CrimeNEWSಸಿನಿಪಥ

ನಟ ದುನಿಯಾ ವಿಜಯ್‍ ತಂದೆ ವಿಧಿವಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ(81) ಗುರುವಾರ (ಇಂದು) ಬೆಳಗ್ಗೆ ನಿಧನರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ರುದ್ರಪ್ಪ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಎರಡು ದಿನದ ಹಿಂದೆ ದುನಿಯಾ ವಿಜಯ್, ತಂದೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ  ಬೆಳಗ್ಗೆ 7.30ರಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ವಿಜಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಅಪ್ಪನ ಫೋಟೋ ಹಾಕಿ ‘ಮಿಸ್ ಯೂ ಅಪ್ಪ’ ಎಂದು ಬರೆದುಕೊಂಡಿದ್ದಾರೆ. ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ವಿಜಯ್ ತಂದೆಯ ಅಂತ್ಯಕ್ರಿಯೆ ನಡೆಯಲಿದೆ.

ಕಳೆದ ಜುಲೈನಲ್ಲಿ ವಿಜಯ್  ಅವರ ತಾಯಿ ನಾರಾಯಣಮ್ಮ ನಿಧನರಾಗಿದ್ದರು. ಈ ಕುರಿತು ಸ್ವತಃ ನಟನೇ ತನ್ನ ತಾಯಿ ಜೊತೆಗಿನ ಫೋಟೋ ಹಾಕಿ ‘ಮತ್ತೆ ಹುಟ್ಟಿ ಬಾ ಅಮ್ಮ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ನಾರಾಯಣಮ್ಮ ಅವರ ಅಂತ್ಯಕ್ರಿಯೆ ನಡೆದಿತ್ತು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ