CrimeNEWSನಮ್ಮಜಿಲ್ಲೆನಮ್ಮರಾಜ್ಯ

ಮಂಡ್ಯದಲ್ಲಿ ಇಬ್ಬರು ಅಫೀಮು ಪೆಡ್ಲರ್‌ಗಳ ಸೆರೆ – ದಂಧೆಕೋರರಿಗೆ ವಿದ್ಯಾರ್ಥಿಗಳೇ ಟಾರ್ಗೆಟ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಹೆರಾಯಿನ್, ಅಫೀಮುಗಳನ್ನು ಮಾರಾಟ ಮಾಡುತ್ತಿದ್ದ ಬೆಂಗಳೂರು ಮೂಲದ ಇಬ್ಬರು ಮಾದಕವಸ್ತುಗಳ ದಂಧೆಕೋರರನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಡ್ರಗ್ಸ್ ಪ್ರಕರಣ ಹೆಚ್ಚಾಗಿದ್ದು, ಪೊಲೀಸರು ಫುಲ್ ಅಲರ್ಟ್ ಆಗಿರುವ ಹಿನ್ನೆಲೆ ಪಕ್ಕದ ಮಂಡ್ಯ ಜಿಲ್ಲೆಯತ್ತ ಮಾದಕವಸ್ತುಗಳ ದಂಧೆಕೋರರು ಮುಖ ಮಾಡಿದ್ದಾರೆ.

ಇಲ್ಲಿ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಹೆರಾಯಿನ್, ಅಫೀಮುಗಳನ್ನು ಮಾರಾಟ ಮಾಡುತ್ತಿದ್ದು, ಇದರಿಂದ ಮಂಡ್ಯದ ಯುವ ಪೀಳಿಗೆ ಮಾದಕವಸ್ತುಗಳ ವ್ಯಸನಿಗಳಾಗುತ್ತಿದ್ದರು. ಈ ಬಗ್ಗೆ ಸಾರ್ವಜನಿಕರಿಂದ ಎಸ್‍ಪಿ ಕಚೇರಿಗೆ ಹಾಗೂ ಪೊಲೀಸ್ ಠಾಣೆಗಳಿಗೆ ಪದೇಪದೆ ದೂರುಗಳು ಬರುತ್ತಿದ್ದವು.

ಈ ಹಿನ್ನೆಲೆ ಮಂಡ್ಯ ಪೊಲೀಸರು ಹೆರಾಯಿನ್, ಅಫೀಮು ಮಾರಾಟ ಮಾಡುವವರನ್ನು ಬಂಧಿಸಲು ಬಲೆ ಬೀಸಿದ್ದರು. ಇತ್ತೀಚೆಗೆ ಮಂಡ್ಯದ ಚರ್ಚ್ ರಸ್ತೆ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು.

ಅದನ್ನು ಗಮನಿಸಿದ ಪೊಲೀಸರು ಆ ಇಬ್ಬರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ. ಆ ವೇಳೆ ಈ ಇಬ್ಬರು ಹೆರಾಯಿನ್ ಹಾಗೂ ಅಫೀಮು ಪೆಡ್ಲರ್‌ಗಳು ಎಂದು ತಿಳಿದಿದೆ.

ಇನ್ನೂ ತೀವ್ರತರವಾದ ವಿಚಾರಣೆ ಮಾಡಿದಾಗ, ನಾವು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಹೆರಾಯಿನ್ ಹಾಗೂ ಅಫೀಮು ಅನ್ನು ಮಾರಾಟ ಮಾಡುತ್ತಿದ್ದೇವೆ ಎಂದು ಬಾಯಿ ಬಿಟ್ಟಿದ್ದಾರೆ. ಈ ಬಂಧಿತರಿಂದ 6 ಲಕ್ಷ ಮೌಲ್ಯದ ಹೆರಾಯಿನ್, 75 ಸಾವಿರ ಮೌಲ್ಯದ ಅಫೀಮುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ ಈ ಮಾದಕವಸ್ತುಗಳ ಮಾರಾಟಗಾರರು ಇನ್ನೂ ಇರಬಹುದು ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದು, ಅವರ ಸೆರೆಗೂ ಬಲೆ ಬೀಸಿದ್ದಾರೆ. ಓಟ್ಟಾರೆ ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ಮಾರಾಟ ಕದ್ದು ಮುಚ್ಚಿ ಭಾರಿ ಜೋರಾಗೆ ನಡೆಯುತ್ತಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ