನಮ್ಮ ಕರ್ನಾಟಕ ರತ್ನಗಳಿವರು: ಕುವೆಂಪು(ಸಾಹಿತ್ಯ) 1992, ರಾಜಕುಮಾರ್(ಸಿನಿಮಾ) 1992, ಎಸ್. ನಿಜಲಿಂಗಪ್ಪ(ರಾಜಕೀಯ)1999, ಸಿಎನ್‍ರಾವ್(ವಿಜ್ಞಾನ) 2000, ಡಾ.ದೇವಿ ಪ್ರಸಾದ್ ಶೆಟ್ಟಿ(ವೈದ್ಯಕೀಯ) 2001, ಭೀಮಸೇನ್ ಜೋಷಿ(ಸಂಗೀತಾ) 2005, ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ(ಸಮಾಜ ಸೇವೆ) 2007, ದೇ. ಜವರೇಗೌಡ(ಸಾಹಿತ್ಯ) 2008, ವೀರೇಂದ್ರ ಹೆಗ್ಗಡೆ(ಸಮಾಜ ಸೇವೆ) 2009ರಲ್ಲಿ ಕರ್ನಾಟಕ ರತ್ನ ಲಭಿಸಿತ್ತು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ