NEWSಕೃಷಿನಮ್ಮಜಿಲ್ಲೆ

ಮಳೆಯ ಅವಾಂತರ- ಆರ್ಥಿಕ ನಷ್ಟ ಅಂದಾಜಿಸಲು ಸಮೀಕ್ಷೆ ನಡೆಸಿ, ಸಮಗ್ರ ವರದಿ ನೀಡಿ: ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ವ್ಯಾಪಕ ಮಳೆಯಿಂದಾಗಿ ಹಲವು ಬೆಳೆಗಳು ಹಾಗೂ ಮನೆಗಳು ಹಾನಿಯಾಗಿದ್ದು, ಆರ್ಥಿಕ ನಷ್ಟವನ್ನು ಅಂದಾಜಿಸುವ ಸಂಬಂಧ ಸಮೀಕ್ಷೆಯನ್ನು ನಡೆಸಿ, ಸಮಗ್ರ ವರದಿಯನ್ನು ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ತೆರಳುವ ವೇಳೆ, ಮಾರ್ಗ ಮಧ್ಯದಲ್ಲಿ ಹೊಸಕೋಟೆ ನಗರಸಭೆ ವ್ಯಾಪ್ತಿಯಲ್ಲಿರುವ ಮಳೆಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ,‌ ಪರಿಶೀಲನೆ ನಡೆಸಿ, ಮಾತನಾಡಿದರು.

ಸ್ಪಷ್ಟವಾದ ವರದಿ ಬಂದ ನಂತರ ಎಷ್ಟು ಪರಿಹಾರ ನೀಡಬೇಕೆಂದು ನಿರ್ಧರಿಸಿ, ಆದ್ಯತೆ ಮೇರೆಗೆ ಅನುದಾನ ಬಿಡುಗಡೆ ಮಾಡಲು ಕ್ರಮವಹಿಸಲಾಗುವುದು ಎಂದರು.

ಹಲವೆಡೆ ಕೃಷಿ ಪ್ರದೇಶಗಳು ನೀರಿನಿಂದ ಮುಳುಗಡೆಯಾಗಿದ್ದು, ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ ಎಂದರಲ್ಲದೆ ಪೂರ್ಣ ಪ್ರಮಾಣದಲ್ಲಿ ಕುಸಿದ ಮನೆಗಳು ಹಾಗೂ ಭಾಗಶಃ ಕುಸಿದು ಬಿದ್ದ ಮನೆಗಳಿಗೆ ಹಾನಿಗನುಸಾರವಾಗಿ ಪರಿಹಾರವನ್ನು ಅಧಿಕಾರಿಗಳು ನೀಡಬೇಕು ಎಂದು ತಿಳಿಸಿದರು.

ಅತಿವೃಷ್ಟಿ ಪರಿಹಾರ ಕಾರ್ಯಕ್ಕೆ ವೇಗವನ್ನು ನೀಡಲು ಚುನಾವಣಾ ನೀತಿ ಸಂಹಿತೆಯಲ್ಲಿ ರಿಯಾಯಿತಿ ನೀಡಲು ಚುನಾವಣಾ ಆಯೋಗಕ್ಕೆ ಪತ್ರವನ್ನು ಬರೆಯಲಾಗಿದ್ದು, ಸಚಿವರು ಮಳೆಬಾಧಿತ ಪ್ರದೇಶಗಳಲ್ಲಿನ ಜನರ ಕಷ್ಟಗಳನ್ನು ಆಲಿಸುವುದರ ಜೊತೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ದಿಮೆಗಳ ಸಚಿವರಾದ ಎನ್.ನಾಗರಾಜು(ಎಂ.ಟಿ.ಬಿ.), ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ