CrimeNEWSನಮ್ಮರಾಜ್ಯ

ಅಕ್ರಮ ಆಸ್ತಿ ಆರೋಪ: 15 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ- ಚಿನ್ನದ ಬಿಸ್ಕತ್ತು, ನಗ-ನಾಣ್ಯ ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳಿಗೆ ಸಂಬಂಧಿಸಿದ 68 ಕಡೆಗಳಲ್ಲಿ ಎಸಿಬಿ ದಾಳಿ ಭಾರಿ ಸದ್ದು ಮಾಡುತ್ತಿದೆ. ಹೌದು ಬುಧವಾರ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ಮಾಡಿದ್ದು ಅಕ್ರಮ ಸಂಪತ್ತಿನ ಬೆನ್ನ ಹತ್ತಿ ಹೊರಟಿದ್ದಾರೆ. 408 ಎಸಿಬಿ ಅಧಿಕಾರಿಗಳು ಶೋಧ ಕಾರ್ಯದಲ್ಲಿ ತೊಡಗಿದ್ದು ಈ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗ-ನಾಣ್ಯ, ಸಂಪತ್ತು ಅಧಿಕಾರಿಗಳ ಮನೆಯಲ್ಲಿ ಪತ್ತೆಯಾಗಿದೆ.

ಭಾರಿ ಪ್ರಮಾಣ ಸಂಪತ್ತನ್ನು ಕಂಡ ಎಸಿಬಿ ಅಧಿಕಾರಿಗಳೇ ಬೆಚ್ಚಿಬೀಳುವಂತಾಗಿದೆ. ಎಸಿಬಿ ದಾಳಿ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಅಧಿಕಾರಿಗಳ ಮನೆಯಲ್ಲಿ ತೀವ್ರ ಶೋಧ ಕಾರ್ಯ ಮುಂದುವರಿದಿದ್ದು ಸತತ ಮೂರು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ವೇಳೆ ಸರ್ಕಾರದ ಸಿ ಮತ್ತು ಡಿ ಗ್ರೂಪ್ ನೌಕರರಿಗೆ ಸಂಬಂಧಪಟ್ಟ ಅಪಾರ ಪ್ರಮಾಣದ ಅಕ್ರಮ ಆಸ್ತಿಪಾಸ್ತಿಗಳು ಪತ್ತೆಯಾಗಿವೆ ಎನ್ನುವುದು ಅಚ್ಚರಿ ಮೂಡಿಸಿದೆ.

8 ಎಸ್ಪಿಗಳು, 100 ಅಧಿಕಾರಿಗಳು ಮತ್ತು 300 ಸಿಬ್ಬಂದಿಯ ತಂಡದಿಂದ 15 ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ 60 ಸ್ಥಳಗಳಲ್ಲಿ ದಾಳಿ ಮಾಡಿ ಶೋಧ ನಡೆಯುತ್ತಿದೆ.

ಬೆಳಗ್ಗೆಯೇ ದಾಳಿ ಆರಂಭವಾಗಿದ್ದು ಗದಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ಅವರ ಮನೆಯಲ್ಲಿ 7 ಕೆಜಿ ಚಿನ್ನದ ಬಿಸ್ಕತ್ತು, ನಗ-ನಾಣ್ಯ ಸಿಕ್ಕಿದೆ. ಎಸಿಬಿ ಅಧಿಕಾರಿಗಳಿಗೆ ಇವರ ಮನೆಯಲ್ಲಿ 7 ಕೆಜಿಯಷ್ಟು ಚಿನ್ನ, 15 ಲಕ್ಷ ರೂಪಾಯಿ ನಗದು ಸಿಕ್ಕಿದೆ.

ಬೆಂಗಳೂರಿನಲ್ಲಿ ಸಕಾಲ ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಡಿ ಗ್ರೂಪ್ ನೌಕರ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು ಸ್ಮಾರ್ಟ್‌ ಸಿಟಿ ಇಇ ಕೆ.ಎಸ್.ಲಿಂಗೇಗೌಡ, ಮಂಡ್ಯ ಹೆಚ್‌ಎಲ್‌ಬಿಸಿ ಇಇ ಕೆ.ಶ್ರೀನಿವಾಸ್, ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ ಲಕ್ಷ್ಮೀನರಸಿಂಹಯ್ಯ, ಮಾಜಿ ಪ್ರಾಜೆಕ್ಟ್ ಮ್ಯಾನೇಜರ್ ವಾಸುದೇವ್, ಬೆಂಗಳೂರು ನಿರ್ಮಿತಿ ಕೇಂದ್ರದ ಮಾಜಿ ಪ್ರಾಜೆಕ್ಟ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಬಿ.ಕೃಷ್ಣಾರೆಡ್ಡಿ, ಬೆಂಗಳೂರು ನಂದಿನಿ ಡೇರಿಯ ಜನರಲ್ ಮ್ಯಾನೇಜರ್, ಗದಗ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ. ಮಸ್ತಿ ತಂಡದಿಂದ ದಾಳಿ ನಡೆದಿದೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಜೆ.ಇ. ಶಾಂತಗೌಡ ಬಿರಾದಾರ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿ ನಗರದ ಗುಬ್ಬಿ ಕಾಲೋನಿಯಲ್ಲಿನ ಪಿಡಬ್ಲ್ಯುಡಿ ಜೆ.ಇ. ಶಾಂತಗೌಡ ಬಿರಾದಾರ್ ಮನೆ, ಕಚೇರಿ ಮತ್ತು ಯಡ್ರಾಮಿಯಲ್ಲಿರುವ ತೋಟದ ಮನೆಯ ಮೇಲೆ ದಾಳಿ ಮಾಡಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...