Please assign a menu to the primary menu location under menu

NEWSಕೃಷಿನಮ್ಮರಾಜ್ಯರಾಜಕೀಯ

ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ ಮುನ್ನವೇ ಮಳೆ ಸಂಕಷ್ಟಕ್ಕೀಡು ಮಾಡಿದೆ. ಬೆಳೆದ ಬೆಳೆ ಕಣ್ಮುಂದೆಯೇ ಕೊಚ್ಚಿಹೋಗುತ್ತಿದೆ. ನಾಡಿಗೆ ಅನ್ನ ಕೊಡುವ ಅನ್ನದಾತ ಆಪತ್ತಿನಲ್ಲಿದ್ದಾನೆ ಆದರೂ ಸರ್ಕಾರ ಅವರ ನೇರವಿಗೆ ದಾವಿಸದಿರುವುದು ದುರ್ದೈವದ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಮಾಧ್ಯಮಗಳಿಗೆ ಅಧಿಕಾರಿಗಳೇ ನೀಡಿರುವ ಮಾಹಿತಿಯಂತೆ ಜುಲೈ-ನವೆಂಬರ್‌ʼನಲ್ಲಿ 7.31 ಲಕ್ಷ ಹೆಕ್ಟೇರ್‌ ಅಥವಾ ಅದಕ್ಕಿಂತ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ಮಳೆ ಪಾಲಾಗಿದೆ. ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆ ಸೇರಿ ರಾಜ್ಯದ ಉದ್ದಗಲಕ್ಕೂ ಮಳೆಯ ರುದ್ರನರ್ತನ ಮುಂದುವರಿದೆ.

ಇದರಿಂದ ಸಾವಿರಾರು ಕೋಟಿ ರೂ. ಮೌಲ್ಯದ ಬೆಳೆ ನಾಶವಾಗಿದೆ. ಚಿಕ್ಕಮಗಳೂರು, ಕೊಡಗಿನಲ್ಲಿ ಕಾಫಿ ತೋಟಗಳು ಪೂರ್ಣ ನಾಶವಾಗಿವೆ. ಬಯಲುಸೀಮೆ ಜಿಲ್ಲೆಗಳಲ್ಲಿ ಮಳೆ ಪ್ರಳಯವನ್ನೇ ಸೃಷ್ಟಿಸಿದೆ. ಕೆರೆಕಟ್ಟೆಗಳು ಒಡೆದುಹೋಗಿ ಗ್ರಾಮಗಳಿಗೆ ಸಂಪರ್ಕವೇ ತಪ್ಪಿಹೋಗಿದೆ. ಹಳ್ಳಿಗಳು ನಡುಗಡ್ಡೆಗಳಾಗಿವೆ. ತೋಟಗಳು ಕೆರೆಗಳಾಗಿವೆ.

ಕೋಲಾರ ಜಿಲ್ಲೆ ಒಂದರಲ್ಲೇ ಅತಿ ಹೆಚ್ಚು ಬೆಳೆ ನಾಶವಾಗಿದೆ. ಮಾಧ್ಯಮಗಳಿಗೆ ಅಧಿಕಾರಿಗಳೇ ಕೊಟ್ಟಿರುವ ಮಾಹಿತಿಯಂತೆ ಆ ಒಂದು ಜಿಲ್ಲೆಯಲ್ಲೇ 34,447 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಯನ್ನು ಮಳೆ ನುಂಗಿದೆ. 14 ಜಿಲ್ಲೆಗಳಲ್ಲಿ 48,000 ಹೆಕ್ಟೇರ್‌ʼಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಫಸಲು ರೈತರ ಕೈಗೆ ಸಿಕ್ಕಿಲ್ಲ.

ಕರ್ನಾಟಕದ ರೈತರು ಇಷ್ಟು ದೊಡ್ಡ ಸಂಕಷ್ಟಕ್ಕೆ ಹಿಂದೆಂದೂ ಸಿಲುಕಿರಲಿಲ್ಲ. ಈ ವಿಷಯದಲ್ಲಿ ರಾಜ್ಯ ಸರಕಾರ ಮಾಡಿರುವುದೇನು? ಸಚಿವರು ಎಲ್ಲಿದ್ದಾರೆ? ಅಧಿಕಾರಿಗಳೇನು ಮಾಡುತ್ತಿದ್ದಾರೆ? ಸರಕಾರ ಸಭೆಗಳಿಗೆ ಸೀಮಿತವಾದರೆ ಪ್ರಯೋಜನ ಶೂನ್ಯ. ಅಧಿಕಾರಿಗಳು ಹಳ್ಳಿಗಳತ್ತ ನಡೆಯಲಿ ಎಂದು ಆಗ್ರಹಿಸಿದ್ದಾರೆ.

ಜಿಲ್ಲೆಗಳಿಗೆ ಕೋವಿಡ್‌ ಉಸ್ತುವಾರಿಗಳೆಂದು ನೇಮಕವಾದ ಸಚಿವರು ಎಲ್ಲಿ? ಅನೇಕ ಸಚಿವರಂತೂ ಜಿಲ್ಲೆಗಳ ಕಥೆ ಹಾಗಿರಲಿ, ಅವರ ಕಚೇರಿಗಳಲ್ಲೇ ಪತ್ತೆ ಇಲ್ಲ. ಮುಖ್ಯಮಂತ್ರಿಗಳು ಕೂಡಲೇ ಸಚಿವರನ್ನು ಜಿಲ್ಲೆಗಳಿಗೆ ಅಟ್ಟಬೇಕು. ಮಳೆ-ಬೆಳೆ ಪರಿಹಾರ ಕಾರ್ಯಕ್ರಮಗಳನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇಷ್ಟೆಲ್ಲ ಅನಾಹುತ ಆಗುತ್ತಿದ್ದರೂ ಕೃಷಿ ಸಚಿವರು, ಅವರ ಇಲಾಖೆ ಹಾಗೂ ಕಂದಾಯ ಇಲಾಖೆ ಏನು ಮಾಡುತ್ತಿದೆ? ಈಗಾಗಲೇ ಬೆಳೆ ಹಾನಿ ಬಗ್ಗೆ ಸಮೀಕ್ಷೆ ಮಾಡಲಾಗಿದೆಯಾ? ಬೆಳೆ ವಿಮೆ ಪರಿಸ್ಥಿತಿ ಏನು? ಕಾಟಾಚಾರಕ್ಕೆ ಸರ್ವೇ ಮಾಡಿ ಸಭೆಗಳಲ್ಲಿ ಕಾಲಹರಣ ಮಾಡುವುದು ಬೇಡ ಎಂದು ಹೇಳಿದ್ದಾರೆ.

ಜನಸ್ವರಾಜ್‌ ಯಾತ್ರೆ ಹೆಸರಿನಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ. ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ. ಕೃಷಿ ಕಾಯ್ದೆ ವಾಪಸ್‌ ಪಡೆದೆವು ಎಂದು ಬೀಗುತ್ತಾ ರೈತರ ತಾಳ್ಮೆಯನ್ನು ಪರೀಕ್ಷಿಸಬೇಡಿ. ಸರಕಾರವು ಅಧಿಕಾರ ರಾಜಕಾರಣದಲ್ಲಿ ಮುಳುಗಿ ಮನುಷ್ಯತ್ವ ಮರೆಯಬಾರದು ಎಂದು ಎಚ್ಚರಿಸಿದ್ದಾರೆ.

Leave a Reply

error: Content is protected !!
LATEST
ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ KSRTC: ಶಸ್ತ್ರಚಿಕಿತ್ಸೆ ಗೊಳಗಾದ ಚಾಲಕನಿಗೆ ರಜೆ ಕೊಡದೆ ಗೈರು ಹಾಜರಿಹಾಕಿ 4 ತಿಂಗಳ ವೇತನ ತಡೆಹಿಡಿದ ಅಧಿಕಾರಿಗಳು KSRTC ಮಂಡ್ಯ: ಚಾಲಕನ ಮೇಲೆ ವ್ಯಕ್ತಿ ಹಲ್ಲೆ -ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಯುವ ನಾಯಕತ್ವ ತರಬೇತಿ ಶಿಬಿರ- ವಿಶೇಷ ಶಿಬಿರಗಳಿಂದ ನಾಯಕತ್ವ ಕೌಶಲ್ಯ ವೃದ್ಧಿ ಹೇಮಗಿರಿಯ ಕಲ್ಯಾಣ ವೆಂಕಟರಮಣ ಸ್ವಾಮಿ ಬೆಟ್ಟದಲ್ಲಿ ವೈಕುಂಠ ಏಕಾದಶಿ ಸಂಭ್ರಮ ಜ.19ರ BMTC ಸಂಘದ ಚುನಾವಣೆಯಲ್ಲಿ ಬಳಕೆದಾರ ಸಹಕಾರ ಸಂಘ ಲೂಟಿಕೋರರ ಹೆಡೆಮುರಿ ಕಟ್ಟಿ - ನೊಂದ ನೌಕರರ ಮನವಿ KSRTC ಹಾಸನ ಹೊಸ ಬಸ್‌ ನಿಲ್ದಾಣ: ಬಸ್‌ನಲ್ಲಿ ಮಲಗಿದ್ದ ಚಾಲನಾ ಸಿಬ್ಬಂದಿಗಳ ಮುಖಕ್ಕೆ ಸ್ಪ್ರೇ ಹೊಡೆದು ಕಳವಿಗೆ ಯತ್ನ KSRTC ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರು : ಎಲ್ಲಿ ಬೇಕಾದರೂ ಟ್ರೀಟ್‌ಮೆಂಟ್‌ ಪಡೆಯಿರಿ  KSRTC: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಬಸ್‌ -ಲಾರಿ ನಡುವೆ ಭೀಕರ ಅಪಘಾತ- ನಾಲ್ವರು ಸಾವು, ಬಸ್‌ ಚಾಲಕನ ಸ್ಥಿತಿ ಚಿಂತಾ...