CrimeNEWSದೇಶ-ವಿದೇಶಸಿನಿಪಥ

ಜೈ ಭೀಮ್ ಸಿನಿಮಾ ನಾಯಕ ನಟ ಸೂರ್ಯಗೆ ಹಲ್ಲೆ, ಜೀವ ಬೆದರಿಕೆ : ಪೊಲೀಸ್‌ ಅಲರ್ಟ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ಜೈ ಭೀಮ್ ಸಿನಿಮಾ  ಸಿನಿಮಾ ದೇಶದಲ್ಲಿ ಭಾರಿ ಸೌಂಡ್‌ ಮಾಡುತ್ತಿದ್ದು, ಈ ನಡುವೆ “ಜೈ ಭೀಮ್” ಚಿತ್ರದ ನಾಯಕ ನಟ ಸೂರ್ಯ ಅವರಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಹಾಕಲಾಗಿದೆ. ಹೀಗಾಗಿ ನಟನ ಮನೆಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಜೈ ಭೀಮ್ ಸಿನಿಮಾದಲ್ಲಿ ತಮಿಳುನಾಡಿನ ವನ್ನಿಯಾರ್ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದಕ್ಕೆ ಸಂಬಂಧಿಸಿದಂತೆ ವನ್ನಿಯಾರ್ ಸಂಘವು ಸಿನಿಮಾ ನಿರ್ದೇಶಕರಿಗೆ ಲೀಗಲ್‌ ನೋಟಿಸ್ ನೀಡಿದೆ. ಜೊತೆಗೆ 5 ಲಕ್ಷ ರೂ. ಪರಿಹಾರಕ್ಕೂ ಆಗ್ರಹಿಸಿದೆ.

ಇದರ ನಡುವೆ ಪಿಎಂಕೆ (ಪ್ರಾದೇಶಿಕ ರಾಜಕೀಯ ಪಕ್ಷ) ನಾಯಕರೊಬ್ಬರು, “ಜೈ ಭೀಮ್” ಸಿನಿಮಾದ ನಟ ಸೂರ್ಯನಿಗೆ ದೈಹಿಕವಾಗಿ ಹಲ್ಲೆ ನಡೆಸಿದವರಿಗೆ 1 ಲಕ್ಷ ರೂ. ನೀಡಲಾಗುವುದು ಎಂದು ಘೋಷಿಸಿದ್ದಾರೆಂದು ಎಎನ್‍ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನಟ ಸೂರ್ಯನಿಗೆ ದೈಹಿಕ ಹಲ್ಲೆ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ, ನಟನ ಮನೆಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ವನ್ನಿಯಾರ್ ಸಮುದಾಯ ತಮಿಳುನಾಡಿನಲ್ಲಿ ಹಿಂದುಳಿದ ವರ್ಗವಾಗಿದೆ. ರಾಜ್ಯದ ಉತ್ತರ ಭಾಗದಲ್ಲಿ ಈ ಸಮುದಾಯ ಪ್ರಬಲವಾಗಿದೆ. ಈ ಸಮುದಾಯಕ್ಕೆ “ಜೈ ಭೀಮ್” ಸಿನಿಮಾದಲ್ಲಿ ಅವಮಾನ ಮಾಡಲಾಗಿದೆ ಎಂಬುದು ವನ್ನಿಯಾರ್ ಸಂಘದವರ ಆರೋಪವಾಗಿದೆ.

“ಜೈ ಭೀಮ್” ತಮಿಳು ಭಾಷೆಯ ಸಿನಿಮಾವಾಗಿದ್ದು, ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗಡೆಯಾಗಿ ಭಾರಿ ಸದ್ದು ಮಾಡುತ್ತಿದೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ