NEWSನಮ್ಮಜಿಲ್ಲೆ

ಜಲಜೀವನ್ ಮಿಷನ್ ಯೋಜನೆ ಸದ್ಬಳಕೆಯಾಗಲಿ: ಗ್ರಾಪಂ ಅಧ್ಯಕ್ಷ ದೇವೇಂದ್ರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಪ್ರತಿ ಮನೆಗೂ ಕೊಳಾಯಿ ಮೂಲಕ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷೆಯೊಂದಿಗೆ ಜಾರಿಗೆ ಬಂದಿರುವ ಜಲಜೀವನ್ ಮಿಷನ್ ಯೋಜನೆಯನ್ನು ಗ್ರಾಮದ ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಗ್ರಾಪಂ ಅಧ್ಯಕ್ಷ ಎಚ್.ಸಿ.ದೇವೇಂದ್ರ ತಿಳಿಸಿದರು.

ತಾಲೂಕಿನ ಮಾಲಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನಗೊಂಡಿರುವ ಕೊಳಾಯಿಗಳನ್ನು ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರೊಂದಿಗೆ ಪರಿಶೀಲನೆ ನಡೆಸಿ ಮಾತನಾಡಿದರು.

ಸರ್ಕಾರವು 2024 ವೇಳೆಗೆ ದೇಶದ 15.74 ಕೋಟಿ ಗ್ರಾಮೀಣ ಭಾಗದ ಮನೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕು ಎನ್ನುವ ಕನಸನ್ನು ಹೊಂದಿರುವ ಹಿನ್ನೆಲೆಯಲ್ಲಿ ಸರ್ಕಾರದ ಆಶಯವನ್ನು ನನಸು ಮಾಡುವ ನಿಟ್ಟಿನಲ್ಲಿ ಕಾಮಗಾರಿಯನ್ನು ಪರಿಶೀಲಿಸಲಾಗುತ್ತಿದೆ ಎಂದರು.

ಜಲ ಜೀವನ್‌ ಮಿಷನ್‌ ಯೋಜನೆಯಡಿಯಲ್ಲಿ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಆಶ್ರಮ ಶಾಲೆಗಳಲ್ಲಿ ಕೊಳಾಯಿ ನೀರಿನ ಸಂಪರ್ಕವನ್ನು ಒದಗಿಸುವ ವಿಶೇಷ ಅಭಿಯಾನಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುವು ಮಾಡಿಕೊಟ್ಟಿದ್ದು, ಎಲ್ಲಾ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಶೇ.100 ರಷ್ಟು ಗುರಿ ಸಾಧನೆ ಮಾಡಲು ಉದ್ದೇಶಿಸಲಾಗಿದೆ.

ಅಂಗನವಾಡಿ ಕೇಂದ್ರಗಳಲ್ಲಿ ಕುಡಿಯಲು, ಮಧ್ಯಾಹ್ನದ ಊಟದ ತಯಾರಿಗೆ, ಕೈ ತೊಳೆಯಲು ಮತ್ತು ಶೌಚಾಲಯಗಳಲ್ಲಿ ಬಳಸಲು ಕೊಳಾಯಿ ಮೂಲಕ ನೀರು ಒದಗಿಸಲಾಗುತ್ತಿದೆ. ಅಲ್ಲದೆ ಗ್ರಾಮಗಳಲ್ಲಿ ಮಳೆನೀರು ಕೊಯ್ಲು ಮತ್ತು ತ್ಯಾಜ್ಯ ನೀರಿನ ಮರುಬಳಕೆಯನ್ನು ದೊಡ್ಡ ಮಟ್ಟದಲ್ಲಿ ಉತ್ತೇಜಿಸಲಾಗುತ್ತಿದೆ. ಇದರಿಂದ ನೀರಿನ ಭದ್ರತೆ ಹಾಗೂ ಗ್ರಾಮಗಳಲ್ಲಿ ಸುಧಾರಿತ ನೈರ್ಮಲ್ಯಕ್ಕಾಗಿ ನಮ್ಮ ಭವಿಷ್ಯದ ಪೀಳಿಗೆಗೆ ಸಮಗ್ರ ನೀರಿನ ನಿರ್ವಹಣೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಗ್ರಾಪಂ ಸದಸ್ಯರಾದ ಎಂ.ಎಸ್.ಹರೀಶ್, ಅಪ್ಜಲ್, ರವಿ, ಪುಟ್ಟರಾಜು, ಮಾದಯ್ಯ, ಮುಖಂಡರಾದ ಶೋಯಬ್ ತಿಮ್ಮಯ್ಯ, ಮುದ್ದೀರಯ್ಯ, ಜಮೃದ್ದ್ ಪಾಷ, ನಾಗರಾಜು, ಯದು, ಕೃಷ್ಣೇಗೌಡ, ಸ್ವಾಮಿ ಮತ್ತಿತರರು ಇದ್ದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...