NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಆಗಿದೆ : ಸಚಿವ ಶ್ರೀರಾಮುಲು

ವಿಜಯಪಥ ಸಮಗ್ರ ಸುದ್ದಿ

ಗದಗ: ಕಾಂಗ್ರೆಸ್‌ ನಾಯಕರು ಸುಳ್ಳಿನ ಫ್ಯಾಕ್ಟರಿ ಇದ್ದಂತೆ. ಸತ್ಯಕ್ಕೆ ದೂರವಾದದ್ದನ್ನೇ ಹೆಚ್ಚಚಾಗಿ ಮಾತನಾಡುತ್ತಾರೆ. ಇನ್ನು ಸಿದ್ದರಾಮಯ್ಯ ಅವರು ಹೊಸ ಟ್ರೆಂಡ್ ಆರಂಭಿಸಿದ್ದಾರೆ. ಅವರ ಬೂಟಾಟಿಕೆ ನೋಡುತ್ತಿದ್ದೇವೆ ಜನರಲ್ಲಿ ಗೊಂದಲ ಸೃಷ್ಟಿ ಮಾಡಲು ಮುಂದಾಗಿದ್ದಾರೆ ಎಂದು ಸಚಿವ ಬಿ.ಶ್ರೀರಾಮುಲು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಸ್ವರಾಜ್ ಯಾತ್ರೆ ಮೂಲಕ ಪರಿಷತ್ ಚುನಾವಣೆ ಪ್ರಚಾರ ಮಾಡುತ್ತಿದ್ದೇವೆ. ನಾಲ್ಕು ತಂಡಗಳಲ್ಲಿ ಇಂದಿನಿಂದ ಯಾತ್ರೆ ಆರಂಭವಾಗಲಿದೆ ಎಂದರು.

ಇನ್ನು ಈ ಪರಿಷತ್ ಚುನಾವಣೆಯಲ್ಲಿ ಬರುವ ಬಿರುಗಾಳಿ, ಸುಂಟರಗಾಳಿ ಅಲೆಗೆ ಕಾಂಗ್ರೆಸ್ ಕೊಚ್ಚಿ ಹೋಗುತ್ತದೆ. ಅವರು ಚುನಾವಣೆಗಾಗಿ 2023 ವರೆಗೆ ಕಾಯುವ ಅಗತ್ಯ ಇಲ್ಲ. ಕಾಂಗ್ರೆಸ್‍ಗೆ ಈ ಚುನಾವಣೆಯಲ್ಲೇ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಸಿದ್ದರಾಮಯ್ಯನವರು ಬಿಟ್‍ಕಾಯಿನ್ ಬಗ್ಗೆ ದಾಖಲೆ ಸಲ್ಲಿಸುವುದಾಗಿ ಮೊದಲು ಹೇಳಿದ್ದರು. ಆದರೆ ಇದೀಗ ಆ ರೀತಿ ಹೇಳಿಲ್ಲ ಎನ್ನುತ್ತಿದ್ದಾರೆ. ಅವರಲ್ಲೇ ಹೊಂದಾಣಿಕೆ ಇಲ್ಲ, ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಆಗಿದೆ ಎಂದು ವ್ಯಂಗ್ರಯವಾಡಿದರು.

ಸಿದ್ದರಾಮಯ್ಯ, ಪರಮೇಶ್ವರ್, ಡಿಕೆಶಿ ಅಂತಾ ಮೂರು ಬಾಗಿಲು ಆಗಿದ್ದಾರೆ. ಮೊದಲು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದರು.

ಬಿಟ್ ಕಾಯಿನ್ ಪ್ರಕರಣ ಕುರಿತು ಕುರಿತು ಮಾತನಾಡಿ, ಕೇವಲ ರಾಜಕೀಯಕ್ಕಾಗಿ ಬಿಜೆಪಿ ವಿರುದ್ಧ ಆರೋಪ ಮಾಡುವುದಕ್ಕೆ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ. ಬಿಟ್ ಕಾಯಿನ್ ಆರೋಪಿಯನ್ನು ಅರೆಸ್ಟ್ ಮಾಡಿ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ಇಡಿ, ಎನ್ಫೋರ್ಮೆಂಟ್‍ ತನಿಖೆಗೆ ವಹಿಸಲಾಗಿದೆ ಎಂದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ