CrimeNEWSನಮ್ಮರಾಜ್ಯ

ಬಿಬಿಎಂಪಿ ಪ್ರಥಮ ದರ್ಜೆ ಸಹಾಯಕ ಮಾಯಣ್ಣ ಮನೆ ಮೇಲೆ ಎಸಿಬಿ ದಾಳಿ: ಭಾರಿ ಪ್ರಮಾಣದ ದಾಖಲೆಗಳು ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ಬೆಂಗಳೂರು ಜಿಲ್ಲಾ ಮಾಜಿ ಅಧ್ಯಕ್ಷ ಹಾಗೂ ಬಿಬಿಎಂಪಿ ನೌಕರ ಮಾಯಣ್ಣ ಅವರ ಮನೆ ಮೇಲೆ ಬುಧವಾರ ಎಸಿಬಿ ದಾಳಿ ನಡೆಸಿದ್ದು, ಈ ವೇಳೆ ಭಾರಿ ಪ್ರಮಾಣದ ದಾಖಲೆಗಳು ಪತ್ತೆಯಾಗಿವೆ.

ಇವರ ಬಗ್ಗೆ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಎಸಿಬಿ ದಾಳಿ ಮಾಡಿ ಜಾಲಾಡುತ್ತಿದೆ.

ಮಾಯಣ್ಣ ಬಿಬಿಎಂಪಿ ರಸ್ತೆ ಹಾಗೂ ಮೂಲಭೂತ ಸೌಕರ್ಯ ವಿಭಾಗದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದಾರೆ. ಇವರು ಬಿಬಿಎಂಪಿ ಎಂಪ್ಲೈಯ್ ಅಸೋಸಿಯೇಷನ್ ಮೂಲಕ ಹಾಗೂ ಸಾಹಿತ್ಯ ಪರಿಷತ್‍ನಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದರು. ಇವರ ಹೆಸರು ಬಿಬಿಎಂಪಿ ನೌಕರಿಗಿಂತ ಹೆಚ್ಚಾಗಿ ಬಿಬಿಎಂಪಿ ಅಕ್ರಮಗಳಲ್ಲೇ ಕೇಳಿ ಬರುತ್ತಿತ್ತು.

11 ವರ್ಷಗಳ ಕಾಲ ಒಂದೇ ಪೋಸ್ಟ್: ಬಿಬಿಎಂಪಿ ಇತಿಹಾಸದಲ್ಲೇ 11 ವರ್ಷಗಳ ಕಾಲ ಒಂದೇ ಪೋಸ್ಟ್‌ ನಲ್ಲಿದ್ದ ಏಕೈಕ ವ್ಯಕ್ತಿ ಮಾಯಣ್ಣ. 2009 ರಿಂದ 11 ವರ್ಷಗಳ ಕಾಲ ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹಲವು ಬಾರಿ ಬಿಬಿಎಂಪಿಯ ಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಿದ್ದರೂ, ಮೇಲಧಿಕಾರಿಗಳಿಂದ ಒತ್ತಡ ತಂದು ಮತ್ತದೇ ಪೋಸ್ಟ್‌ನಲ್ಲಿ ಉಳಿದುಕೊಳ್ಳುತ್ತಿದ್ದರು. ಐದು ವರ್ಷದ ಹಿಂದೆ ಅಮಾನತು ಕೂಡ ಆಗಿದ್ದರು. ಬಳಿಕ ರಿವೋಕ್ ಮಾಡಿಸಿಕೊಂಡು ಮತ್ತದೇ ಹುದ್ದೆಯಲ್ಲೇ ಮುಂದುವರಿದಿದ್ದರು.

ಕೆಲಸಕ್ಕಿಂತ ಬೇರೆ ಬೇರೆ ಡೀಲ್‍ಗಳಲ್ಲೇ ಹೆಚ್ಚು ಬಿಸಿಯಾಗಿರುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. 2012-13 ರಲ್ಲಿ ಕಾನೂನು ಬಾಹಿರವಾಗಿ ಗುತ್ತಿಗೆದಾರರಿಗೆ 135 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದರು. ಜತೆಗೆ 26 ಕೋಟಿ ರೂಪಾಯಿ ಹೆಚ್ಚಿನ ಹಣವನ್ನು ಗುತ್ತಿಗೆದಾರರಿಗೆ ಪಾವತಿಸಿದ್ದರು ಎನ್ನುವುದರ ಬಗ್ಗೆಯೂ ಆರೋಪವಿದೆ.

ಇನ್ನು ಬಿಬಿಎಂಪಿ ಲೆಕ್ಕಪರಿಶೋಧಕ ವರದಿಯಲ್ಲಿ ಮಾಯಣ್ಣ ಅವರ ಅಕ್ರಮ ಬಯಲಾದ ಹಿನ್ನೆಲೆಯಲ್ಲಿ ಅವರ ಸ್ವಂತ ಅಕೌಂಟ್‍ನಿಂದ ಹಣ ವಸೂಲಿ ಮಾಡುವಂತೆ ನಗರಾಭಿವೃದ್ಧಿ ಇಲಾಖೆ ಆದೇಶಿಸಿತ್ತು. ಈಗ ಎಸಿಬಿ ಬಲೆಗೆ ಬಿದ್ದ ಮಾಯಣ್ಣ ಒಟ್ಟಾರೆಯಾಗಿ 135 ಕೋಟಿ ರೂ.ಗಳನ್ನು ಸರ್ಕಾರಕ್ಕೆ ಕಟ್ಟಬೇಕಿದೆ.

ಮಾಯಣ್ಣ ವಿರುದ್ಧ ಸಾಮಾಜಿಕ ಕಾರ್ಯಕರ್ತ ರಾಬರ್ಟ್ ಎಂಬುವವರು ಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ಸೂಚನೆ ಅನ್ವಯ ಮಾಯಣ್ಣರಿಂದ 135 ಕೋಟಿ ವಸೂಲಿ ಮಾಡಬೇಕೆಂದು ನಗರಾಭಿವೃದ್ಧಿ ಇಲಾಖೆಗೆ ಆದೇಶಿಸಲಾಗಿದೆ. ಆದರೆ, ಸರ್ಕಾರದ ಆದೇಶಕ್ಕೆ ಕ್ಯಾರೆ ಅನ್ನದೆ ಮಾಯಣ್ಣ ತಮ್ಮ ಹುದ್ದೆಯಲ್ಲಿ ಮುಂದುವರಿದಿದ್ದರು.

ಬೆಳ್ಳಿ ನಾಣ್ಯ ಗಿಫ್ಟ್: ಮೊನ್ನೆ ನಡೆದ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಮತ ನೀಡಲು ಸದಸ್ಯರಿಗೆ ಬೆಳ್ಳಿ ಕಾಯಿನ್ ಜತೆಗೆ ಹಣದ ಆಮಿಷ ಒಡ್ಡಿದ್ದರು. ಆದರೂ ಚುನಾವಣೆಯಲ್ಲಿ ನಾಲ್ಕನೇ ಸ್ಥಾನ ಪಡೆದು ಸೋಲುಂಡರು.

ಈ ಹಿಂದೆ ಬೆಂಗಳೂರು ನಗರ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಮಾಯಣ್ಣ ಕರ್ತವ್ಯ ನಿರ್ವಹಿಸುತ್ತಿದ್ದರು. ಬಿಬಿಎಂಪಿಯಲ್ಲಿ ಕನ್ನಡ ಸಾಹಿತ್ಯದ ಕಾರ್ಯಕ್ರಮ ಮಾಡಿ ಹಣವನ್ನು ಗುಳುಂ ಮಾಡಿದ್ದಾರೆ ಎಂಬ ಆರೋಪಗಳೂ ಈಗ ಕೇಳಿ ಬರುತ್ತಿವೆ.

ಈ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿದ್ದ ಎಸಿಬಿ ಇಂದು ದಾಳಿ ನಡೆಸಿದ್ದು, ಮಾಯಣ್ಣನ ಅಕ್ರಮ ಆಸ್ತಿಯ ಬಗ್ಗೆ ಹಲವು ದಾಖಲೆಗಳು ಲಭ್ಯವಾಗುತ್ತಿವೆ. ಮಾಯಣ್ಣ ಪತ್ನಿ ಹೆಸರಲ್ಲಿ ಬೆಲೆಬಾಳೋ ಬೆನ್ಜ್ ಹಾಗೂ ಇನ್ನೋವಾ ಕಾರುಗಳಿದೆ. ಮಾಯಣ್ಣ ಕುಣಿಗಲ್, ಮಾಗಡಿ, ಬೆಂಗಳೂರು ಸೇರಿದಂತೆ ಹತ್ತಾರು ಕಡೆ ಇಪ್ಪತ್ತಕ್ಕೂ ಹೆಚ್ಚು ಆಸ್ತಿ-ಪಾಸ್ತಿ ಹೊಂದಿದ್ದಾರೆ. ಅಷ್ಟೇ ಅಲ್ಲದೇ ತನ್ನ ಹೆಂಡತಿ- ಮಕ್ಕಳ ಹೆಸರಲ್ಲೇ ಕೋಟಿ ಕೋಟಿ ರೂ. ಬೆಲೆ ಬಾಳುವ ಆಸ್ತಿ ಮಾಡಿರುವುದು ಪತ್ತೆಯಾಗಿದೆ. ಈ ಎಲ್ಲಾ ದಾಖಲೆಗಳನ್ನು ಚಾಮರಾಜಪೇಟೆಯಲ್ಲಿರುವ ಕಚೇರಿಯಲ್ಲಿ ಶೇಖರಿಸಿ ಇಟ್ಟಿದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...