CrimeNEWSದೇಶ-ವಿದೇಶ

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (MSRTC) ನೌಕರ ಆತ್ಮಹತ್ಯೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬುಲ್ಧಾನ/ಅಕೋಲಾ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (MSRTC) 29 ವರ್ಷದ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಖಾಮಗಾಂವ್ ತಾಲೂಕಿನ ಮತರಗಾಂವ್ ನಿವಾಸಿ ವಿಶಾಲ್ ಅಂಬಲ್ಕರ್ ಮಂಗಳವಾರ ರಾತ್ರಿ ತನ್ನ ಮನೆಯಲ್ಲಿ ವಿಷ ಸೇವಿಸಿದ್ದು, ಅವರನ್ನು ಅಕೋಲಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾರೆ ಎಂದು ಖಮಗಾಂವ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ಅಂಬಲ್ಕರ್ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಬುಧವಾರ ರಾತ್ರಿ ಅವರ ಆರೋಗ್ಯ ಸ್ಥಿತಿ ಇನಷ್ಟು ಬಿಗಡಾಯಿಸಿತು. ಅವರನ್ನು ಉಳಿಸಿಕೊಳ್ಳಲು ಅಕೋಲಾದ ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರು ಸತತ ಪ್ರಯತ್ನಪಟ್ಟು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಇಲ್ಲಿಯವರೆಗೆ 38 ಮಂದಿ ಎಂಎಸ್‌ಆರ್‌ಟಿಸಿ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರದೊಂದಿಗೆ ಎಂಎಸ್‌ಆರ್‌ಟಿಸಿಯನ್ನು ವಿಲೀನಗೊಳಿಸಬೇಕು ಎಂದು ಆಗ್ರಹಿಸಿ  ಅನಿರ್ದಿಷ್ಟಾವಧಿ ಮುಷ್ಕರ ನಿರತ ನೌಕರರೊಂದಿಗೆ ಮಾತನಾಡಲು ಸರ್ಕಾರ ಮುಂದಾಗಿಲ್ಲ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ