NEWSಸಿನಿಪಥ

ಅಂಬರೀಷ್‌ 3ನೇ ವರ್ಷದ ಪುಣ್ಯಸ್ಮರಣೆ: ಇನ್ನೂ ಏನೂ ಮಾಡಿಲ್ಲ ಅನ್ನೋ ಬೇಸರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗೆಳೆಯ ಅಂಬರೀಷ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಸಂದರ್ಭದಲ್ಲಿ ಅವರ ಪುಣ್ಯಭೂಮಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಾಯಿತು ಎಂದು ಸಚಿವ ಎಸ್.ಟಿ. ಸೋಮಶೇಖರ್‌ ತಿಳಿಸಿದ್ದಾರೆ.

ಇಂದು ಅಂಬರೀಷ್ ಅವರ ಮೂರನೇ ವರ್ಷದ ಪುಣ್ಯತಿಥಿ ಹಿನ್ನೆಲೆ ಕಂಠೀರವ ಸ್ಟುಡಿಯೋಗೆ ಬಂದು ಪುಷ್ಪಾರ್ಪಣೆ ಮಾಡಿದ ಅವರು, ಅಂಬರೀಷ್‌ ಅವರೊಂದಿಗಿನ ಸ್ನೇಹವನ್ನು ತಿಳಿಸಿದರು.

ಸಂಸದೆ ಸುಮಲತಾ ಅಂಬರೀಷ್ ಮಾತನಾಡಿ, ಚಂದನವನದ ಹಿರಿಯ ನಟ ಅಂಬರೀಷ್ ಹೆಸರಲ್ಲಿ ಏನೂ ಮಾಡಿಲ್ಲ ಅನ್ನೋ ಬೇಸರ ಅಭಿಮಾನಿಗಳಲ್ಲಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಅಂಬರೀಷ್ ಇಲ್ಲವಾಗಿ 3 ವರ್ಷವಾಗಿದೆ. ಸ್ಮಾರಕ ಸೇರಿ ಎಲ್ಲೂ ಅಂಬರೀಷ್ ಅವರ ಹೆಸರು ಕೇಳಿಬಂದಿಲ್ಲ ಎಂದು ಅಭಿಮಾನಿಗಳ ಬೇಸರದ ಬಗ್ಗೆ ಹೇಳಿದರು.

ಅಭಿಮಾನಿಗಳಿಗೆ ಈ ಬಗ್ಗೆ ನೋವಿದೆ. ಅದಕ್ಕೆ ಹೋರಾಟ ಮಾಡ್ತೀವಿ ಅಂತಿದ್ದಾರೆ. ಆದರೆ ಹೋರಾಟದ ಸಮಯ ಇದಲ್ಲ ಎಂದು ಹೇಳಿದ್ದೀನಿ. ಅಪ್ಪು ಅಗಲಿಕೆಯ ನೋವು ಎಲ್ಲರನ್ನೂ ಕಾಡಿದೆ. ಈ ಸಮಯದಲ್ಲಿ ಹೋರಾಟ ಮಾಡಬಾರದು ಎಂದಿದ್ದೇನೆ ಎಂದರು.

ಅಂಬರೀಷ್ ಅವರು ಯಾವ ಪ್ರಶಸ್ತಿ, ಹೆಸರನ್ನು ಕೇಳಿ ಪಡೆದಿರಲಿಲ್ಲ. ನಾವೂ ಸಹ ಅಂಬರೀಷ್ ಅವರಿಗೆ ಪ್ರಶಸ್ತಿ ಕೊಡಿ, ಅದು ಮಾಡಿ, ಇದು ಮಾಡಿ ಎಂದು ಕೇಳಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅಂಬಿ ತುಂಬಾ ಒಳ್ಳೇಯ ಸ್ನೇಹಿತರಾಗಿದ್ದರು. ಈಗ ಅವರೇ ಸಿಎಂ ಆಗಿರೋದ್ರಿಂದ ಮಾಡ್ತಾರೆ ಅನ್ನೋ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಗ ಅಭಿಷೇಕ್, ರಾಕ್ ಲೈನ್ ವೆಂಕಟೇಶ್, ಅಂಬರೀಷ್ ಅವರ ಅಪಾರ ಅಭಿಮಾನಿಗಳು  3ನೇ ಪುಣ್ಯತಿಥಿ ಹಿನ್ನೆಲೆ ಕಂಠೀರವ ಸ್ಟುಡಿಯೋಗೆ ಬಂದು ನಮನ ಸಲ್ಲಿಸಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...